ಮಹಾನಗರ ಪಾಲಿಕೆ ಬಜೆಟ್‌ ಮಂಡನೆಗೆ ಅಸ್ತು


Team Udayavani, Apr 19, 2022, 3:24 PM IST

Untitled-1

ಮೈಸೂರು: ಮೈಸೂರು ಮಹಾನಗರ ಪಾಲಿಕೆ 2022-23ನೇ ಬಜೆಟ್‌ ಮಂಡನೆಗೆ ಮೂರು ಪಕ್ಷಗಳು ಸಮ್ಮತಿ ಸೂಚಿಸಿದ್ದು, ಏ.28ರಂದು ಪಾಲಿಕೆ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷರು ಬಜೆಟ್‌ ಮಂಡಿಸಲಿದ್ದಾರೆ.

ನಗರ ಪಾಲಿಕೆ ಹಳೆ ಕೌನ್ಸಿಲ್‌ ಸಭಾಂಗಣದಲ್ಲಿ ಸೋಮವಾರ ಮಧ್ಯಾಹ್ನ ನಡೆದ ಪಾಲಿಕೆ ಬಜೆಟ್‌ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಆಡಳಿತ ಪಕ್ಷ ಸೇರಿದಂತೆ ವಿರೋಧ ಪಕ್ಷದ ಮುಖಂಡರು ಒಮ್ಮತದಿಂದ ಬಜೆಟ್‌ ಮಂಡನೆಗೆ ಒಪ್ಪಿಗೆ ಸೂಚಿಸಿದರು.

ಗೊಂದಲಗಳಿಗೆ ಸಭೆಯಲ್ಲಿ ತೆರೆ: ಮೇಯರ್‌ ಸುನಂದಾ ಪಾಲನೇತ್ರ ಅವರ ಅಧಿಕಾರವಾಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ಆರ್ಥಿಕ ವರ್ಷದ ಬಜೆಟ್‌ ಮಂಡನೆಗೆ ಸಂಬಂಧಿಸಿದ ಗೊಂದಲಗಳಿಗೆ ಸಭೆಯಲ್ಲಿ ತೆರೆ ಎಳೆದ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ್‌ ರೆಡ್ಡಿ, ಮೇಯರ್‌ ಅಧ್ಯಕ್ಷತೆಯಲ್ಲಿ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷರು ಬಜೆಟ್‌ ಮಂಡಿಸಬಹುದೇ ಎಂದು ಸರ್ಕಾರದ ಸಲಹೆ ಕೇಳಲಾಗಿತ್ತು. ಕಾಯಿದೆಯಲ್ಲಿರುವಂತೆ ಮೇಯರ್‌, ಉಪಮೇಯರ್‌ ಹಾಗೂ ಎಲ್ಲಾ ಸ್ಥಾಯಿ ಸಮಿತಿ ಅಧ್ಯಕ್ಷರಿಗೆ ಈ ಹಿಂದಿನಂತೆ ಎಲ್ಲಾ ಅಧಿಕಾರವಿದೆ. ಆದರೆ ಸ್ಥಾಯಿ ಸಮಿತಿ ಅಸ್ತಿತ್ವದಲ್ಲಿ ಇರುವುದಿಲ್ಲ ಎಂದು ವಿವರಣೆ ನೀಡಿ, ಈಗಿರುವ ಮೇಯರ್‌ ಅವರ ಅಧ್ಯಕ್ಷತೆಯಲ್ಲಿ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷರು ಬಜೆಟ್‌ ಮಂಡಿಸಬಹುದು ಎಂದು ಸ್ಪಷ್ಟಪಡಿಸಿದರು.

