ಲಾಕ್‌ಡೌನ್‌, ಪ್ರವಾಸಿ ತಾಣಗಳ ಬಂದ್‌ ಇಲ್ಲ


Team Udayavani, Apr 6, 2021, 1:19 PM IST

ಲಾಕ್‌ಡೌನ್‌, ಪ್ರವಾಸಿ ತಾಣಗಳ ಬಂದ್‌ ಇಲ್ಲ

ಮೈಸೂರು: ಜಿಲ್ಲೆಯಲ್ಲಿ ಸೋಂಕಿನ ತೀವ್ರತೆ ಹೆಚ್ಚದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಆದರೆ, ಯಾವುದೇ ಲಾಕ್‌ಡೌನ್‌, ಪ್ರವಾಸಿ ತಾಣಗಳನ್ನು ಬಂದ್‌ ಮಾಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಕೋವಿಡ್ ನಿಯಂತ್ರಣ ಹಾಗೂ ಲಸಿಕಾ ಕಾರ್ಯಕ್ರಮದ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕೋವಿಡ್  ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಲಾಕ್‌ಡೌನ್‌ ಮಾಡುವುದಿಲ್ಲ. ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಪ್ರವಾಸೋದ್ಯಮವನ್ನು ಮತ್ತೆ ಬಂದ್‌ ಮಾಡಿದರೆ ತೊಂದರೆಯಾಗುತ್ತದೆ. ಹೀಗಾಗಿ ಬಂದ್‌ ಮಾಡುವುದಿಲ್ಲ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಈಸಂಬಂಧ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಮಾರ್ಷಲ್‌ಗ‌ಳನ್ನು ನೇಮಿಸಿ: ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಒಂದು ಕಿ.ಮೀ. ಸುತ್ತಳತೆಯಲ್ಲಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ಜೊತೆಗೆ, ಒಂದೇ ಕಡೆ ಜನ ಸೇರದಂತೆಎಚ್ಚರ ವಹಿಸಿ, ಮದುವೆ, ಜಾತ್ರೆ, ಹಬ್ಬಗಳಿಗೆ 50ಕ್ಕಿಂತ ಹೆಚ್ಚು ಜನರು ಸೇರಬಾರದು. ಮದುವೆಗಳಲ್ಲಿ 100ಕ್ಕಿಂತ ಹೆಚ್ಚು ಜನರು ಸೇರದಂತೆ ತಡೆಯಲು ಗೃಹರಕ್ಷಕ ದಳದ ಮಾರ್ಷಲ್‌ಗ‌ಳನ್ನು ನೇಮಿಸಿ ಎಂದು ಸಲಹೆ ನೀಡಿದರು.

ಹಬ್ಬಗಳ ಮೇಲೆ ನಿರ್ಬಂಧ ವಿಧಿಸುವ ಬದಲು 50 ಜನರಿಗೆ ಮಾತ್ರ ಅವಕಾಶ ಮಾಡಿಕೊಡಿ.ಅದಕ್ಕಿಂತ ಹೆಚ್ಚು ಜನ ಸೇರದಂತೆನೋಡಿಕೊಳ್ಳುವುದಕ್ಕೆ ಸ್ಥಳೀಯ ಮುಖಂಡರಿಂದಮುಚ್ಚಳಿಕೆ ಪತ್ರ ಪಡೆದು ಬಳಿಕ ಅನುಮತಿ ನೀಡಿ. ಒಂದು ವಾರ ಈ ಎಲ್ಲ ಕ್ರಮಗಳನ್ನು ಕೈಗೊಂಡರೂಮತ್ತೆ ಹೆಚ್ಚಾದರೆ ಮತ್ತೂಂದು ಸುತ್ತಿನ ಸಭೆ ನಡೆಸಿ ಕಠಿಣ ಕ್ರಮಗಳನ್ನು ಕೈಗೊಂಡು ನಿರ್ಬಂಧ ವಿಧಿಸುವಂತೆ ಹೇಳಿದರು.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಕೇಂದ್ರ ಸರ್ಕಾರದ ಸೂಚನೆಯಂತೆ ಜಾತ್ರೆಗಳನ್ನು ನಿಷೇಧಿಸಲಾಗಿದೆ. 50 ಜನರನ್ನು ಸೇರಿಸಿ ಹಬ್ಬ ಮಾಡುವುದಕ್ಕೂಅವಕಾಶ ನೀಡುವುದು ಉಲ್ಲಂಘನೆಯಾಗಲಿದೆ.ಸಾರ್ವಜನಿಕರು ಹೆಚ್ಚು ಸೇರುವ ಪ್ರದೇಶಗಳಲ್ಲಿಒಂದಿಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯ ಎಂದರು.

ಸಭೆಯಲ್ಲಿ ಶಾಸಕ ಎಲ್‌.ನಾಗೇಂದ್ರ, ಜಿಪಂಅಧ್ಯಕ್ಷೆ ಪರಿಮಳ ಶ್ಯಾಂ, ಉಪಾಧ್ಯಕ್ಷೆ ಗೌರಮ್ಮಸೋಮಶೇಖರ್‌, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎ.ಎಂ.ಯೋಗೀಶ್‌, ಅಪರಜಿಲ್ಲಾಧಿಕಾರಿ ಬಿ.ಎಸ್‌.ಮಂಜುನಾಥಸ್ವಾಮಿ,ಮುಡಾ ಆಯುಕ್ತ ಡಾ.ಡಿ.ಬಿ.ನಟೇಶ್‌ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

ಮೈಮುಲ್‌ನಲ್ಲಿ ಅವ್ಯವಹಾರ ನಡೆದಿಲ್ಲ  :

