ಅಕ್ರಮ ಕಟ್ಟಡ ತೆರವಿಗೆ ತೆರಳಿದ ಅಧಿಕಾರಿಗಳಿಗೆ ಆತ್ಮಹತ್ಯೆ ಬೆದರಿಕೆ


Team Udayavani, Nov 14, 2018, 12:34 PM IST

m1-akrama.jpg

ಮೈಸೂರು: ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡ ತೆರವುಗೊಳಿಸಲು ಮುಂದಾದ ನಗರ ಪಾಲಿಕೆ ಹಾಗೂ ಮುಡಾ ಅಧಿಕಾರಿಗಳು ಕಟ್ಟಡ ಮಾಲಿಕನ ಆತ್ಮಹತ್ಯೆ ಬೆದರಿಕೆಗೆ ಹೆದರಿ ಬರಿಗೈಯಲ್ಲಿ ವಾಪಸಾದ ಘಟನೆ ನಡೆದಿದೆ. 

ಮೈಸೂರಿನ ರಾಜೀವ್‌ನಗರ 2ನೇ ಹಂತದ ದೇವನೂರು ಟ್ಯಾಂಕ್‌ ಬಳಿ ಅಕ್ರಮವಾಗಿ ನಿರ್ಮಿಸಿದ್ದ ಶಾದಿ ಮಹಲ್‌ ಕಟ್ಟಡ ತೆರವುಗೊಳಿಸಲು ಅಧಿಕಾರಿಗಳು ಉದಯಗಿರಿ ಪೊಲೀಸರೊಂದಿಗೆ ಸ್ಥಳಕ್ಕೆ ತೆರಳಿದ್ದರು. ಈ ಕಾರ್ಯಾಚರಣೆಗಾಗಿ 10 ಜೆಸಿಬಿ, 4 ಗ್ಯಾಸ್‌ ಕಟರ್‌ಗಳು, ಟಿಪ್ಪರ್‌ಗಳು, 30 ಗನ್‌ಮ್ಯಾನ್‌ಗಳ ತಂಡದ ಸಿಬ್ಬಂದಿ ತೆರವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಆದರೆ ಅಧಿಕಾರಿಗಳು ಸ್ಥಳಕ್ಕಾಗಮಿಸಿರುವ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಕಟ್ಟಡ ಮಾಲಿಕ ಕಟ್ಟಡದ ಮೇಲೇರಿ ಕುಳಿತು, ಕಟ್ಟಡ ತೆರವುಗೊಳಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದರು. ಇದರಿಂದ ಕಟ್ಟಡ ತೆರವುಗೊಳಿಸುವುದನ್ನು ಕೈಬಿಟ್ಟ ಅಧಿಕಾರಿಗಳು ಬರಗೈಯಲ್ಲಿ ಹಿಂದಿರುಗಿದರು. 

ಘಟನೆ ಹಿನ್ನೆಲೆ: ದೇವನೂರು ಗ್ರಾಮದ ಸಹೋದರರಾದ ಮುಶೀರ್‌ ಅಹಮದ್‌ ಹಾಗೂ ಮೊಹಮದ್‌ ಫಾಹಿದ್‌ ರಾಜೀವ್‌ನಗರದ 2ನೇ ಹಂತದದಲ್ಲಿರುವ ಸರ್ವೇ ನಂ50/1, 50/10/11/12ರಲ್ಲಿ 20 ಗುಂಟೆ ಜಾಗದಲ್ಲಿ ಶಾದಿ ಮಹಲ್‌ ನಿರ್ಮಿಸುತ್ತಿದ್ದರು. ಆದರೆ ಈ ಜಾಗ ಕೃಷಿ ಭೂಮಿಯಾಗಿದ್ದು ವಾಣಿಜ್ಯ ಉದ್ದೇಶಕ್ಕೆ ಪರಿವರ್ತನೆ ಮಾಡಿಕೊಂಡಿರಲಿಲ್ಲ.

