ಅ.5ರಂದು ಮಧ್ಯಾಹ್ನ ಮಧ್ಯಾಹ್ನ ಕಲೆ, ಸಂಸ್ಕೃತಿ ಬಿಂಬಿಸುವ ಜಂಬೂ ಸವಾರಿ; ಬಿಗಿ ಬಂದೋಬಸ್ತ್

ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ಸೇರಿ 8 ಮಂದಿ ಗಣ್ಯರು ಚಿನ್ನದಂಬಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ.

Team Udayavani, Oct 4, 2022, 12:15 PM IST

ಅ.5ರಂದು ಮಧ್ಯಾಹ್ನ ಮಧ್ಯಾಹ್ನ ಕಲೆ, ಸಂಸ್ಕೃತಿ ಬಿಂಬಿಸುವ ಜಂಬೂ ಸವಾರಿ; ಬಿಗಿ ಬಂದೋಬಸ್ತ್

ಮೈಸೂರು: ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಬಿಂಬಿಸುವ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸಾಂಸ್ಕೃತಿಕ ನಗರಿ ಸಕಲ ರೀತಿಯಲ್ಲೂ ವಿಜಯ ದಶಮಿಗೆ ಸಜ್ಜಾಗಿದೆ.

ಕೊರೊನಾ ಸೋಂಕು ಹಿನ್ನೆಲೆ ಕಳೆದ ಎರಡು ವರ್ಷಗಳ ಕಾಲ ಅರಮನೆಗಷ್ಟೇ ಸೀಮಿತವಾಗಿದ್ದ ನಾಡಹಬ್ಬ ಮೈಸೂರು ದಸರಾ, ಈ ಬಾರಿ ವಿಜೃಂಭಣೆಯಿಂದ ನಡೆಯುತ್ತಿದೆ. ಚಾಮುಂಡೇಶ್ವರಿಯ ಅಗ್ರಪೂಜೆಯೊಡನೆ ಆರಂಭವಾಗಿದ್ದ ನವರಾತ್ರಿ ಉತ್ಸವ ಜಂಬೂಸವಾರಿ ಮತ್ತು ಪಂಜಿ ಕವಾಯತಿನೊಂದಿಗೆ 10 ದಿನದ ದಸರಾ ಉತ್ಸವಕ್ಕೆ ತೆರೆ ಬೀಳಲಿದೆ. ಜಂಬೂ ಸವಾರಿ ವೀಕ್ಷಿಸಲು ದೇಶವಿದೇಶದ ಲಕ್ಷಾಂತರ ಪ್ರವಾಸಿಗರು ಆಗಮಿಸುವುದರಿಂದ ಅರಮನೆ ಆವರಣ ಸೇರಿದಂತೆ ಜಂಬೂ ಸವಾರಿ ಸಾಗುವ ರಾಜಮಾರ್ಗದಲ್ಲಿ ಆಸನದ ವ್ಯವಸ್ಥೆ ಸೇರಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ವಿಜಯ ದಶಮಿ ಮೆರವಣಿಗೆ: ಬುಧವಾರ ಮಧ್ಯಾಹ್ನ 2.36ರಿಂದ 2.50ರ ಒಳಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿಗಳು ನಂದಿಧ್ವಜಕ್ಕೆ ಪೂಜೆ ಸಲ್ಲಿಸುವರು. ಬಳಿಕ ಗಜಪಡೆಯ ಮಾಜಿ ಕ್ಯಾಪ್ಟನ್‌ ಅರ್ಜುನ ನಿಶಾನೆ ಆನೆಯಾಗಿ ದಸರಾ ಮೆರವಣಿಗೆಯನ್ನು ಮುನ್ನಡೆಸಲಿದ್ದಾನೆ. ನಂತರ ಸಂಜೆ 5.7ರಿಂದ 5.18ರ ಒಳಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ವಿಜಯದಶಮಿ (ಜಂಬೂಸವಾರಿ)ಮೆರವಣಿಗೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ಸೇರಿ 8 ಮಂದಿ ಗಣ್ಯರು ಚಿನ್ನದಂಬಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಈ ಬಾರಿ ಜಂಬೂಸವಾರಿ ತಡವಾಗಿ ಆರಂಭವಾಗುವುದರಿಂದ ಬನ್ನಿಮಂಟಪ ತಲುಪುವುದು ತಡವಾಗಲಿದೆ.