ಅಧಿಕಾರಿಗಳಿಗೆ ಸಂಬಳ ಕೊಡಲು ಕಷ್ಟ: ಈ ವೇಳೆ ಮಾತನಾಡಿದ ಕಾಂಗ್ರೆಸ್‌ ಸದಸ್ಯ ಆಯೂಬ್‌ ಖಾನ್‌, ಬಜೆಟ್‌ ಮಂಡಿಸದಿದ್ದರೆ ಕಾಮಗಾರಿಗಳ ಬಿಲ್‌ ಪಾವತಿಸಲು, ಅಧಿಕಾರಿಗಳಿಗೆ ಸಂಬಳ ಕೊಡಲು ಕಷ್ಟವಾಗುತ್ತದೆ. ಹಾಗಾಗಿಯೇ ಇದೇ 28ರಂದು ಬಜೆಟ್‌ ಮಂಡಿಸುವುದು ಸೂಕ್ತ ಎಂದು ಸಲಹೆ ನೀಡಿದರು. ಇದಕ್ಕೆ ಉಳಿದವರು ಸಮ್ಮತಿ ಸೂಚಿಸಿದರು.

ಸದಸ್ಯ ಬಿ.ವಿ.ಮಂಜುನಾಥ್‌ ಮಾತನಾಡಿ, ಈ ಬಾರಿಯ ಬಜೆಟ್‌ ಪುಸ್ತಕಕ್ಕೆ ಸೀಮಿತವಾಗುವಂತೆ ಮಾಡಬೇಡಿ. ಪಾಲಿಕೆ ಆದಾಯ ಎಷ್ಟಿದೆಯೋ ಅಷ್ಟಕ್ಕೆ ಬಜೆಟ್‌ ಗಾತ್ರವನ್ನು ಸೀಮಿತ ಮಾಡಬೇಕು. 700-800 ಕೋಟಿ ಬಜೆಟ್‌ ಮಂಡಿಸಿ ಯಾವ ಕೆಲಸವೂ ಆಗದಿದ್ದರೆ ಪ್ರಯೋಜನವಿಲ್ಲ ಎಂದು ಸಲಹೆ ನೀಡಿದರು. ಪುಷ್ಪಲತಾ ಜಗನ್ನಾಥ್‌ ಮಾತನಾಡಿ, ನೂತನ ಬಜೆಟ್‌ ನಲ್ಲಿ ಯೋಗಲಕ್ಷ್ಮೀ ಯೋಜನೆ ಮುಂದುವರಿಸುವಂತೆ ಸಲಹೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್‌ ಹಿಂದಿನ ಮೇಯರ್‌ ಅವಧಿಯ ಯಾವ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಸ್ಪಷ್ಟಪಡಿಸಿದರು.

ಮಾ.ವಿ.ರಾಮಪ್ರಸಾದ್‌ ಮಾತನಾಡಿ, ಕಳೆದ ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ವೃತ್ತಗಳ ಅಭಿವೃದ್ಧಿ ಮಾಡಲಿಲ್ಲ. ಆರೋಗ್ಯ ವಿಮೆ ಮುಂದುವರಿಸಬೇಕು. ಉದ್ಯಾನ ಮತ್ತು ಸ್ಮಶಾನಗಳ ನಿರ್ವಹಣೆ ಸಮರ್ಪಕವಾಗಿಲ್ಲ. ಹಾಗಾಗಿ ಬಜೆಟ್‌ನಲ್ಲಿ ಇವುಗಳಿಗೆ ಒತ್ತು ನೀಡುವಂತೆ ಮನವಿ ಮಾಡಿದರು.

