ಹಾಡಿಗಳ ಮಕ್ಕಳ ಮೊಗದಲ್ಲಿ ನಗು ಮೂಡಿಸಿದ ಪೀಪಲ್‌ ಟ್ರಿ

ಶಿಕ್ಷಣದಿಂದ ವಂಚಿತರಾಗಿದ್ದ ಗಿರಿಜನ ಮಕ್ಕಳಿಗೆ ಆಟೋಟ ಚಟುವಟಿಕೆ

Team Udayavani, Oct 22, 2020, 1:30 PM IST

mysuru-tdy-1

ಎಚ್‌.ಡಿ.ಕೋಟೆ: ಕೋವಿಡ್ ದಿಂದ ಮೂಲೆ ಗುಂಪಾಗಿದ್ದ ಗಿರಿಜನರ ಮಕ್ಕಳಿಗೆ ಪೀಪಲ್‌ ಟ್ರಿ ಸಂಸ್ಥೆಯು, ವಿವಿಧ ಆಟೋಟ ಕ್ರಿಯಾಶೀಲಚಟುವಟಿಕೆಗಳನ್ನು ಹಮ್ಮಿಕೊಂಡು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡುತ್ತಿದೆ.

ಎಚ್‌.ಡಿ.ಕೋಟೆ ತಾಲೂಕುಬಹುಭಾಗಅರಣ್ಯ,ಹಾಡಿಗಳಿಂದ ಆವೃತ್ತವಾಗಿದೆ. ಬಹುಸಂಖ್ಯೆ ಹಾಡಿ ಗಳುಅರಣ್ಯದೊಡಲ ಮಧ್ಯದಲ್ಲಿ ಸಿಲುಕಿಕೊಂಡಿವೆ. ಕೋವಿಡ್, ಲಾಕ್‌ಡೌನ್‌ನಿಂದಕಳೆದ 7 ತಿಂಗಳಿಂದ ಹಾಡಿಯ ಮಕ್ಕಳು ಕಲಿಕೆ, ಆಟೋಟಗಳಿಂದ ವಂಚಿತಾಗಿದ್ದರು. ಅರಣ್ಯದಲ್ಲೇ ಅಲೆದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಪ್ರಸ್ತುತ ಬಹುತೇಕ ಶಾಲೆಗಳು ಆನ್‌ಲೈನ್‌ ಮೂಲಕ ಮಕ್ಕಳಿಗೆ ಶಿಕ್ಷಣ ನೀಡುತ್ತಿವೆ. ಆದರೆ, ಹಾಡಿಗಳಿಗೆ ವಿದ್ಯುತ್‌ ಸಂಪರ್ಕವೇ ಇಲ್ಲದಿರುವಾಗ ಹಾಡಿಯ ಮಕ್ಕಳಿಗೆ ಶಿಕ್ಷಣ, ಆಟೋಟ, ಮನ ರಂಜನೆಯು ಮರೀಚಿಕೆಯಾಗಿದೆ.

ಇಂತಹ ಸನ್ನಿವೇಶದಲ್ಲಿ ಪೀಪಲ್‌ ಟ್ರಿ ಸಂಸ್ಥೆ ಹಾಡಿ ಗಳ ವಿದ್ಯಾವಂತ ಯುವಕರನ್ನು ಗುರುತಿಸಿ ಅವರ ಮೂಲಕ ಹಾಡಿ ಮಕ್ಕಳ ಶಿಕ್ಷಣಕ್ಕೆ ಪೂರಕವಾದಕಲಿಕೆ ತರಬೇತಿ ಕೊಡಿಸುವ ಮೂಲಕ ಅವರಿಗೆ ಶೈಕ್ಷಣಿಕ ವಾತಾವರಣ ಕಲ್ಪಿಸುತ್ತಿದೆ. ಆರಂಭದಲ್ಲಿ ತಾಲೂಕಿನ ಕೇರಳ ಗಡಿಭಾಗದ ಮಾನಿ ಮೂಲೆ ಹಾಡಿ ಮತ್ತು ಗೋಳೂರು ಹಾಡಿಗಳ ಸುಮಾರು 50ಕ್ಕೂ ಹೆಚ್ಚು ಮಕ್ಕಳಿಗೆ ಬೆಳಗ್ಗಿನಿಂದ ಸಂಜೆ ತನಕ ನೃತ್ಯ, ಹಾಡುಗಳು, ನಾಟಕ ಸೇರಿದಂತೆ ಕಲಿಕೆಗೆ ಪೂರಕವಾದ ತರಬೇತಿ ನೀಡಲಾಗುತ್ತಿದೆ. ಅಲ್ಲದೇ ತಾಲೂಕಿನ 22 ಹಾಡಿಗಳಲ್ಲಿ ಆದಿವಾಸಿಗರ ಮಕ್ಕಳ ಬೌದ್ಧಿಕ ಮಟ್ಟದ ಬೆಳವಣಿಗೆಗೆ ಪೂರಕವಾದ ತರಬೇತಿ ನೀಡಲಾಗುತ್ತಿದೆ. ನಂತರ ಹಂತ ಹಂತವಾಗಿ ತಾಲೂಕಿನ ಎಲ್ಲಾ ಹಾಡಿಗಳ ಮಕ್ಕಳಿಗೆ ತರಬೇತಿ ನೀಡಿ ಅವರನ್ನು ಸಮಾಜದ ಮುಖ್ಯ ವಾಹಿನಿ ತರುವ ಪ್ರಯತ್ನ ನಡೆಯುತ್ತಿದೆ.