ಅಂಬಾರಿ ಹೊರಲಿದ್ದಾನೆ ಅಭಿಮನ್ಯು: 2019ರ ಬಳಿಕ ನಡೆದ ದಸರಾ ಉತ್ಸವಕ್ಕೆ ಕೊರೊನಾ ಕರಿಛಾಯೆ ಆವರಿಸಿದ್ದರಿಂದ ಅರಮನೆ ಆವರಣಕ್ಕೆ ದಸರೆ ಕಾರ್ಯಕ್ರಮ ಮತ್ತು ಜಂಬೂ ಸವಾರಿ ಸೀಮಿತವಾಗಿತ್ತು. ಜತೆಗೆ ಅರ್ಜುನ 2019ರಲ್ಲಿ ಅಂಬಾರಿ ಹೊರುವ ಆನೆಯಿಂದ ನಿವೃತ್ತಿಯಾಗಿದ್ದರಿಂದ ಕೂಬಿಂಗ್‌ ಸ್ಪೆಷಲಿಸ್ಟ್‌ ಎಂದೇ ಖ್ಯಾತಿಗಳಿಸಿದ್ದ ಅಭಿಮನ್ಯು 2020-21ರಲ್ಲಿ ಅರಮನೆ ಆವರಣದಲ್ಲಷ್ಟೇ ಅಂಬಾರಿ ಹೊತ್ತಿದ್ದ. ವಿಶೇಷ ಎಂದರೆ ಈ ಬಾರಿ ಅರಮನೆಯಿಂದ ಬನ್ನಮಂಟಪದ ಮೈದಾನದವರೆಗೆ ಮೆರವಣಿಗೆ ಸಾಗುತ್ತಿರುವುದರಿಂದ 750 ಕೆ.ಜಿ. ತೂಕಾದ ಅಂಬಾರಿ ಹಾಗೂ ಗಾದಿ ಮತ್ತು ನಮಾª 200 ಕೆ.ಜಿ. ಸೇರಿ ಒಟ್ಟು 950 ಕೆ.ಜಿ. ಭಾರ ಹೊತ್ತು ಸಾಗಲಿದ್ದಾನೆ. ಅಭಿಮನ್ಯು ಜತೆಗೆ 13 ಆನೆಗಳು, ಅಶ್ವರೋಹಿಪಡೆಗಳು, ಆನೆಗಾಡಿಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಇದರ ಜತೆಗೆ ಮೆರವಣಿಗೆಯಲ್ಲಿ ರಾಜ್ಯ 31 ಜಿಪಂ, ರಾಜ್ಯಮಟ್ಟದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು, ಸ್ತಬ್ಧಚಿತ್ರ ಉಪಸಮಿತಿ ಸೇರಿ 43 ಸ್ತಬ್ಧಚಿತ್ರಗಳು ಸೇರಿ 100ಕ್ಕೂ ಜಾನಪದ ತಂಡಗಳು ಭಾಗವಹಿಸಲಿವೆ.