ಜೆಡಿಎಸ್‌ ಸದಸ್ಯೆ ಪ್ರಮೀಳಾ ಶಂಕರೇಗೌಡ ಮಾತನಾಡಿ, ಕಳೆದ ಸಾಲಿನಲ್ಲಿ ಪಾಲಿಕೆ ಸದಸ್ಯರ ಆರೋಗ್ಯ ತಪಾಸಣೆಗೆ 25 ಲಕ್ಷ ಮೀಸಲಿಡಲಾಗಿತ್ತು. ಅದು ಕಾರ್ಯ ರೂಪಕ್ಕೆ ಬರಲಿಲ್ಲ. ಸ್ಮಶಾನ, ಉದ್ಯಾನ ಅಭಿವೃದ್ಧಿಗೆ ಪ್ರತ್ಯೇಕ ತೆರಿಗೆ ಸಂಗ್ರಹಿಸಲಾಗುತ್ತಿದೆ. ಅದು ಬಳಕೆಯಾಗುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದರು. ಬಳಿಕ ಆಯೂಬ್‌ ಖಾನ್‌ ಮಾತನಾಡಿ, ನಗರದಲ್ಲಿ ಬೀದಿನಾಯಿಗಳ ನಿಯಂತ್ರಣಕ್ಕೆ ಪ್ರತಿವರ್ಷ 40 ಲಕ್ಷ ರೂ. ವೆಚ್ಚ ಮಾಡಲಾಗುತ್ತಿದೆ. ಆದರೆ ಬಿದಿ ನಾಯಿಗಳ ನಿಯಂತ್ರಣವಾಗಿಲ್ಲ. ಈ ಬಾರಿಯ ಬಜೆಟ್‌ ನಲ್ಲಿ ಬೀದಿನಾಯಿಗಳಿಂದ ದಾಳಿಗೆ ಒಳಗಾದವರಿಗೆ ಪಾಲಿಕೆಯಿಂದಲೇ ಚಿಕಿತ್ಸಾ ವೆಚ್ಚ ಭರಿಸುವಂತೆ ಘೋಷಿಸಬೇಕು ಎಂದು ಸಲಹೆ ನೀಡಿದರು.

ಆಡಳಿತ ಪಕ್ಷದ ನಾಯಕ ಶಿವಕುಮಾರ್‌ ನಂಜನಗೂಡು ರಸ್ತೆಯಲಲ್ಲಿನ ಜೆಎಸ್‌ಎಸ್‌ ಕಾಲೇಜು ಬಳಿಯ ವೃತ್ತಕ್ಕೆ ನಂದಿ ವೃತ್ತ ಎಂದು ನಾಮಕರಣ ಮಾಡಲು ಸಲಹೆ ನೀಡಿದರು. ಉಪ ಮೇಯರ್‌ ಅನ್ವರ್‌ಬೇಗ್‌, ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ್‌ ರೆಡ್ಡಿ ಮತ್ತು ಅಧಿಕಾರಿಗಳು ಇದ್ದರು.

ಹೆಚ್ಚು ತೆರಿಗೆ ಜಟಾಪಟಿ : ಬಿಜೆಪಿ ಸದಸ್ಯ ಸುಬ್ಬಯ್ಯ ಮಾತನಾಡಿ, ನಗರ ಪಾಲಿಕೆಗೆ ಹೆಚ್ಚು ತೆರಿಗೆ ಪಾವತಿಸುವ ವಾರ್ಡ್ ಗಳಿಗೆ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ಅಭಿವೃದ್ಧಿ ಕೆಲಸಗಳಲ್ಲಿ ಆದ್ಯತೆ ನೀಡಬೇಕು ಎಂದು ತಮ್ಮ ಅಭಿಪ್ರಾಯ ಮಂಡಿಸಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್‌ ಸದಸ್ಯ ಆರೀಫ್ ಹುಸೇನ್‌, ಕಡಿಮೆ ತೆರಿಗೆ ಪಾವತಿಸುವ, ಹೆಚ್ಚು ತೆರಿಗೆ ಪಾವತಿಸುವ ವಾರ್ಡ್‌ ಎಂಬ ಭೇದಭಾವ ಸರಿಯಲ್ಲ. ಪಾಲಿಕೆ ಇತಿಹಾಸದಲ್ಲಿ ಈ ರೀತಿಯ ಕೆಲಸ ನಡೆದಿಲ್ಲ. ಮುಂದೆಯೂ ಆಗುವುದು ಬೇಡ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರೇಮಾ ಶಂಕರೇಗೌಡ ದನಿಗೂಡಿಸಿದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.