
Cauvery ವಿಚಾರದಲ್ಲಿ ರಾಜಕೀಯ ಬೇಡ; ಒಗ್ಗಟ್ಟಾಗಿ ಹೋರಾಟ ಮಾಡುವ: ದಿನೇಶ್ ಗುಂಡೂರಾವ್
Team Udayavani, Sep 22, 2023, 1:49 PM IST

ಮೈಸೂರು: ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ನಮಗೆ ಮುಖ್ಯ. ಈ ಕುರಿತು ಇಂದು ಕ್ಯಾಬಿನೆಟ್ ಸಭೆ ನಡೆಸುತ್ತೇವೆ. ಸಭೆಯಲ್ಲಿ ಸರ್ಕಾರ ಒಂದು ತೀರ್ಮಾನಕ್ಕೆ ಬರತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ. ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕು. ಲೋಕಸಭೆ ಚುನಾವಣೆ ಕಾರಣದಿಂದ ಬಿಜೆಪಿ ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದರು.
ನಿಫಾ ಸಾಧ್ಯತೆ ಕಡಿಮೆ: ನೆರೆ ರಾಜ್ಯ ಕೇರಳದಲ್ಲಿಯಯೂ ನಿಫಾ ವೈರಸ್ ಸೆಪ್ಟಂಬರ್ 15 ರಿಂದ ಇಲ್ಲಿಯವರೆಗೆ ವರದಿಯಾಗಿಲ್ಲ. ರಾಜ್ಯದಲ್ಲಿ ನಿಫಾ ವೈರಸ್ ಪತ್ತೆಯಾಗಿಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ. ಈಗಾಗಲೇ ರಾಜ್ಯದಲ್ಲಿ ವೈರಸ್ ಹರಡದಂತೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ನಿಫಾ ವೈರಸ್ ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆಯಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಇದನ್ನೂ ಓದಿ:Actor: ಶೂಟಿಂಗ್ ದುರಂತದಲ್ಲಿ 30 ವರ್ಷಗಳ ಕಾಲ ಹಾಸಿಗೆ ಹಿಡಿದಿದ್ದ ತಮಿಳು ನಟ ಬಾಬು ವಿಧಿವಶ
ಮೂರು ಜನ ಡಿಸಿಎಂ ಮಾಡುವ ವಿಚಾರಕ್ಕೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಅದರ ಬಗ್ಗೆ ಚರ್ಚೆ ಯಾಕೆ? ಈ ವಿಚಾರ ನೀವೆ ಚರ್ಚೆ ಮಾಡಿಸುತ್ತಿದ್ದಿರಿ ಎಂದು ಮಾಧ್ಯಮಗಳತ್ತ ಬೊಟ್ಟು ಮಾಡಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS ವಿರುದ್ದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಆರೋಪ: ಸ್ಪಷ್ಟನೆ ನೀಡಿದ ಸಂಘ

BSY: ಅಲ್ಪಸಂಖ್ಯಾತರ ಓಲೈಕೆಯಿಂದ ಗೆಲ್ಲಬಹುದೆಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡದು: ಬಿಎಸ್ ವೈ

Elephants: 60 ವರ್ಷ ಮೀರಿದ ಆನೆಗಳನ್ನು ಕಾರ್ಯಾಚರಣೆಗೆ ಬಳಸಬೇಡಿ

Elephnat Arjuna: ಅರ್ಜುನ ಆನೆ ಮುಂದೆ ಕಾವಾಡಿಗರ ಕಣ್ಣೀರು

Chikkamagalur: ವಕೀಲರು-ಪೊಲೀಸರ ನಡುವೆ ಗಲಾಟೆ- CID ತನಿಖೆಗೆ ಸಮ್ಮತಿಸಿದ ಹೈಕೋರ್ಟ್