ಸಕಲ ಸಿದ್ಧತೆ: ವಿಶ್ವವಿಖ್ಯಾತ ಜಂಬೂ ಸವಾರಿಗೆ ಕೇವಲ ಒಂದು ದಿನ ಮಾತ್ರ ಬಾಕಿ ಇದ್ದು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅರಮನೆ ಆವರಣದಲ್ಲಿ 20 ಸಾವಿರ ಮಂದಿ ಕೂರಲು ಆಸನ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಪೆಂಡಾಲ್‌ ಹಾಕಿ ಆಸನದ ವ್ಯವಸ್ಥೆ ಮಾಡಲಾಗಿದೆ. ಗೋಲ್ಡ್‌ ಕಾರ್ಡ್‌, ವಿವಿಐಪಿ, ವಿಐಪಿ ಪಾಸ್‌ವುಳ್ಳವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಜಂಬೂ ಸವಾರಿ ವೇಳೆ ಸಾರ್ವಜನಿಕರು ರಸ್ತೆಗೆ ಬರದಂತೆ ಎರಡೂ ಕಡೆ ಮರದ ಬ್ಯಾರಿಕೇಡ್‌ ನಿರ್ಮಿಸಲಾಗಿದೆ. ಹಾಗೆಯೇ ಎಲ್ಲರ ಮೇಲು ಹದ್ದಿನ ಕಣ್ಣಿಡಲು ಕೆ.ಆರ್‌.ವೃತ್ತ, ಆಯುರ್ವೇದ ಕಾಲೇಜು
ವೃತ್ತ, ಹೈವೈ ಸರ್ಕಲ್‌ ಸೇರಿ ಪ್ರಮುಖ ವೃತ್ತ ಸೇರಿ ಅಂಬಾರಿ ಸಂಚರಿಸುವ ಮಾರ್ಗ, ವಿವಿಧೆಡೆಗಳಲ್ಲಿ 13 ಸಾವಿರಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

ಅಂತಿಮ ತಾಲೀಮು: ಜಂಬೂ ಸವಾರಿಯಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿ 55 ದಿನದಿಂದ ವಿವಿಧ ಹಂತದ ತಾಮೀಲು ನಡೆಸಿದ್ದ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆ ಸೋಮವಾರ ಅಂತಿಮ ಹಂತದ ತಾಲೀಮು ನಡೆಸಿತು. ಅರಮನೆ ಆವರಣದಲ್ಲಿ ಜಂಬೂ ಸವಾರಿಯ ಪುಷ್ಪಾರ್ಚನೆ ತಾಲೀಮು ನಡೆಸಲಾಯಿತು. ಚಿನ್ನದ ಅಂಬಾರಿ ಹೊತ್ತು ಸಾಗುವ ಆನೆಯ ಸುತ್ತಲೂ ಸಾರ್ವಜನಿಕರ ಪ್ರವೇಶ ತಡೆಯಲು ವಿಶೇಷ ಪೊಲೀಸ್‌ ತುಕಡಿ
ನಿಯೋಜಿಸಲಾಗುತ್ತದೆ. ಇದಲ್ಲದೆ, ಅರಮನೆಯಲ್ಲಿ ಭದ್ರತಾ ದೃಷ್ಟಿಯಿಂದ ಕಮಾಂಡೋ ಪಡೆ ತುಕಡಿಗಳನ್ನು ನೇಮಿಸಲಾಗಿದೆ. ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಆನೆಗಳು, ಅಶ್ವಪಡೆ, ಶಸ್ತ್ರಸಜ್ಜಿತ ಪೊಲೀಸ್‌ ತುಕಡಿಗಳು ಅಂತಿಮ ಪೂರ್ವಭ್ಯಾಸ ನಡೆಸಿದವು.

