ಕೋವಿಡ್ ಭೀತಿಯ ನಡುವೆ ಜಂಬೂ ಸವಾರಿಗೆ ಸಕಲ ಸಿದ್ದತೆ: ಗಜಪಡೆಗೆ ವರ್ಣಾಲಂಕಾರ


Team Udayavani, Oct 26, 2020, 8:59 AM IST

ಕೋವಿಡ್ ಭೀತಿಯ ನಡುವೆ ಜಂಬೂ ಸವಾರಿಗೆ ಸಕಲ ಸಿದ್ದತೆ: ಗಜಪಡೆಗೆ ವರ್ಣಾಲಂಕಾರ

ಮೈಸೂರು: ವಿಶ್ವವಿಖ್ಯಾತ ಮೈಸೂರು ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಕೋವಿಡ್-19 ಸೋಂಕು ಭೀತಿಯ ಕಾರಣದಿಂದ ಈ ಬಾರಿಯ ಆಚರಣೆಗಳಲ್ಲಿ ಹಲವು ಮಾರ್ಪಾಡು ಮಾಡಲಾಗಿದೆ. ಅರಮನೆಯಲ್ಲಿ ಈಗಾಗಲೇ ಆಚರಣೆಗಳು ಆರಂಭವಾಗಿದ್ದು, ಗಜಪಡೆಗೆ ವರ್ಣಾಲಂಕಾರ ಮಾಡಲಾಗುತ್ತಿದೆ.

ಈ ಬಾರಿ ಕೋವಿಡ್-19 ಸೋಂಕು ಭೀತಿಯಿಂದ ಜಂಬೂ ಸವಾರಿ ಅರಮನೆ ಆವರಣಕ್ಕಷ್ಟೇ ಸೀಮಿತವಾಗಲಿದೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ದಸರಾ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 2.59ರಿಂದ 3.20ರ ಮಕರ ಲಗ್ನದಲ್ಲಿ ಸಿಎಂ ಯಡಿಯೂರಪ್ಪ ಅವರಿಂದ ನಂದಿಧ್ವಜಕ್ಕೆ ಪೂಜೆ ನೆರವೇರಲಿದೆ. ಮಧ್ಯಾಹ್ನ 3.40ರಿಂದ 4.15ರ ಕುಂಭ ಲಗ್ನದಲ್ಲಿ ಯಡಿಯೂರಪ್ಪ ಹಾಗೂ ಯದುವೀರ್‌ ಅವರಿಂದ ಪುಷ್ಪಾರ್ಚನೆ ನಡೆಯಲಿದೆ. ಸುಮಾರು 30ರಿಂದ 40 ನಿಮಿಷಗಳಲ್ಲಿ ಈ ಬಾರಿಯ ಜಂಬೂ ಸವಾರಿ ಅಂತ್ಯವಾಗಲಿದೆ.

ಪ್ರತಿ ವರ್ಷದಂತೆ ಜಂಬೂ ಸವಾರಿ ವೀಕ್ಷಣೆಗೆ ಈ ಬಾರಿ ಸಾರ್ವಜನಿಕರಿಗೆ ಅವಕಾಶ ನೀಡಲಾಗಿಲ್ಲ. ಕೋವಿಡ್ ಕಾರಣದಿಂದ ಈ ಬಾರಿ ಕೇವಲ 300 ಜನರಿಗೆ ಮಾತ್ರ ಜಂಬೂ ಸವಾರಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಈ ಬಾರಿ ಅಭಿಮನ್ಯು ಆನೆ ಅಂಬಾರಿ ಹೊರಲಿದೆ. ಕೇವಲ ಐದು ಆನೆಗಳು ಮಾತ್ರ ದಸರಾ ಮೆರವಣಿಗೆಯಲ್ಲಿ ಭಾಗಿಯಾಗಲಿದೆ. ಗಜಪಡೆಯ ನೇತೃತ್ವ ವಹಿಸಿರುವ ಅಭಿಮನ್ಯು ಜೊತೆಗೆ ಕಾವೇರಿ, ವಿಜಯಾ, ಗೋಪಿ, ವಿಕ್ರಮ ಆನೆಗು ಹೆಜ್ಜೆ ಹಾಕಲಿವೆ. ಆನೆಗಳಿಗೆ ಚಿತ್ತಾರ ಮೂಡಿಸುವ ಕಾರ್ಯ ಆರಂಭವಾಗಿದ್ದು, ಹುಣಸೂರು ಮೂಲದ ಖ್ಯಾತ ಕಲಾವಿದ ನಾಗಲಿಂಗಪ್ಪ ಅವರ ತಂಡದಿಂದ ಗಜಪಡೆಗೆ ವರ್ಣಾಲಂಕಾರ ನಡೆಯುತ್ತಿದೆ.

ಇದನ್ನೂ ಓದಿ:ಅಧರ್ಮದ ವಿರುದ್ಧ ಧರ್ಮದ ವಿಜಯ: ವಿಜಯ ದಶಮಿಯ ಶುಭ ಕೋರಿದ ಸಿಎಂ ಬಿಎಸ್ ವೈ

ಅರಮನೆ ಆವರಣ ಸೇರಿ ಅರಮನೆಯ ಸುತ್ತ ಭದ್ರತಾ ಸಿಬ್ಬಂದಿ ನೇಮಿಸಲಾಗಿದೆ. ಶ್ವಾನದಳ ಹಾಗೂ ಬಾಂಬ್​ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಲಾಗಿದೆ. ಅರಮನೆಯ ಸುತ್ತ ಹಾಗೂ ಒಳ ಭಾಗದಲ್ಲಿ‌ ಒಟ್ಟು 5 ತಂಡಗಳಿಂದ ತಪಾಸಣೆ ನಡೆಸಲಾಗಿದ್ದು, ಅರಮನೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.