ಮೈಸೂರು: ಯೋಗ ನರಸಿಂಹಸಾಮಿ ದೇಗುಲದಿಂದ 2 ಲಕ್ಷ ಲಡ್ಡು ವಿತರಣೆ

100 ಕೆ.ಜಿ ಲವಂಗಗಳನ್ನು ಬಳಸಿ ತಯಾರಿಸಲಾಗಿದೆ

Team Udayavani, Dec 30, 2022, 4:26 PM IST

ಮೈಸೂರು: ಯೋಗ ನರಸಿಂಹಸಾಮಿ ದೇಗುಲದಿಂದ 2 ಲಕ್ಷ ಲಡ್ಡು ವಿತರಣೆ

ಮೈಸೂರು: ಹೊಸ ವರ್ಷದವನ್ನು ಸ್ವಾಗತಿಸಲು ಮೈಸೂರು ನಗ ರದ ಸಜ್ಜಾಗುತ್ತಿದ್ದು, ಪ್ರತಿ ವರ್ಷದ ದಂತೆ ಈ ಬಾರಿಯೂ ವಿಜಯನಗರದ ಯೋಗ ನರಸಿಂಹಸ್ವಾಮಿ ದೇವಸ್ಥಾನ ಭಕ್ತ ರಿ ಗಾಗಿ 2 ಲಕ್ಷ ಲಡ್ಡುಗಳನ್ನು ತಯಾರಿಸಲಾಗುತ್ತಿದೆ.

ಕೊರೊನಾ ಸೋಂಕು ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ಅದ್ಧೂರಿಯಾಗಿ ಹೊಸ ವರ್ಷ ಆಚರಣೆ ಮಾಡಿರಲಿಲ್ಲ. ಈ ಬಾರಿ ಜ.1ರಂದು ದೇವಸ್ಥಾನಕ್ಕೆ ಬರುವ ಭಕ್ತರಿಗೆ ಲಡ್ಡುಗಳನ್ನು ವಿತರಿಸಲಾಗುತ್ತಿದ್ದು, ಅದಕ್ಕಾಗಿ ತಿರುಪತಿ ಮಾದರಿಯ 2 ಲಕ್ಷ ಲಡ್ಡುಗಳು ಸಿದ್ಧವಾಗುತ್ತಿವೆ. ಅಂದು ಮುಂಜಾನೆ 4 ಗಂಟೆ ಯಿಂದ ರಾತ್ರಿ 12 ಗಂಟೆಯವರೆಗೆ ಭಕ್ತಾದಿಗಳಿಗೆ ಲಡ್ಡುಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಯೋಗಾ ನರಸಿಂಗಸ್ವಾಮಿ ದೇಗುಲದ ಸಂಸ್ಥಾಪಕ ಭಾಷ್ಯಂ ಸ್ವಾಮೀಜಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

1994ರಿಂದ ಲಡ್ಡು ವಿತರಿಸುವ ಕಾರ್ಯವನ್ನು ದೇವಸ್ಥಾನದಿಂದ ನಡೆಸಿಕೊಂಡು ಬರಲಾಗಿದ್ದು, ಈ ವರ್ಷವೂ ನೂತನ ವರ್ಷಾರಂಭದ ಅಂಗವಾಗಿ ಜ.1ರ ಬೆಳಗ್ಗೆ 4 ಗಂಟೆಯಿಂದ ಪ್ರಾರಂಭಿಸಿ ಯೋಗಾನರಸಿಂಹಸ್ವಾಮಿ ಯವರಿಗೆ ವಿಶೇಷ ಅಲಂಕಾರ ಮತ್ತು ಶ್ರೀರಂಗಂ, ಮಧುರೆ ಕ್ಷೇತ್ರದಿಂದ ತರಿಸಿರುವ ವಿಶೇಷ ತೋಮಾಲೆ ಮತ್ತು ಸ್ವರ್ಣಪುಷ್ಪದಿಂದ ಶ್ರೀಸ್ವಾಮಿಗೆ ಸಹಸ್ರನಾಮರ್ಚನೆ ಮತ್ತು ದೇವಾಲಯದ ಉತ್ಸವ ಮೂರ್ತಿಯಾದ ಶ್ರೀಮಲಯಪ್ಪನ್‌ ಸ್ವಾಮಿ, ಪದ್ಮಾವತಿ ಮತ್ತು ಮಹಾಲಕ್ಷ್ಮೀ ದೇವರಿಗೆ ದೇವಾಲಯದ ಆವರಣದಲ್ಲಿ ಏಕಾದಶ ಪ್ರಾಕಾರೋತ್ಸವ ಹಾಗೂ 20 ಕ್ವಿಂಟಲ್‌ ಪುಳಿಯೋಗರೆ ನಿವೇದನೆ ಮಾಡಲಾಗುತ್ತಿದೆ. ಜತೆಗೆ ದೇವಾಲಯಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡು ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ತಿರುಪತಿ ಮಾದರಿಯ 2 ಲಕ್ಷ ಲಡ್ಡು: ಈ ವರ್ಷ ಅಂದಾಜು 2 ಸಾವಿರ ಗ್ರಾಂ ತೂಕದ 10 ಸಾವಿರ ಲಡ್ಡುಗಳು ಹಾಗೂ 150 ಗ್ರಾಂ ತೂಕದ 2 ಲಕ್ಷ ಲಡ್ಡುಗಳನ್ನು ದೇವಾಲಯಕ್ಕೆ ಬರುವ ಎಲ್ಲಾ ಭಕ್ತಾದಿಗಳಿಗೆ ಉಚಿತವಾಗಿ ವಿತರಿಸಲಾಗುವುದು. ಲಡ್ಡು ಪ್ರಸಾದವನ್ನು ವಿಶೇಷವಾಗಿ 60 ಮಂದಿ ನುರಿತ ಬಾಣಸಿಗರಿಂದ ತಯಾರಿಸಲಾಗಿದ್ದು, ಡಿ.21ರಿಂದ ಪ್ರಾರಂಭಿಸಿ 31ರವರೆಗೂ ಲಡ್ಡು ತಯಾರಿ ಕಾರ್ಯ ನಡೆಯಲಿದೆ ಎಂದರು.

