ದೌರ್ಜನ್ಯ ತಡೆಗೆ ಜನ ಜಾಗೃತಿ


Team Udayavani, Feb 7, 2018, 12:38 PM IST

m2-dourjanya.jpg

ಮೈಸೂರು: ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಯುವ ಜತೆಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಪೆ.8ರಿಂದ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ ತಿಳಿಸಿದರು.

ನಗರದ ಎಸ್ಪಿ ಕಚೇರಿ ಸಬಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಯುವ ಹಾಗೂ ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಎಸ್‌ಐ ನೇತೃತ್ವದಲ್ಲಿ 10 ಮಂದಿ ಸಿಬ್ಬಂದಿಯ ವಿಶೇಷ ಪಡೆಯನ್ನು ರಚಿಸಲಾಗಿದೆ.

ಈ ವಿಶೇಷ ಪಡೆಯು ಜಿಲ್ಲೆಯದ್ಯಾಂತ ಸಂಚರಿಸಿ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಯುವುದರ ಜತೆಗೆ ಈ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲಿದೆ. ಈ ವಿಶೇಷ ತಂಡ ಪ್ರಮುಖವಾಗಿ ಮಕ್ಕಳ ಭಿûಾಟನೆ, ಹೆಣ್ಣು ಮಕ್ಕಳನ್ನು ಚುಡಾಯಿಸುವುದು, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ಸೇರಿದಂತೆ ಮಹಿಳೆಯರು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಯುವ ಬಗ್ಗೆ ಬೀದಿನಾಟಕ ಹಾಗೂ ಇನ್ನಿತರ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಿದೆ ಎಂದರು.

ಸ್ವಯಂ ದೂರು ದಾಖಲಿಸಿ: ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ಬಾರದಿದ್ದರೂ ಪೊಲೀಸರೇ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ನಡೆಸಭೇಕಿದೆ. ಇದರ ಬದಲಿಗೆ ಮಹಿಳೆಯರು ಮತ್ತು ಮಕ್ಕಳ ಸಮಸ್ಯೆ ಪೊಲೀಸ್‌ ಇಲಾಖೆಗೆ ಸಂಬಂಧಿಸಿದ್ದಲ್ಲ ಎಂದು ಯಾವ ಅಧಿಕಾರಿಯೂ ಹೇಳುವಂತಿಲ್ಲ. ಬೇಜವಾಬ್ದಾರಿಯಿಂದ ವರ್ತಿಸಿದರೆ ಇಂತಹವರ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು. ಜಾಗೃತಿಗೆ ಕಾಲೇಜುಗಳಲ್ಲಿ ಕಾರ್ಯಾಗಾರ ನಡೆಸಲಾಗುವುದು ಎಂದು ಹೇಳಿದರು.

ಅಗತ್ಯ ಸಹಕಾರ ನೀಡಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೆ.ರಾಧಾ ಮಾತನಾಡಿ, ಜಿಲ್ಲೆಯ ಯಾವುದಾದರೂ ಒಂದು ಗ್ರಾಮವನ್ನು ಬಾಲ್ಯ ವಿವಾಹ ಮುಕ್ತ ಗ್ರಾಮವನ್ನಾಗಿಸುವ ನಿಟ್ಟಿನಲ್ಲಿ ಮೂರು ವರ್ಷಗಳ ಮಾಹಿತಿ ಕಲೆ ಹಾಕಿದರೆ ಒಂದೆರಡು ಬಾಲ್ಯ ವಿವಾಹವಾಗಿರುವ ವರದಿ ಇದೆ. ಆದ್ದರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರತಿಯೊಂದು ಕಾರ್ಯಕ್ರಮದ ಅನುಷ್ಠಾನ ಮತು ದೌರ್ಜನ್ಯ ತಡೆಗೆ ಪೊಲೀಸ್‌ ಇಲಾಖೆ ಸಹಕಾರ ಅಗತ್ಯವಿದೆ ಎಂದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ರುದ್ರಮುನಿ ಹಾಜರಿದ್ದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.