ಅಲ್ಲದೆ ಇದಕ್ಕೆ ನಗರ ಯೋಜನೆ ಪ್ರಾಧಿಕಾರದಿಂದ ಅನುಮತಿ ಪಡೆಯದೆ, ಅಕ್ರಮ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದರು. ಕಾನೂನು ಬಾಹಿರವಾಗಿ ಕಟ್ಟಡ ನಿರ್ಮಾಣ ಮಾಡುತ್ತಿರುವ ವಿಷಯ ತಿಳಿದ ಅಧಿಕಾರಿಗಳು, ಸ್ಥಳಕ್ಕೆ ತೆರಳಿ ತೆರವುಗೊಳಿಸಲು ಮುಂದಾದರು. ಈ ವೇಳೆ ಸ್ಥಳಕ್ಕಾಗಮಿಸಿದ ಕಟ್ಟಡದ ಮಾಲಿಕರು ಕಟ್ಟಡವನ್ನು ತೆರವುಗೊಳಿಸದಂತೆ ಒತ್ತಾಯಿಸಿದರಲ್ಲದೆ, ಅಧಿಕಾರಿಗಳ ಜತೆಗೆ ಮಾತಿನ ಚಕಮಕಿ ನಡೆಸಿದರು.

ಈ ವೇಳೆ ಕಟ್ಟಡದ ಮೇಲೇರಿದ ಮುಶೀರ್‌ ಆಹಮದ್‌ ಶಾದಿ ಮಹಲ್‌ ಕೆಡವಲು ಮುಂದಾದರೆ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದರು. ಇದರಿಂದ ಆತಂಕಕ್ಕೊಳಗಾದ ಅಧಿಕಾರಿಗಳು ಕೆಳಗಿಳಿಯುವಂತೆ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಅಲ್ಲದೆ ಪರಿಸ್ಥಿತಿ ಬಿಗಡಾಯಿಸುತ್ತಿರುವುದನ್ನು ಮನಗಂಡ ಅಧಿಕಾರಿಗಳು ಕಟ್ಟಡ ತೆರವು ಮಾಡುವ ಕಾರ್ಯವನ್ನು ಕೈಬಿಟ್ಟು ಸ್ಥಳದಿಂದ ತೆರಳಿದರು. 

ಸ್ಥಳೀಯರ ಆಕ್ರೋಶ: ಅಧಿಕಾರಿಗಳ ಕಾರ್ಯಾಚರಣೆ ವಿಷಯ ತಿಳಿದು ನೂರಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದರು. ಅಲ್ಲದೇ ಕಟ್ಟಡ ತೆರವುಗೊಳಿಸುವ ವೇಳೆ ಮಹಾನಗರ ಪಾಲಿಕೆ ಹಾಗೂ ಮುಡಾ ಆಯುಕ್ತರು, ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಬಾರದೆ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು. ಯಾವುದೇ ಅನಾಹುತ ಸಂಭವಿಸಬಹುದಾದ ಈ ರೀತಿಯ ಸನ್ನಿವೇಶಗಳಲ್ಲಿ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಸ್ಥಿತಿ ನಿಯಂತ್ರಿಸಬೇಕು. ಆದರೆ ಯಾರೊಬ್ಬರು ಸ್ಥಳಕ್ಕೆ ಆಗಮಿಸಿಲ್ಲ ಎಂದು ಕಿಡಿಕಾರಿದರು. 

ಈ ವೇಳೆ ಕಟ್ಟಡದ ಮಾಲಿಕರು ಕಟ್ಟಡ ತೆರವುಗೊಳಿಸದಂತೆ ಕೋರ್ಟ್‌ನಿಂದ ತಡೆಯಾಜ್ಞೆ ತರಲು ನಿರ್ಧರಿಸಿದ್ದಾರೆ. ಕಾರ್ಯಾಚರಣೆ ಹಿನ್ನೆಲೆಯಲ್ಲಿ ಮುಡಾ ಕಾರ್ಯದರ್ಶಿ ಎಂ.ಕೆ.ಸವಿತಾ, ಕಾರ್ಯಕಾರಿ ಅಭಿಯಂತರರಾದ ಪ್ರಭಾಕರ್‌, ಸುವರ್ಣ, ವಿಶೇಷ ಭೂ ಸ್ವಾಧೀನ ಅಧಿಕಾರಿ ಚಂದ್ರಮ್ಮ, ಮುಡಾ ಸಹಾಯಕ ಕಾರ್ಯಕಾರಿ ಅಭಿಯಂತರ ಮೋಹನ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.