ಬುಡಕಟ್ಟಿನ ಕ್ರೀಡಾ ಕಾರ್ಯಕ್ರಮಕ್ಕೆ ಅಧಿಕಾರಿಗಳ ಗೈರು: ಆಕ್ರೋಶ

Team Udayavani, Oct 15, 2019, 3:00 AM IST

budakatina

ಪಿರಿಯಾಪಟ್ಟಣ: ತಾಲೂಕಿನ ಅಬ್ಬಳತಿ ಆಶ್ರಮ ಶಾಲೆಯಲ್ಲಿ ಆಯೋಜಿಸಲಾಗಿದ್ದ ಬುಡಕಟ್ಟು ಮಕ್ಕಳ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ತಾಲೂಕು ಮಟ್ಟದ ಯಾವುದೇ ಅಧಿಕಾರಿಗಳು ಭಾಗವಹಿಸದ ಕಾರಣ ಹಾಗೂ ತಾಪಂ ಸದಸ್ಯ ಶ್ರೀನಿವಾಸ್‌ ಹಾಗೂ ಗ್ರಾಪಂ ಸದಸ್ಯೆ ಜಾನಕಮ್ಮ ಬುಡಕಟ್ಟು ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಡಿಸಿದರು.

ತಾಲೂಕಿನ ಅಬ್ಬಳತಿ ಆಶ್ರಮ ಶಾಲೆಯ ಆವರಣದಲ್ಲಿ ಪಿರಿಯಾಪಟ್ಟಣ ಹಾಗೂ ವಿರಾಜಪೇಟೆ ತಾಲೂಕಿನ ಮಕ್ಕಳಿಗಾಗಿ ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ಹಾಗೂ ಮಾಲಂಗಿ ಗ್ರಾಪಂ ಸಹಯೋಗದಲ್ಲಿ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮ ನಡೆಯಿತು.

ಬುಡಕಟ್ಟು ಸಮುದಾಯಕ್ಕೆ ಸರ್ಕಾರದ ಸವಲತ್ತು ತಲುಪಲು ವಿಳಂಬ ಮತ್ತು ಅರ್ಹರಿಗೆ ಸೌಲಭ್ಯ ನೀಡದೇ ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಕಾರ್ಯಕ್ರಮದಲ್ಲಿ ಅಳಲನ್ನು ತಹಶೀಲ್ದಾರ್‌ ಶ್ವೇತಾ, ಇಒ ಡಿ.ಸಿ. ಶೃತಿ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಮೇಗೌಡ, ಮಾಲಂಗಿ ಗ್ರಾಪಂ ಪಿಡಿಒ ಡಾ.ಆಶಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಹೇಳಿಕೊಳ್ಳಲು ಕಾಯುತ್ತಿದ್ದರು.

ಆದರೆ, ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದ ಕಾರಣ ಸಮುದಾಯ ಬೇಸರ ವ್ಯಕ್ತಪಡಿಸಿತು. ಇನ್ನು ಮುಂದೆ ಬುಡಕಟ್ಟು ಸಮುದಾಯದ ಕಾರ್ಯಕ್ರಮಗಳಿಗೆ ಯಾವ ಅಧಿಕಾರಿಗೂ ಆಹ್ವಾನ ನೀಡಬಾರದು. ಬುಡಕಟ್ಟು ಜನರ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳಿಗೆ ಧಿಕ್ಕಾರ ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಪಂ ಸದಸ್ಯೆ ಹಾಗೂ ಆದಿವಾಸಿ ಸಮುದಾಯದ ಜಾನಕಮ್ಮ ಮಾತನಾಡಿ, ಸೌಜನ್ಯಕ್ಕಾದರೂ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮಕ್ಕೆ ಬಾರದ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಬುಡಕಟ್ಟು ಸಮುದಾಯ ಮುಖ್ಯವಾಹಿನಗೆ ಬರಬೇಕೆಂದು ಹೆಸರಿಗಷ್ಟೇ ಹೇಳುತ್ತಾರೆ. ಈ ಸಮುದಾಯದ ಜನರು ಯಾವುದಾದರೂ ಕಾರ್ಯಕ್ರಮದ ಮೂಲಕ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬಂದರೆ ನಿರ್ಲಕ್ಷ್ಯ ತೋರುತ್ತಾರೆಂದು ಹರಿಹಾಯ್ದರು.

ತಾಪಂ ಸದಸ್ಯ ಶ್ರೀನಿವಾಸ್‌ ಮಾತನಾಡಿ ಅಧಿಕಾರಿಗಳ ಕೃತ್ಯಕ್ಕೆ ಅಸಹನೆ ಹೊರಹಾಕಿದರು. ತಾ.ಪಂ.ಅದ್ಯಕ್ಷೆ ಕೆ.ಆರ್‌. ನಿರೂಪಾ ಮಾತನಾಡಿದರು. ಜಿಪಂ ಸದಸ್ಯ ಜಯಕುಮಾರ್‌, ಗ್ರಾಪಂ ಅದ್ಯಕ್ಷೆ ಮುನೀರಾ ಜಾನ್‌, ಮುಖಂಡರಾದ ಈಶ್ವರ್‌, ಸುಶೀಲ, ಗ್ರಾಪಂ ಸಿಬ್ಬಂದಿ ಬಲರಾಮ್‌ ಇತರರಿದ್ದರು.

ಮೈಕ್ರೋ ಪೈನಾನ್ಸ್‌, ಸಂಘಗಳ ವಿರುದ್ಧ ಆರೋಪ: ಬುಡಕಟು ಜನಾಂಗದ ಜಿಲ್ಲಾ ಕಾರ್ಯದರ್ಶಿ ಶೈಲೇಂದ್ರ ಮಾತನಾಡಿ, ಕೆಲವು ಮೈಕ್ರೋ ಪೈನಾನ್ಸ್ ಮತ್ತು ಸಂಘ ಸಂಸ್ಥೆಗಳು ಸಾಲ ಸೌಲಭ್ಯ ನೀಡುತ್ತೇವೆ ಎಂದು ನಮ್ಮ ಜನರನ್ನು ವಂಚಿಸುವ ಕೆಲಸ ಮಾಡುತ್ತಿವೆ. ತಿಳಿವಳಿಕೆ ಇಲ್ಲದ ನಮ್ಮ ಜನ ಇಂಥ ಪೈನಾನ್ಸ್ ಸಂಸ್ಥೆಯಿಂದ ಸಾಲ ಮಾಡಿ ಮೋಸ ಹೋಗುತ್ತಿದ್ದಾರೆ ಇಲ್ಲಿನ ಮುಖಂಡರು ನಮ್ಮ ಜನರಿಗೆ ತಿಳಿವಳಿಕೆ ಹೇಳಬೇಕು ಎಂದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.