ತಾತ್ಕಾಲಿಕ ಬಸ್‌ ನಿಲ್ದಾಣ ವ್ಯವಸ್ಥೆ
ಅ.4 ಮತ್ತು 5ರಂದು ಸಾರಿಗೆ ಸಂಸ್ಥೆ ಬಸ್‌ಗಳಿಗೆ ತಾತ್ಕಾಲಿಕ ನಿಲ್ದಾಣಗಳನ್ನು ಮಾಡಲಾಗಿದೆ. ಬೆಂಗಳೂರಿನಿಂದ ಆಗಮಿಸುವ ಬಸ್‌ಗಳು ಸಾತಗಳ್ಳಿ ಕೆಎಸ್‌ ಆರ್‌ಟಿಸಿ ನಿಲ್ದಾಣ, ಹುಣಸೂರು, ಬೋಗಾದಿ ಹಾಗೂ ಎಚ್‌.ಡಿ.ಕೋಟೆ ಕಡೆಯಿಂದ ಆಗಮಿಸುವ ಬಸ್‌ಗಳು ಮಹಾರಾಜ ಕಾಲೇಜು ಮೈದಾನದಲ್ಲಿ ನಿಲ್ಲಿಸಬೇಕು. ನಂಜನಗೂಡು ಕಡೆಯಿಂದ ಆಗಮಿಸುವ ಬಸ್‌ಗಳಿಗೆ ಗುಂಡೂರಾವ್‌ ನಗರ ಮೈದಾನ ಹಾಗೂ ಬನ್ನೂರು, ತಿ.ನರಸೀಪುರ ರಸ್ತೆ ಮೂಲಕ ಆಗಮಿಸುವ ಬಸ್‌ಗಳು ಲಲಿತಮಹಲ್‌ ಮೈದಾನದಲ್ಲಿ ನಿಲ್ಲಲು ವ್ಯವಸ್ಥೆ ಕಲ್ಪಿಸಲಾಗಿದೆ.

ಸಂಚಾರ ಮಾರ್ಗ ಬದಲಾವಣೆ
ಅ.5ರವರೆಗೆ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಅರಮನೆ ಸುತ್ತಮುತ್ತಲ ರಸ್ತೆಗಳು, ನ್ಯೂ ಎಸ್‌.ಆರ್‌.ರಸ್ತೆ, ಬಿ.ಎನ್‌.ರಸ್ತೆ, ಬನುಮಯ್ಯ ರಸ್ತೆ, ತ್ಯಾಗರಾಜ ರಸ್ತೆ, ಚಂದ್ರಗುಪ್ತ ರಸ್ತೆ, ಅಲ್ಬರ್ಟ್‌ ವಿಕ್ಟರ್‌ ರಸ್ತೆಗಳಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಸದರಿ ರಸ್ತೆಗಳ ಬದಿಗಳಲ್ಲಿ ಪಾರ್ಕಿಂಗ್‌ ವ್ಯವಸ್ಥೆ ನಿಷೇಧಿಸಲಾಗಿದೆ. ಕೆಎಸ್‌ಆರ್‌ಟಿಸಿ ಗ್ರಾಮಾಂತರ ಮತ್ತು ನಗರ ಬಸ್‌ಗಳ ಸಂಚಾರ ಮಾರ್ಗ ಬದಲಾವಣೆ
ಮಾಡಲಾಗಿದೆ. ಕಾರ್ಯಕ್ರಮಗಳು ನಡೆಯುವ ಸ್ಥಳದಲ್ಲಿಯೇ ಸಾಧ್ಯವಾದಷ್ಟು ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ.

