ಮೈಸೂರು: ಪ್ರವಾಸಿ ತಾಣಗಳಿಗಿದ್ದ ನಿರ್ಬಂಧ ತೆರವಿಗೆ ಮುಖ್ಯಮಂತ್ರಿಗಳ ಸೂಚನೆ
Team Udayavani, Oct 17, 2020, 11:09 AM IST
ಮೈಸೂರು: ಕೋವಿಡ್ – 19 ಹಿನ್ನೆಲೆ ಕೆಆರ್ ಎಸ್, ಮೈಸೂರು ಮೃಗಾಲಯ, ಚಾಮುಂಡಿ ಬೆಟ್ಟ ಹಾಗೂ ಅರಮನೆಗಳಿಗೆ ಪ್ರವಾಸಿಗರನ್ನು ದಸರಾ ಮುಗಿಯುವವರೆಗೆ ಪ್ರವೇಶ ನಿರ್ಬಂಧ ಹೇರಿರುವ ಜಿಲ್ಲಾಡಳಿತದ ಕ್ರಮವನ್ನು ಮುಖ್ಯಮಂತ್ರಿಗಳು ಹಿಂಪಡೆಯುವಂತೆ ಸೂಚಿಸಿದ್ದಾರೆ.
ಮುಖ್ಯಮಂತ್ರಿಗಳು ಶುಕ್ರವಾರ ಸಭೆ ನಡೆಸುವ ವೇಳೆ ಈ ಬಗ್ಗೆ ವಿವರಣೆ ಪಡೆದು, ಈ ಆದೇಶವನ್ನು ಹೊರಡಿಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ ಮಾಸ್ಕ್ ಗಳನ್ನು ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಎಲ್ಲರಿಗೂ ಪ್ರವೇಶವನ್ನು ನೀಡಲು ಸೂಚನೆ ನೀಡಿದ್ದಾರೆಂದು ಸಚಿವ ಸೋಮಶೇಖರ್ ತಿಳಿಸಿದರು.
ಇದನ್ನೂ ಓದಿ:ಮೈಸೂರು ದಸರಾ 2020: ಚಾಮುಂಡಿ ಸನ್ನಿಧಿಯಲ್ಲಿ ಮೈಸೂರು ದಸರಾಗೆ ಚಾಲನೆ
ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿದ ಕ್ರಮವನ್ನು ಮೈಸೂರು ಹೋಟೆಲ್ ಮಲಿಕರು, ಕ್ಯಾಬ್ ಚಾಲಕರು, ಟ್ಯಾಕ್ಸಿ ಚಾಲಕರು, ಟೂರಿಸ್ಟ್ ಗೈಡ್, ಆಟೋ ಚಾಲಕರು ಸೇರಿದಂತೆ ಹಲವು ಸಂಘಗಳು ಖಂಡಿಸಿ, ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಕ್ಕ ಸಿಕ್ಕವರನ್ನು ಬೈಯುವ,ಭಿಕ್ಷೆ ಬೇಡುವ ಆದಿವಾಸಿಗಳ ವಿಶಿಷ್ಟವಾದ ಹಬ್ಬ!!
ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ದೈವಿಕ ಮಾರ್ಗದರ್ಶಿ: ಪ್ರಮೋದ್ ಸಾವಂತ್
ಸಿದ್ದರಾಮಯ್ಯ ಮಾಡಿದ ತಪ್ಪಿನಿಂದ ಪ್ರತಾಪ್ ಸಿಂಹ ಸಂಸದರಾಗಿದ್ದಾರೆ: ಸಿ.ಎಂ.ಇಬ್ರಾಹಿಂ
ತಂಬಾಕು ಮಂಡಳಿ ನೀಡಿದ್ದು ರಸಗೊಬ್ಬರ, ಚೀಲದಲ್ಲಿ ಸಿಕ್ಕಿದ್ದು ರಂಗೂಲಿಪುಡಿ: ಆತಂಕದಲ್ಲಿ ರೈತರು
ಎನ್ಇಪಿನಲ್ಲಿ ಕೌಶಲ, ಜ್ಞಾನ ಸಂಪಾದನೆಗೆ ಒತ್ತು; ಸಚಿವ ಬಿ.ಸಿ.ನಾಗೇಶ್