ಅರಣ್ಯ ಮಧ್ಯದ ಗುಡಿಸಲುಗಳಲ್ಲೇ ಕುಳಿತು ಶಿಕ್ಷಣದಿಂದ ವಂಚಿತರಾಗಿದ್ದ ಆದಿವಾಸಿ ಮಕ್ಕಳು ಉತ್ಸಹದಿಂದ ನೃತ್ಯ, ನಾಟಕ, ಹಾಡುಗಳು ಮತ್ತಿತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಜೀವಿಕ ಉಮೇಶ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವರು ಹಾಡಿಯಲ್ಲಿ ಮಕ್ಕಳಿಗೆ ವಿವಿಧ ಶೈಕ್ಷಣಿಕ ತರಬೇತಿ ನೀಡುತ್ತಿದ್ದಾರೆ.

ಸಾಮಾಜಿಕ ಅಂತರ: ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯದ ದೃಷ್ಟಿ ಮತ್ತು ಸೋಂಕು ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಸ್ಯಾನಿ ಟೈಸರ್‌ ಬಳಕೆ, ದೈಹಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಸೇರಿದಂತೆ ನಿಯಮ ಪಾಲನೆ ಮಾಡುವ ಮೂಲಕ ತರಬೇತಿ ನೀಡುತ್ತಿರುವುದು ವಿಶೇಷವಾಗಿದೆ. ಕೊರೊನಾದಿಂದ ಸಮಾಜದ ಪರಿಚಯವಿಲ್ಲದಂತೆ ಅತಂತ್ರರಾಗಿದ್ದ ಮಕ್ಕಳ ಮೊಗದಲ್ಲಿ ಪೀಪಲ್‌ ಟ್ರಿ ಸಂಸ್ಥೆಯ ನಗು ಮೂಡಿಸಿದೆ.

-ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cyber crime

ಆಸ್ಪತ್ರೆ ಮೇಲೆ ಸೈಬರ್‌ ದಾಳಿ, ದತ್ತಾಂಶಗಳಿಗೆ ಕನ್ನ

ಬೆಳೆ ಮಳೆ

ಜಿಲ್ಲೆಯಲ್ಲಿ ಅತಿವೃಷ್ಟಿಗೆ 1,320 ಹೆಕ್ಟೇರ್‌ ಬೆಳೆ ಹಾನಿ

ದೋಚಿದ್ದ 5 ಕೋಟಿ ಮೌಲ್ಯದ ಸ್ವತ್ತು ಹಸ್ತಾಂತರ

ದೋಚಿದ್ದ 5 ಕೋಟಿ ಮೌಲ್ಯದ ಸ್ವತ್ತು ಹಸ್ತಾಂತರ

girls hostel

ಹಾಸ್ಟೆಲ್‌ನಲ್ಲಿ ಓದಲು ಕರೆಂಟಿಲ್ಲ, ಸ್ನಾನ, ಶೌಚಾಲಯಕ್ಕೂ ನೀರಿಲ್ಲ!

s-t-somashekhar

ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ಲವ್ ಬರ್ಡ್ಸ್ ತರಹ: ಎಸ್‌ಟಿ ಸೋಮಶೇಖರ್

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.