ಸಹಾಯ ಕೇಂದ್ರಗಳ ಸ್ಥಾಪನೆ
ಸಾರ್ವಜನಿಕರ ಸುರಕ್ಷತೆಯ ಸೂಚನೆಗಳಿರುವ ಮತ್ತು ಪೊಲೀಸರ ಪಾತ್ರದ ಕುರಿತು ಕಿರು ಹೊತ್ತಿಗೆ ಹೊರತರಲಾಗುತ್ತಿದೆ. ಪ್ರವಾಸಿಗರ ಸಹಾಯಕ್ಕಾಗಿ ಪೊಲೀಸ್‌ ಸಹಾಯ ಕೇಂದ್ರಗಳ ಸ್ಥಾಪನೆ ಮಾಡಲಾಗಿದೆ. ಅ.5ವರೆಗೆ ನಗರದ ಜಗಜೀವನ್‌ರಾಮ್‌ ವೃತ್ತ(ಮಂಡಿ ಠಾಣೆ), ಅರಮನೆ ವರಾಹ ಗೇಟ್‌, ಕೆ.ಆರ್‌.ವೃತ್ತ(ದೇವರಾಜ ಠಾಣೆ), ಸೆಂಟ್‌ ಫಿಲೋಮಿನ ಚರ್ಚ್‌, ಗ್ರಾಮಾಂತರ ಬಸ್‌ ನಿಲ್ದಾಣ, ಗಾಂಧಿ ವೃತ್ತ(ಲಷ್ಕರ್‌ ಠಾಣೆ), ಮೈಸೂರು ಮೃಗಾಲಯ, ದಸರಾ ವಸ್ತು ಪ್ರದರ್ಶನ(ನಜರ್‌ಬಾದ್‌ ಠಾಣೆ) ಈ 8 ಸ್ಥಳಗಳಲ್ಲಿ ಬೆಳಗ್ಗೆ 9ರಿಂದ ರಾತ್ರಿ 10ರವರೆಗೆ ಸಾರ್ವಜನಿಕರಿಗೆ ಅಗತ್ಯ ಮಾರ್ಗದರ್ಶನ ನೀಡುವರು.

ಪಂಜಿನ ಕವಾಯತಿಗೆ ಸಕಲ ಸಿದ್ಧತೆ
ಚಾಮುಂಡಿಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಚಾಮುಂಡೇಶ್ವರಿಗೆ ಅಗ್ರ ಪೂಜೆ ಹಾಗೂ ಪುಷ್ಪಾರ್ಚನೆ ಮೂಲಕ ಆರಂಭವಾಗಿದ್ದ ನವರಾತ್ರಿ ಉತ್ಸವ ಜಂಬೂಸವಾರಿ ಹಾಗೂ ಬನ್ನಿಮಂಟಪದ ಮೈದಾನದಲ್ಲಿ ನಡೆಯುವ ಪಂಜಿನ ಕವಾಯತಿನ ಮೂಲಕ ದಸರೆಗೆ ತೆರೆ ಬೀಳಲಿದೆ. ವಿಜಯ ದಶಮಿಯಂದು ರಾತ್ರಿ ನಡೆಯುವ ಪಂಜಿನ ಪವಾಯತಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಅ.5ರಂದು ರಾತ್ರಿ 7.30ರಿಂದ ಪಂಜಿನಕವಾಯತು(ಟಾರ್ಚ್‌ಲೈಟ್‌ ಪೆರೇಡ್‌) ಆರಂಭವಾಗಲಿದ್ದು, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸುವರು. ನಾಡಗೀತೆ ಬಳಿಕ ಎರಡು ಗಂಟೆ ಪೊಲೀಸ್‌ ಸಿಬ್ಬಂದಿ ಸಾಹಸಮಯ ಪ್ರದರ್ಶನ ನೀಡಲಿದ್ದು, ಮೈನವಿರೇಳಿಸುವ ಬೈಕ್‌, ಅಶ್ವಾರೋಹಿ ಪಡೆಗಳ ಸಾಹಸ ಪ್ರದರ್ಶನ ಮಾಡಲಿದ್ದಾರೆ. ಕೊನೆಗೆ ಪಂಜಿನ ಕವಾಯತಿನ ಮೂಲಕ ಹತ್ತು ದಿನಗಳ ನವರಾತ್ರಿ ಉತ್ಸವಕ್ಕೆ ತೆರೆ ಬೀಳಲಿದೆ.

