ಒಂದೇ ದಿನದಲ್ಲಿ ನೆಗೆಟಿವ್‌ ವರದಿ ಕಡ್ಡಾಯ ಆದೇಶ ವಾಪಸ್‌ ಪಡೆದ ಜಿಲ್ಲಾಧಿಕಾರಿ

Team Udayavani, Apr 10, 2021, 12:46 PM IST

ಒಂದೇ ದಿನದಲ್ಲಿ ನೆಗೆಟಿವ್‌ ವರದಿ ಕಡ್ಡಾಯ ಆದೇಶ ವಾಪಸ್‌ ಪಡೆದ ಜಿಲ್ಲಾಧಿಕಾರಿ

ಮೈಸೂರು: ಜಿಲ್ಲಾದ್ಯಂತ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಗುರುವಾರ ಹೊರಡಿಸಲಾಗಿದ್ದ ಆದೇಶವನ್ನು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಿಂಪಡೆದಿದ್ದಾರೆ. ಜತೆಗೆ ಕೋವಿಡ್ ತಡೆಗಾಗಿ ಕಠಿಣ ನಿಯಮ ಜಾರಿಗೊಳಿಸಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕೋವಿಡ್ ಟಫ್ ರೂಲ್ಸ್ ನಿಯಮ ಜಾರಿ ಸಂಬಂಧ ಗುರುವಾರ ಸುದ್ದಿಗೋಷ್ಠಿ ನಡೆಸಿದ್ದ ಜಿಲ್ಲಾಧಿಕಾರಿ ಕೋವಿಡ್ ಹೆಚ್ಚಳ ಹಿನ್ನೆಲೆ, ಏ.10 ರಿಂದ 20ರವೆರೆಗೆ ಮೈಸೂರಿನ ಪ್ರವಾಸಿ ತಾಣಗಳು, ದೇಗುಲ, ರೆಸಾರ್ಟ್‌, ಹೋಟೆಲ್, ಚಿತ್ರಮಂದಿರಗಳಿಗೆ ಕೋವಿಡ್‌ ಟೆಸ್ಟ್ ರಿಪೋರ್ಟ್‌ ಕಡ್ಡಾಯ ಎಂದು ಆದೇಶಿಸಿದ್ದರು. ಹಾಗೆಯೇ ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವ ವ್ಯಕ್ತಿಗಳು ಕೋವಿಡ್‌ -19 ನೆಗೆಟಿವ್‌ ರಿಪೋರ್ಟ್‌ ಹೊಂದಿರುವುದು ಸೂಕ್ತ ಎಂದು ಸಲಹೆ ನೀಡಿದ್ದರು.

ಇದರ ಬೆನ್ನಲ್ಲೇ ಕೋವಿಡ್ ಕಠಿಣ ನಿಯಮಗಳ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಸುತ್ತೋಲೆ ಹೊರಡಿಸಿದ ಹಿನ್ನೆಲೆ

ಮೈಸೂರು ಡೀಸಿ ರೋಹಿಣಿ ಸಿಂಧೂರಿ ಅವರು ತಮ್ಮ ಆದೇಶ ಹಿಂಪಡೆದಿದ್ದಾರೆ. ತಮ್ಮ ಆದೇಶ ಹಿಂಪಡೆದ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಜಿಲ್ಲಾಧಿಕಾರಿ ಸಿಂಧೂರಿ, ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವ ವ್ಯಕ್ತಿಗಳು ಕೋವಿಡ್‌-19 ನೆಗೆಟಿವ್‌ ರಿಪೋರ್ಟ್‌ ಹೊಂದಿರಲು ಸಲಹಾ ಸೂಚನೆ ನೀಡಲಾಗಿತ್ತು. ಸಾರ್ವಜನಿಕರಲ್ಲಿ ಸಲಹಾ ಸೂಚನೆ ಬಗ್ಗೆ ಗೊಂದಲ ಉಂಟಾಗಿದೆ. ಅಲ್ಲದೆ ಸರ್ಕಾರದ ಸುತ್ತೋಲೆಯಲ್ಲಿ ಕೊವಿಡ್‌ -19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತ್ಯೇಕ ಆದೇಶಗಳನ್ನು ಹೊರಡಿಸದಂತೆ ಹೇಳಿದೆ. ಈಗಾಗಲೇ ಇಂತಹ ಆದೇಶ, ಸೂಚನೆ ಹೊರಡಿಸಿದ್ದಲ್ಲಿ ತಕ್ಷಣವೇ ಹಿಂಪಡೆಯಲು ನಿರ್ದೇಶಿಸಿದೆ.

ಆದ್ದರಿಂದ ಹೊರಡಿಸಲಾಗಿರುವ ಸಲಹಾ ಸೂಚನೆಯನ್ನು ತಕ್ಷಣದಿಂದ ಹಿಂಪಡೆಯಲಾಗಿದೆ. ಸರ್ಕಾರದ ಸಲಹಾ ಸೂಚನೆಯನ್ನು ಜಾರಿಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕೋರಿ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.