ಪ್ರಾಪರ್ಟಿ ಪರೇಡ್‌ ನಡೆಸಿದ ಮೈಸೂರು ಪೊಲೀಸರು


Team Udayavani, Jul 3, 2019, 3:00 AM IST

property

ಮೈಸೂರು: ಮೈಸೂರು ನಗರದಲ್ಲಿ 2018 ಮತ್ತು 2019ನೇ ಸಾಲಿನಲ್ಲಿ 511ವಿವಿಧ ಸ್ವತ್ತು ಕಳವು ಪ್ರಕರಣಗಳನ್ನು ಪತ್ತೆ ಹಚ್ಚಿರುವ ಪೊಲೀಸರು, 415 ಆರೋಪಿಗಳನ್ನು ಬಂಧಿಸಿ 5.96 ಕೋಟಿ ರೂ. ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಸಿಎಆರ್‌ ಮೈದಾನದಲ್ಲಿ ಮಂಗಳವಾರ ಪ್ರಾಪರ್ಟಿ ಪರೇಡ್‌ ನಡೆಸಿ ವಶಪಡಿಸಿಕೊಂಡಿರುವ ಮಾಲುಗಳನ್ನು ಅವುಗಳ ವಾರಸುದಾರರಿಗೆ ಹಿಂತಿರುಗಿಸಿದರು. 2018ರಲ್ಲಿ ಒಟ್ಟು 621 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 341 ಪ್ರಕರಣಗಳನ್ನು ಪತ್ತೆ ಹಚ್ಚಿ 4.07 ಕೋಟಿ ರೂ. ಮೌಲ್ಯದ ಕಳವು ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.

2019ರಲ್ಲಿ ಒಟ್ಟು 288 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 170 ಪ್ರಕರಣಗಳನ್ನು ಪತ್ತೆ ಹಚ್ಚಿ 1.90 ಕೋಟಿ ರೂ. ಮೌಲ್ಯದ ಕಳವು ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ. 6 ಕೇಜಿ 321 ಗ್ರಾಂ ಚಿನ್ನಾಭರಣ, 8 ಕೇಜಿ ಬೆಳ್ಳಿ ಪದಾರ್ಥ, 211 ದ್ವಿಚಕ್ರ ವಾಹನಗಳು, 27 ಕಾರು ಮತ್ತು ಜೀಪು, 35 ಇತರೆ ವಾಹನಗಳು, 131 ಮೊಬೈಲ್‌ ಫೋನ್‌ಗಳು, 12 ಲ್ಯಾಪ್‌ಟಾಪ್‌, 1.12 ಕೋಟ ರೂ. ನಗದು ಹಾಗೂ 30 ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ನಗರದ ಪ್ರಮುಖ ಕಟ್ಟಡಗಳು, ಮಾಲ್‌ಗ‌ಳು, ವಾಣಿಜ್ಯ ಸಂಕೀರ್ಣಗಳು, ಪೆಟ್ರೋಲ್‌ ಬಂಕ್‌ಗಳು ಮತ್ತು ವಸತಿ ಸಮುತ್ಛಯಗಳು ಹಾಗೂ ಬಡಾವಣೆಗಳಲ್ಲಿ ಖಾಸಗಿಯಾಗಿ ಸಿಸಿಟಿವಿ ಕ್ಯಾಮರಾ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಹಾಗೂ ದುರಸ್ತಿಯಲ್ಲಿರುವ ಸಿಸಿ ಕ್ಯಾಮರಾಗಳನ್ನು ಸರಿಪಡಿಸಿ ಸರಿಯಾದ ದಿಕ್ಕಿಗೆ ಅಳವಡಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.

ನಗರದಲ್ಲಿ ಒಂಟಿಯಾಗಿ ವಾಸವಿರುವ ವಯೋವೃದ್ಧªರ ರಕ್ಷಣೆಗಾಗಿ ಅಭಯ, ನಗರದ ಬಾಡಿಗೆ ಮನೆಗಳಲ್ಲಿ ವಾಸವಿರುವವರ ಮಾಹಿತಿ ಸಂಗ್ರಹಣೆಗೆ ಸುರಕ್ಷಾ ತಂಡ, ಸಂಚಾರ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸರಿಂದ ಜಂಟಿಯಾಗಿ ಮತ್ತು ಅನಿರೀಕ್ಷಿತವಾಗಿ ವಾಹನಗಳ ತಪಾಸಣೆಗೆ ಆಪರೇಷನ್‌ ಚೀತಾ, ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆ ಹೆಚ್ಚಿಸಲಾಗಿದ್ದು, ರಾತ್ರಿ ಗಸ್ತು ಬಿಗಿಗೊಳಿಸಲಾಗಿದೆ.

