ಗೂಡ್ಸ್ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಸಾವು, ಇನ್ನೋರ್ವನಿಗೆ ಗಾಯ
Team Udayavani, May 19, 2022, 9:44 PM IST
ಹುಣಸೂರು : ಗೂಡ್ಸ್ ವಾಹನ ಢಿಕ್ಕಿ ಹೊಡದ ಪರಿಣಾಮ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ ಘಟನೆ ನಡೆದಿದೆ.
ಪಿರಿಯಾಪಟ್ಟಣ ತಾಲೂಕು ರಾವಂದೂರು ಹೋಬಳಿಯ ಆರ್.ಹೊಸಳ್ಳಿಯ ಲೇ.ವೆಂಕಟಯ್ಯರ ಪುತ್ರ ಶ್ರೀನಿವಾಸ್(53) ಮೃತಪಟ್ಟ ದುರ್ದೈವಿ.
ಘಟನೆ ವಿವರ: ಶ್ರೀನಿವಾಸ್ ತನ್ನ ಬೈಕ್‌ನಲ್ಲಿ ತನ್ನ ಸ್ನೇಹಿತ ಸ್ವಾಮಿಯೊಂದಿಗೆ ಮೈಸೂರಿನಿಂದ ಹುಣಸೂರು ಕಡೆಗೆ ಬರುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 275 ರ ಎಪಿಎಂಸಿ ಬಳಿಯ ತಿರುಮಲ ಬಡಾವಣೆ ಎದುರು ಹಿಂದಿನಿಂದ ಹೆದ್ದಾರಿಯಲ್ಲಿ ಪಿರಿಯಾಪಟ್ಟಣದ ಕಡೆ ತೆರಳುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿದ್ದು. ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸಾಗಿ ಮೈಸೂರಿನ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಹಿಂಬದಿಯ ಸವಾರನಿಗೂ ಗಾಯಗಳಾಗಿದ್ದು, ಹುಣಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಈ ಸಂಬಂಧ ನಗರ ಠಾಣೆ ಪೋಲಿಸ್ ಇನ್ಸ್ ಪೆಕ್ಟರ್ ಶ್ರೀನಿವಾಸ್ ಪ್ರಕರಣ ದಾಖಲಿಸಿಕೊಂಡು ವಾಹನಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮಕೈಗೊಂಡಿದ್ದಾರೆ.
ಇದನ್ನೂ ಓದಿ : ಕುಂಬಳೆ: ಪ್ರಯಾಣಿಕರ ಸರ ಕಳವು ಮಾಡುತ್ತಿದ್ದ ಇಬ್ಬರು ಕಳ್ಳರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಕಲರ್ಫುಲ್ ಇವೆಂಟ್ನಲ್ಲಿ ‘’ಬೈರಾಗಿ”: ಜುಲೈ 1 ರಿಲೀಸ್
ಶ್ರೀಗಂಧದಲ್ಲಿ ಡಾ. ಪುನೀತ್ ರಾಜ್ಕುಮಾರ್ ಪುತ್ಥಳಿ
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