13 ಗ್ರಾಪಂ ಹಳ್ಳಿಗಳಿಗೆ ಕಾವೇರಿ ನೀರು ಪೂರೈಕೆಗೆ ಯೋಜನೆ


Team Udayavani, Sep 25, 2020, 3:57 PM IST

13 ಗ್ರಾಪಂ ಹಳ್ಳಿಗಳಿಗೆ ಕಾವೇರಿ ನೀರು ಪೂರೈಕೆಗೆ ಯೋಜನೆ

ಪಿರಿಯಾಪಟ್ಟಣ: ತಾಲೂಕಿನ ಮುತ್ತಿನ ಮುಳಸೋಗೆ ಹಾಗೂ ಹಾಡ್ಯದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಘಟಕಕ್ಕೆ ರಾಜ್ಯ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನಿರ್ದೇಶಕ ಆರ್‌.ಟಿ. ಸತೀಶ್‌ ನೇತೃತ್ವದ ತಂಡವು ಭೇಟಿ ನೀಡಿ ಸರ್ವೆ ನಡೆಸಿತು.

ಈ ವೇಳೆ ಮಾತನಾಡಿದ ಮಂಡಳಿ ನಿರ್ದೇಶಕ ಆರ್‌ .ಟಿ.ಸತೀಶ್‌, ಪಿರಿಯಾಪಟ್ಟಣ ಟೌನ್‌ ಸೇರಿದಂತೆ ತಾಲೂಕಿನ 13 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಜನತೆಗೆ ಕಾವೇರಿ ನೀರನ್ನು ಒದಗಿಸುವ ಉದ್ದೇಶದಿಂದ ತಾಲೂಕಿನ ಮತ್ತಿನ ಮುಳುಸೋಗೆ ಹಾಗೂ ಕೆ.ಆರ್‌.ನಗರದ ಹಾಡ್ಯ ಗ್ರಾಮದ ಕಾವೇರಿ ನದಿ ಬಳಿ ಸರ್ವೆ ನಡೆಸಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮುತ್ತಿನಮುಳುಸೋಗೆ ಬಳಿ ಕಾವೇರಿ ನದಿಯಿಂದ ಬೆಟ್ಟದಪುರ, ಹಲಗನಹಳ್ಳಿ ಹಾಗೂ ಹಿಟ್ನೆ ಹೆಬ್ಟಾಗಿಲು ಗ್ರಾಪಂ ವ್ಯಾಪ್ತಿಯ ಹಳ್ಳಿಗಳ ಜನತೆಗೆ ಕಾವೇರಿ ನೀರನ್ನು ಒದಗಿಸಲಾಗುವುದು. ಅದೇ ರೀತಿ ಕೆ.ಆರ್‌.ನಗರದ ಹಾಡ್ಯ ಗ್ರಾಮದ ಬಳಿ ಕಾವೇರಿ ನದಿಯಿಂದ ಕಿತ್ತೂರು, ರಾವಂದೂರು, ಹಂಡಿತವಳ್ಳಿ ಕಂಪಲಾಪುರ ಮಾರ್ಗವಾಗಿ ಪಿರಿಯಾಪಟ್ಟಣಕ್ಕೆಕುಡಿಯುವ ನೀರನ್ನು ಒದಗಿಸಲು ಸರ್ವೆ ನಡೆಸಿ ಕ್ರಿಯಾಯೋಜನೆ ರೂಪಿಸಲಾಗುತ್ತಿದ್ದು, ಬೇಸಿಗೆ ಪ್ರಾರಂಭಕ್ಕೂ ಮುನ್ನ ಕಾಮಗಾರಿ ಆರಂಭಿಸಲಾಗುವುದು ಎಂದರು.

ಮಂಡಳಿಯ ಮುಖ್ಯ ಅಭಿಯಂತರ ಸಿದ್ದನಾಯ್ಕ ಮಾತನಾಡಿ, ಪಿರಿಯಾಪಟ್ಟಣ ತಾಲೂಕಿನ ಗಿರಗೂರಿನ ಬಳಿ ಈಗಾಗಲೇ2.7.ಎಂಎಲ್‌ಡಿನೀರನ್ನುಸರಬರಾಜು ಮಾಡಲಾಗುತ್ತಿದ್ದು, ಇದು ಸರಿಯಾದ ಪ್ರಮಾಣದಲ್ಲಿ ಇಲ್ಲದಿರುವುದರಿಂದ7.5ಎಂಎಲ್‌ಡಿನೀರುಬೇಕೆಂದು ಬೇಡಿಕೆ ಇರುವಕಾರಣಹಾಗೂ ತಾಲೂಕಿನ13 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರ ಪರವಾಗಿ ಕುಡಿಯುವ ನೀರಿನ ಸಂಪರ್ಕದ ಬಗ್ಗೆ ಬೇಡಿಕೆ ಬಂದಿದೆ. ಇದನ್ನು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ವತಿಯಿಂದ ಪೂರೈಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ಚಂದ್ರಕುಮಾರ್‌, ಪುರಸಭಾ ಎಂಜಿನಿಯರ್‌ ಸಮಂತ್‌ ಕುಮಾರ್‌, ಕಾರ್ಯಪಾಲಕ ಅಭಿಯಂತರ ರಾಜಗೋಪಾಲ್‌, ಒಳಚಂಡಿ ಮಂಡಳಿ ಎಇಇ ಮಹದೇವ ಪ್ರಭು, ಸಹಾಯಕ ಅಭಿಯಂತರ ಅಭಿಷೇಕ್‌, ಮುಖಂಡರಾದ ಶಿವರಾಮೇಗೌಡ, ದೊಡ್ಡೇಗೌಡ, ಅರುಣ್‌ಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.