ದಿನದ 24 ಗಂಟೆಯೂ ನಗರದ ಗಸ್ತು ನಿರ್ವಹಣೆಗೆ 40 ಗರುಡಾ ವಾಹನಗಳು ಮತ್ತು 36 ಚೀತಾ ವಾಹನಗಳನ್ನು ಬಳಕೆ ಮಾಡಲಾಗುತ್ತಿದೆ. ನಗರದ ಪ್ರಮುಖ ಪಾರ್ಕಿಂಗ್‌ ಸ್ಥಳಗಳಲ್ಲಿ ವಾಹನ ಕಳವು ನಿಯಂತ್ರಣ ಮಾಡುವ ಸಂಬಂಧ ಮಫ್ತಿಯಲ್ಲಿ ಪೊಲೀಸ್‌ ಸಿಬ್ಬಂದಿ ನೇಮಕ ಮತ್ತು ನಿಗಾವಹಿಸುವಿಕೆ ಮತ್ತು ವಾಣಿಜ್ಯ ಸಂಕೀರ್ಣಗಳ ಪಾರ್ಕಿಂಗ್‌ ಸ್ಥಳಗಳಲ್ಲಿ ಖಾಸಗಿಯಾಗಿ ಸಿಸಿ ಕ್ಯಾಮರಾಗಳ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಹೊರ ಊರಿಗೆ ಹೋಗುವಾಗ ಈ ಬಗ್ಗೆ ಪೊಲೀಸ್‌ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡುವ ವ್ಯವಸ್ಥೆ ಮಾಡಲಾಗಿದೆ.

ಅರಿವು ಕಾರ್ಯಕ್ರಮ: ಪೊಲೀಸ್‌ ಸಿಬ್ಬಂದಿ ಪ್ರತಿ ತಿಂಗಳು ಎರಡು ಹೊಸ ಬೀಟ್‌ ಸಿಸ್ಟಂ ಸದಸ್ಯರ ಸಭೆ ನಡೆಸುತ್ತಿದ್ದು, ಈ ಸಭೆಗಳಲ್ಲಿ ಸಾರ್ವಜನಿಕರಿಗೆ ಅಪರಾಧ ನಿಯಂತ್ರಣ ಕುರಿತಂತೆ ಅರಿವು ಮೂಡಿಸಲಾಗುತ್ತಿದೆ. ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿ ಠಾಣಾ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಅಪರಾಧ ನಿಯಂತ್ರಣ ಕುರಿತಂತೆ ಅರಿವು ಮೂಡಿಸುತ್ತಿದ್ದಾರೆ. ಜತೆಗೆ ಜನನಿಬಿಡ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಬಡಾವಣೆಗಳಲ್ಲಿ ಪೊಲೀಸ್‌ ವಾಹನಗಳ ಪಬ್ಲಿಕ್‌ ಅಡ್ರೆಸ್ಸಿಂಗ್‌ ಸಿಸ್ಟಂ ಮೂಲಕ ಅಪರಾಧ ನಿಯಂತ್ರಣ ಕುರಿತಂತೆ ಅರಿವು ಮೂಡಿಸಲಾಗುತ್ತಿದೆ.

ವಿಶೇಷ ಸಂದರ್ಭಗಳಲ್ಲಿ ಅಪರಾಧ ನಿಯಂತ್ರಣ ಕುರಿತ ಮಾಹಿತಿಯುಳ್ಳ ಕರಪತ್ರಗಳನ್ನು ಮುದ್ರಿಸಿ ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ. ಜತೆಗೆ ವರದಿಯಾಗಿರುವ ಪ್ರಕರಣಗಳ ಪತ್ತೆಗೆ ಎಸಿಪಿ ಮಟ್ಟದಲ್ಲಿ ತಂಡಗಳನ್ನು ರಚಿಸಿದ್ದು, ತಾಂತ್ರಿಕ ಕೋಶ, ಬೆರಳಚ್ಚು, ಶ್ವಾನದಳ, ಇತರೆ ವೈಜ್ಞಾನಿಕತೆಯನ್ನು ಬಳಕೆ ಮಾಡಿಕೊಂಡು ಪ್ರಕರಣಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಅವರು ವಿವರಿಸಿದರು.

ಕಳ್ಳತನ ತಡೆಗೆ ವಿಶೇಷ ಕಾರ್ಯಾಚರಣೆ: ನಗರದಲ್ಲಿ ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಪೊಲೀಸರು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಸರಗಳ್ಳತನವನ್ನು ನಿಯಂತ್ರಿಸಲು ಬೆಳಗ್ಗೆ 6 ರಿಂದ 9ಗಂಟೆವರೆಗೆ ಹಾಗೂ ಸಂಜೆ 4 ರಿಂದ ರಾತ್ರಿ 9ಗಂಟೆವರೆಗೆ ನಗರದ ಎಲ್ಲಾ ಪ್ರಮುಖ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಿ ಆಪರೇಷನ್‌ ಸನ್‌ರೈಸ್‌ ಮತ್ತು ಸನ್‌ಸೆಟ್‌ ಕಾರ್ಯಾಚರಣೆ ನಡೆಸಲಾಗುವುದು. ಸರಗಳ್ಳತನ ಪತ್ತೆ ಸಂಬಂಧ ಆಪರೇಷನ್‌ ಫಾಸ್ಟ್‌ ಟ್ರಾಕ್‌ ವಿಶೇಷ ಕಾರ್ಯಾಚರಣೆ. ಪೊಲೀಸರು ಸಾರ್ವಜನಿಕರಂತೆ ವರ್ತಿಸಿ, ಸ್ವತ್ತು ಕಳವು ಪ್ರಕರಣಗಳ ಆರೋಪಿಗಳನ್ನು ಪತ್ತೆ ಹಚ್ಚಲು ಆಪರೇಷನ್‌ ಡಿಕಾಯ್‌ ಕಾರ್ಯಾಚರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.