ಅನ್ನಪೂರ್ಣ ಕ್ಯಾಂಟೀನ್‌, ದಸರಾ ಸ್ತಬ್ಧಚಿತ್ರ ಪರಿಶೀಲಿಸಿದ ಸಚಿವರು
ಮೈಸೂರು ಬಂಡಿಪಾಳ್ಯದ ಎಪಿಎಂಸಿ ಆವರಣದಲ್ಲಿ ಸಹಕಾರ ಇಲಾಖೆಯಿಂದ ನೂತನವಾಗಿ ಆರಂಭಿ ಸಿರುವ ಕ್ಯಾಂಟೀನ್‌ಗೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಟಿ.ಸೋಮಶೇಖರ್‌ ಚಾಲನೆ ನೀಡಿದರು. ಶ್ರೀಅನ್ನಪೂರ್ಣ ಕ್ಯಾಂಟೀನ್‌ ವೀಕ್ಷಣೆ ಮಾಡಿದ ಬಳಿಕ ಮಾತನಾಡಿದ ಸಚಿವರು, ಕ್ಯಾಂಟೀನ್‌ನಲ್ಲಿ ದಸರಾವರೆಗೆ ಉಚಿತ ಊಟ ನೀಡಲಾಗುತ್ತದೆ. ನಂತರದ ದಿನಗಳಲ್ಲಿ ಹತ್ತು ರೂ.ಗೆ ಊಟ ನೀಡಲಾಗುತ್ತದೆ ಎಂದರು. ದಾನಿಗಳ ನೆರವಿನಿಂದ ರೈತ ಬಾಂಧವರಿಗೆ ರುಚಿ ಮತ್ತು ಶುಚಿಯಾದ ಊಟ ನೀಡುವ ಕೆಲಸವನ್ನು ವರ್ತಕರು ಮಾಡುತ್ತಿದ್ದಾರೆ. ಸಹಕಾರ ಕ್ಷೇತ್ರದಿಂದ ಈ ಕ್ಯಾಂಟೀನ್‌ ಆರಂಭಿಸಲಾಗಿದೆ. ದಾನಿಗಳು ಮುಂದೆ ಬಂದರೆ ರಾಜ್ಯದ ವಿವಿಧೆಡೆಯ ಎಪಿಎಂಸಿಗಳಲ್ಲಿ ಕೂಡ ಕ್ಯಾಂಟೀನ್‌ ತೆರೆಯುವ ಚಿಂತನೆ ಮಾಡಲಾಗುವುದು ಎಂದರು.

ಈ ವೇಳೆ ದಸರಾ ಜಂಬೂಸವಾರಿಯಲ್ಲಿ ಸಾಗಲಿರುವ ಸ್ತಬ್ಧಚಿತ್ರಗಳನ್ನು ವೀಕ್ಷಿಸಿದ ಸಚಿವರು, ಪ್ರತಿ ಜಿಲ್ಲೆಯಿಂದ ಸ್ತಬ್ಧಚಿತ್ರಗಳು ಆಗಮಿಸಿವೆ. ಆಯಾ ಜಿಲ್ಲೆಯ ಕಲೆ, ಸಂಸ್ಕೃತಿ ಬಿಂಬಿಸುವ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ. ಸಧ್ಯಕ್ಕೆ ಎಲ್ಲಾ ಸ್ತಬ್ಧಚಿತ್ರಗಳು ಶೇ.99ರಷ್ಟು ಪೂರ್ಣಗೊಂಡಿದ್ದು, ಅಂತಿಮ ಹಂತದಲ್ಲಿದೆ. ಸಧ್ಯಕ್ಕೆ ಯಾವುದೇ ಕೊರತೆ ಇಲ್ಲ. ಕಲಾತಂಡಗಳ ಆಗಮನವಾಗಿದೆ ಎಂದರು. ಈ ಸಂದರ್ಭ ಶಾಸಕರಾದ ನಿರಂಜನ್‌ ಕುಮಾರ್‌, ಜಿ.ಟಿ.ದೇವೇಗೌಡ, ಮೂಡಾ ಮಾಜಿ ಅಧ್ಯಕ್ಷ ಎಚ್‌.ವಿ. ರಾಜೀವ್‌ ಉಪಸ್ಥಿತರಿದ್ದರು.

ಸತೀಶ್‌ ದೇಪುರ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.