ಪ್ರತಿ ಬಾರಿ ಕ್ಷೇತ್ರ ಹುಡುಕುವ ವ್ಯಕ್ತಿಯ ಮಾತಿಗೆ ಹೆಚ್ಚಿನ ಮನ್ನಣೆ ಕೊಡಬೇಕಿಲ್ಲ: ಪ್ರತಾಪ್ ಸಿಂಹ


Team Udayavani, Dec 10, 2022, 1:16 PM IST

pratap simha

ಮೈಸೂರು: ಪ್ರತಿ ಚುನಾವಣೆಯಲ್ಲೂ ಸುರಕ್ಷಿತ ಕ್ಷೇತ್ರಕ್ಕಾಗಿ ಹುಡುಕಾಡುವ ವ್ಯಕ್ತಿಯ ಮಾತಿಗೆ ಹೆಚ್ಚಿನ ಮನ್ನಣೆ ಕೊಡುವ ಅಗತ್ಯವಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾವು ಯಾವುದೇ ಪ್ರಚಾರ ಮಾಡದಿದ್ದರೂ ಕುಳಿತುಕೊಂಡೇ ಗೆಲ್ಲುತ್ತೇವೆಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ವರುಣದಿಂದ ಚಾಮುಂಡೇಶ್ವರಿಗೆ ನೆಗೆದು ಸೋತ ಸಿದ್ದರಾಮಯ್ಯ, ಬಾದಾಮಿಯಲ್ಲಿ ಸಣ್ಣ ಅಂತರದಿಂದ ಗೆದ್ದರು. ಮುಂದಿನ ಚುನಾವಣೆಯಲ್ಲಿ ಕೋಲಾರಕ್ಕೆ ಹೋಗಲೋ, ವರುಣಕ್ಕೆ ಹೋಗಲೋ ಎನ್ನುತ್ತಿರುವ ಸಿದ್ದರಾಮಯ್ಯ ವರುಣ ಕ್ಷೇತ್ರದ ಸಣ್ಣ ಸಣ್ಣ ಹಳ್ಳಿಗಳಿಗೆ ಏಕೆ ಭೇಟಿ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ನಾಳೆ ಪ್ರಧಾನಿ ಮೋದಿಯವರಿಂದ ಮೋಪಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

ಮುಂದಿನ ಚುನಾವಣೆಯಲ್ಲಿ ಗೆದ್ದು ಸಿಎಂ ಆಗುತ್ತೇವೆ ಎನ್ನುತ್ತಿರುವವರಿಗೆ ಕ್ಷೇತ್ರ ಹುಡುಕಾಡುವ ದೈನೇಸಿ ಸ್ಥಿತಿ ಏಕೆ ಬಂತು? ಅವರು ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಅವರು ಸ್ಪರ್ಧಿಸುವ ಕ್ಷೇತ್ರ ಯಾವುದೆಂದು ಮೊದಲು ಹೇಳಲಿ. ಒಂದು ಚೇರ್ ನಿಂದ ಇನ್ನೊಂದು ಚೇರ್ ಗೆ ಹೋಗಿ ಕೂರಲು ಇದೇನು ಮ್ಯೂಸಿಕಲ್ ಚೇರ್ ಆಟವಲ್ಲ ಎಂದು ವ್ಯಂಗ್ಯವಾಡಿದರು.

ವರುಣ ಬಿಟ್ಟು ಬೇರೆಲ್ಲಿಂದಾದರೂ ಸ್ಪರ್ಧಿಸಲಿ, ಮತ್ತೊಮ್ಮೆ ಬಾದಾಮಿಯಿಂದ ಸ್ಪರ್ಧಿಸಿ ಗೆಲ್ಲಲಿ. ಪ್ರತಿ ಚುನಾವಣೆಯಲ್ಲೂ ಸುರಕ್ಷಿತ ಕ್ಷೇತ್ರಕ್ಕಾಗಿ ಹುಡುಕಾಡುವ ವ್ಯಕ್ತಿಯ ಮಾತಿಗೆ ಹೆಚ್ಚಿನ ಮನ್ನಣೆ ಕೊಡುವ ಅಗತ್ಯವಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿ ಹೇಳಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.