ಹೆತ್ತವರನ್ನು ಆಲಕ್ಷಿಸದೇ ಸಲುಹಿರಿ


Team Udayavani, Jun 24, 2019, 3:00 AM IST

hettavarannu

ಮೈಸೂರು: ಇಂದಿನ ವ್ಯವಸ್ಥೆಯಲ್ಲಿ ಸಾಮಾಜಿಕ ಕಳಕಳಿ ಇರುವ ಸಂಸ್ಥೆಗಳು ಕಡಿಮೆ ಇದ್ದು, ಅಂತಹ ಸಾಲಿನಲ್ಲಿ ಮೈಸೂರು ಸಾಮಾಜಿಕ ಹಾಗೂ ಶೈಕ್ಷಣಿಕ ವಿಕಾಸ ವೇದಿಕೆಯೂ ಒಂದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ಎಸ್‌.ಕೆ.ವಂಟಿಗೋಡಿ ಹೇಳಿದರು.

ಮೈಸೂರು ಸಾಮಾಜಿಕ ಹಾಗೂ ಶೈಕ್ಷಣಿಕ ವಿಕಾಸ ವೇದಿಕೆಯು ಅಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಡಮಕ್ಕಳ ಸೇವೆ: ಯಾವುದೇ ಸಂಘ-ಸಂಸ್ಥೆಗಳು ಆರಂಭದ ದಿನಗಳಲ್ಲಿ ಉತ್ತಮ ಸೇವಾ ಕೆಲಸಗಳನ್ನು ಮಾಡುತ್ತವೆ. ಅನಂತರದ ದಿನಗಳಲ್ಲಿ ನಿಂತೆ ಹೋಗುತ್ತವೆ. ಈ ನಿಟ್ಟಿನಲ್ಲಿ ಸಂಸ್ಥೆಯನ್ನು ಉತ್ತಮ ಸೇವೆಗಳ ಮುನ್ನಡೆಸುತ್ತಿರುವುದು ಸಂತಸ ವಿಷಯ.

ಜಾತಿ, ಮತ, ಧರ್ಮದ ಬೇಧವಿಲ್ಲದೇ ಬಡತನ ಹಾಗೂ ಗ್ರಾಮೀಣ ಪ್ರದೇಶದಿಂದ ಬಂದ ನೂರಾರು ಮಕ್ಕಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ಮಾಡುತ್ತಿರುವುದು ಪ್ರಶಂಸನೀಯ. ಇಲ್ಲಿ ಪ್ರಶಸ್ತಿ ಸ್ವೀಕರಿಸಿದ ಮಕ್ಕಳು ನೀವು ಬೆಳೆದು ದೊಡ್ಡವರಾದ ಬಳಿಕ ನಿಮ್ಮ ಹೆತ್ತವರನ್ನು ನೋಡಿಕೊಂಡು ಉತ್ತಮ ಸಮಾಜಕ್ಕೆ ಕಾರಣಕರ್ತರಾಗಿ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಭರವಸೆ, ನಂಬಿಕೆ: ಶೈಕ್ಷಣಿಕ ತರಬೇತುದಾರ ಎಂ.ಎಸ್‌.ರಘು ಮಾತನಾಡಿ, ಮಕ್ಕಳು ತಮ್ಮ ಮೆದುಳಿನ ನಂಬಿಕೆ ಹಾಗೂ ಭರವಸೆ ಮೇಲೆ ಗುರಿ ಸಾಧಿಸುವುದು ಮುಖ್ಯವಾಗುತ್ತದೆ. ಅದರ ಮೇಲಿನ ನಂಬಿಕೆಯನ್ನು ಹೆಚ್ಚಿಸಿ ಶ್ರಮವಹಿಸಿದರೆ ಸಮೃದ್ಧಿಗೆ ಜತೆಗೆ ಹೋಗುತ್ತಾರೆ. ಯಾರು ಸಹ ನಾವು ಬಡವರೆಂಬ ಕೀಳರಿಮೆ ಬೇಡ. ಇಲ್ಲಿ ಯಾರು ಬಡವರಲ್ಲ, ಯಾರು ಶ್ರೀಮಂತರಲ್ಲ. ಎಲ್ಲರೂ ತಮ್ಮ ಮನಸ್ಸನ್ನು ಶ್ರೀಮಂತವಾಗಿರಿಸಿಕೊಂಡಿರಬೇಕು ಎಂದರು.

ಮಕ್ಕಳಿಗೆ ಪುರಸ್ಕಾರ: ಕಾರ್ಯಕ್ರಮದಲ್ಲಿ 300ಕ್ಕೂ ಹೆಚ್ಚು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ದೊಡ್ಡಬಳ್ಳಾಪುರ 4ನೇ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ನ್ಯಾಯಾಧೀಶ ಸಿ.ಚಂದ್ರಶೇಖರ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ದೇವಮಾನೆ, ಶಾಸಕ ರಾಯಗೌಡ ವಿ.ಪಾಟೀಲ್‌, ಬೆಂಗಳೂರು ಅ.ಭಾ.ವಿ.ಮ ಕಾರ್ಯದರ್ಶಿ ಎಚ್‌.ಎಂ.ರೇಣುಕಾ ಪ್ರಸನ್ನ, ಮೈಸೂರು ಬ್ರಾಹ್ಮಣ ಸಭಾ ಅಧ್ಯಕ್ಷ ಡಿ.ಟಿ.ಪ್ರಕಾಶ್‌, ವೇದಿಕೆ ಅಧ್ಯಕ್ಷ ವರುಣಾ ಮಹೇಶ್‌,

ಪ್ರಧಾನ ಕಾರ್ಯದರ್ಶಿ ಡಾ.ಕೆ.ವಸಂತಕುಮಾರ್‌, ಉಪಾಧ್ಯಕ್ಷ ಎಚ್‌.ಎಸ್‌.ವೀರೇಶ್‌, ಎಸ್‌.ಬಿ.ಸುರೇಶ್‌, ಸಂಚಾಲಕರಾದ ಬಿ.ಎಂ.ಷಡಕ್ಷರಿ, ಎಂ.ಎಸ್‌.ರುದ್ರಸ್ವಾಮಿ, ಎಸ್‌.ಎಸ್‌.ಸಿದ್ದೇಶ್‌, ಎಸ್‌.ಲೋಕೇಶ್‌, ಮಹದೇವಸ್ವಾಮಿ, ದೇವನೂರು ಲೋಕೇಶ್‌, ಶಿವಮಲ್ಲು, ಎಸ್‌.ರಾಜೇಶ್‌, ರುಪಿಟ್ರೀ ಮಂಜುನಾಥ್‌, ಕೆ.ಮಹೇಶ್‌ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.