ಲಡ್ಡುಗೆ ಬಳಸಿರುವ ಸಾಮಗ್ರಿಗಳು
ಲಡ್ಡು ತಯಾರಿಕೆಗೆ 75 ಕ್ವಿಂಟಲ್‌ ಕಡ್ಲೆಹಿಟ್ಟು, 200 ಕಿಂಟಾಲ್‌ ಸಕ್ಕರೆ, 6000 ಲೀಟರ್‌ ಖಾದ್ಯ ತೈಲ, 200 ಕೆ.ಜಿ ಗೋಡಂಬಿ, 200 ಕೆ.ಜಿ ಒಣದ್ರಾಕ್ಷಿ, 100 ಕೆ.ಜಿ ಬಾದಾಮಿ, 500 ಕೆ.ಜಿ ಡೈಮಂಡ್‌ ಸಕ್ಕರೆ, 1000 ಕೆ.ಜಿ ಬೂರಾ ಸಕ್ಕರೆ, 20 ಕೆ.ಜಿ ಪಿಸ್ತಾ, 50 ಕೆ.ಜಿ ಏಲಕ್ಕಿ, 40 ಕೆ.ಜಿ ಜಾಕಾಯಿ ಮತ್ತು ಜಾಪತ್ರೆ, 10 ಕೆ.ಜಿ, ಪಚ್ಚೆ ಕರ್ಪೂರ, 100 ಕೆ.ಜಿ ಲವಂಗಗಳನ್ನು ಬಳಸಿ ತಯಾರಿಸಲಾಗಿದೆ ಎಂದು ತಿಳಿಸಿದರು. ದೇವಸ್ಥಾನದ ಆಡಳಿತಾಧಿಕಾರಿ ಎನ್‌. ಶ್ರೀನಿವಾಸನ್‌ ಸೇರಿದಂತೆ ಇತರರು ಇದ್ದರು.

ಕ್ರೈಸ್ತ ವರ್ಷಾರಂಭದ ಹಿನ್ನೆಲೆಯಲ್ಲಿ ವಿಶ್ವಶಾಂತಿ, ಭ್ರಾತೃತ್ವ ಮತ್ತು ಸರ್ವಧರ್ಮ ಸಮನ್ವಯತೆಗಾಗಿ ಮತ್ತು ನಾಡಿನ ಎಲ್ಲಾ ಜನರ ಒಳಿತಿಗಾಗಿ ಪ್ರಾರ್ಥಿಸಿ ಈ ಲಡ್ಡು ಪ್ರಸಾದ ನಿವೇದನೆ ಮತ್ತು ಭಕ್ತಾದಿಗಳಿಗೆ ವಿನಿಯೋಗ ಕಾರ್ಯಕ್ರಮವನ್ನು ಭಕ್ತರ ಸಹಕಾರದಿಂದ ನೆರವೇರಿಸಲಾಗುತ್ತಿದೆ.
●ಭಾಷ್ಯಂ ಸ್ವಾಮೀಜಿ, ದೇವಸ್ಥಾನದ ಸಂಸ್ಥಾಪಕ

ಹೊಸ ವರ್ಷದಂದು ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಜ.2ರಂದು ವೈಕುಂಠ ಏಕಾದಶಿ ಇರುವುದರಿಂದ ಅಂದು ಮುಂಜಾನೆಯೇ ವೈಕುಂಠ ದ್ವಾರದ ಪ್ರವೇಶ ಕಲ್ಪಿಸಲಾಗುವುದು. ನಾಲ್ಕನೆ ಅಲೆ ಆತಂಕವಿರು ವುದರಿಂದ ಭಕ್ತರು ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
●ಎನ್‌. ಶ್ರೀನಿವಾಸನ್‌, ದೇವಸ್ಥಾನದ ಆಡಳಿತಾಧಿಕಾರಿ

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.