ಮೈಮುಲ್‌ನಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ನೇಮಕಾತಿ ಪತ್ರವನ್ನು ಹೈಕೋರ್ಟ್‌ ನಿರ್ದೇಶನದಂತೆ ನೀಡಲಾಗಿದ್ದು, ಪಾರದರ್ಶಕವಾಗಿ ನಡೆದಿದೆ.ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ ತೆರವುಗೊಂಡ ಬಳಿಕ ಎಲ್ಲ ಪ್ರಕ್ರಿಯೆಮುಗಿದಿದೆ. ನನ್ನ ಗಮನಕ್ಕೆ ಬಂದೇ ಎಲ್ಲವೂ ನಡೆದಿದ್ದು, ಮೈಮುಲ್‌ ನಿರ್ದೇಶಕ ಎಸ್‌.ಸಿ.ಅಶೋಕ್‌ ಪಾತ್ರವಿದೆ ಎಂಬುದು ಸತ್ಯಕ್ಕೆ ದೂರವಾದುದು ಎಂದು ಸಚಿವ ಸೋಮಶೇಖರ್‌ ತಿಳಿಸದರು. ಬಿ.ವೈ.ವಿಜಯೇಂದ್ರ ಮೈಸೂರು ಜಿಲ್ಲೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಎನ್ನುವ ಕಾರಣಕ್ಕಾಗಿ ಕೆಲವರಲ್ಲಿ ನಾಡಿಮಿಡಿತ ಶುರುವಾಗಿದೆ. ಭಯ ಬಂದಿದೆ. ಅದಕ್ಕಾಗಿ ಇಂತಹ ಸುಳ್ಳು ಹೇಳುತ್ತಿದ್ದಾರೆ. ಹುಣಸೂರು ಕ್ಷೇತ್ರದಶಾಸಕರು ಸುಮ್ಮನೇ ಮಾತನಾಡುತ್ತಾರೆ. ಅವರಿಗೆ ಉತ್ತರ ಕೊಡಲು ಆಗಲ್ಲ. ಅವರೇನು ಮಂತ್ರಿಯೇ ಉತ್ತರ ಕೊಡಲು ಎಂದು ಕಿಡಿಕಾರಿದರು.

ಹಬ್ಬ ಜಾತ್ರೆಗೆ 50ಕ್ಕಿಂತ ಹೆಚ್ಚಿನ ಜನ ಬೇಡ :  ಜಾತ್ರೆ, ಊರ ಹಬ್ಬಗಳನ್ನು ನಿಷೇಧಿಸಿದರೆ ಜಿಲ್ಲಾಡಳಿತ, ಸರ್ಕಾರದ ವಿರುದ್ಧ ಮಾತನಾಡುತ್ತಾರೆ. ನಾವು 50 ಜನರಿಗೆಅನುಮತಿ ನೀಡಿ ಹಬ್ಬ ನಡೆಯುವಂತೆ ಮಾಡಬೇಕು. ಜನರು ಸೇರದಂತೆಯೂ ನೋಡಿಕೊಳ್ಳಬೇಕು. 50ಜನಕ್ಕಿಂತ ಹೆಚ್ಚು ಜನ ಸೇರದಂತೆ ನೋಡಿಕೊಳ್ಳುವುದಕ್ಕೆಸ್ಥಳೀಯ ಮುಖಂಡರಿಂದ ಮುಚ್ಚಳಿಕೆ ಪತ್ರ ಪಡೆದುಬಳಿಕ ಅನುಮತಿ ನೀಡಿ ಎಂದು ಉಸ್ತುವಾರಿ ಸಚಿವ ಎಸ್‌ .ಟಿ. ಸೋಮಶೇಖರ್‌ ತಿಳಿಸಿದರು.

ಊಟಿಯಂತೆ ಪ್ಲಾಸ್ಟಿಕ್‌ ಬಾಟಲ್‌ ಬಳಕೆ ನಿಲ್ಲಬೇಕು: ಸಚಿವ ಮನವಿ :

ಮೈಸೂರು: ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಬಳಕೆಯನ್ನು ಏ.5ರಿಂದ ಕಟ್ಟುನಿಟ್ಟಾಗಿ ನಿಷೇಧಿಸಲಾಗುತ್ತಿದ್ದು, ಪ್ಯಾಕ್‌ ಮಾಡಿದ ನೀರಿನ ಪ್ಲಾಸ್ಟಿಕ್‌ ಬಾಟಲ್‌ ಬಳಕೆಯೂ ನಿಲ್ಲಬೇಕು ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು.

ಜಿಲ್ಲಾ ಪಂಚಾಯತಿಯಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ಅವರು ಪ್ಲಾಸ್ಟಿಕ್‌ಬ್ಯಾಗುಗಳಿಗೆ ಪರ್ಯಾಯವಾಗಿ ಬಟ್ಟೆ ಬ್ಯಾಗ್‌ಗಳನ್ನು ಬಿಡುಗಡೆ ಮಾಡಿ ಮಾತನಾಡಿದರು. ಊಟಿಯಲ್ಲಿ ಪ್ಯಾಕ್‌ ಮಾಡಿದ ನೀರು ಗಾಜಿನ ಬಾಟಲಿನಲ್ಲಿಸಿಗುತ್ತದೆ. ಮೈಸೂರಿನಲ್ಲೂ ಅಂತಹ ಪದ್ಧತಿ ಬರಬೇಕು. ಇದರಿಂದ ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಾಗಲಿದೆ ಎಂದು ಹೇಳಿದರು

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.