ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಪ್ರತಾಪ್ ಮೈಸೂರಿನಲ್ಲಿ ಸುತ್ತಾಟ: ವಶಕ್ಕೆ ಪಡೆದ ಪೊಲೀಸರು
Team Udayavani, Jul 20, 2020, 4:53 PM IST
ಮೈಸೂರು: ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿ ಮನೆಯಿಂದ ಹೊರಬಂದಿದ್ದ ಡ್ರೋನ್ ಕುಖ್ಯಾತಿಯ ಪ್ರತಾಪ್ ನನ್ನು ಮೈಸೂರಿನಲ್ಲಿ ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಾಪ್ ಮೈಸೂರಿನಲ್ಲಿದ್ದಾನೆಂಬ ಮಾಹಿತಿ ಪಡೆದ ಬೆಂಗಳೂರಿನ ತಲಘಟ್ಟಪುರ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹೊರ ಜಿಲ್ಲೆಗಳಿಗೆ ಭೇಟಿ ನೀಡಿದ್ದ ಪ್ರತಾಪ್ ಕೆಲ ದಿನಗಳ ಹಿಂದೆ ಬೆಂಗಳೂರಿಗೆ ಆಗಮಿಸಿದ್ದ. ಅಂಜನಾಪುರದ ಎಸ್ಎಫ್ಎಂಐಎಂಜಿ ವಿಂಡ್ ಫಾಲ್ ಅಪಾರ್ಟ್‌ಮೆಂಟ್ ನಲ್ಲಿ ವಾಸವಿದ್ದ. ಇಲ್ಲೇ ಕ್ವಾರಂಟೈನ್ ನಲ್ಲಿರುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚಿಸಿದ್ದರು.
ಕೈಗೆ ಸೀಲ್ ಕೂಡಾ ಹಾಕಿದ್ದರು. ಆದರೆ, ಪ್ರತಾಪ್ ಪ್ಲಾಟ್ ನಿಂದ ಹೊರಬಂದು ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ. ನಂತರ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇಂದು ಪ್ರತಾಪ್ ನನ್ನು ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?