ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ


Team Udayavani, Mar 17, 2019, 12:09 PM IST

yad-2.jpg

ಕೆಂಭಾವಿ: ಪಟ್ಟಣದಲ್ಲಿ ಅರ್ಧಕ್ಕೆ ನಿಂತಿರುವ ರಸ್ತೆ ಅಗಲೀಕರಣ ಕಾಮಗಾರಿ, ಕುಡಿಯುವ ನೀರಿನ ಸಮಸ್ಯೆ, ರಾಜ್ಯ ಹೆದ್ದಾರಿಯಲ್ಲಿ ಬೀದಿ ದೀಪ ಅಳವಡಿಕೆ ಹಾಗೂ ಪುರಸಭೆ ಸಿಬ್ಬಂದಿ ವರ್ಗಾವಣೆ ಸೇರಿದಂತೆ ಹಲವಾರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪುರಸಭೆ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ಮಾತನಾಡಿದ ಕರವೇ ಗೌರವಾಧ್ಯಕ್ಷ ಶ್ರೀಶೈಲ ಕಾಚಾಪುರ, ರಸ್ತೆ ಅಗಲೀಕರಣ ಕಾರಣದಿಂದ ಮುಖ್ಯ ಬಜಾರ ಸೇರಿದಂತೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮನೆ ಹಾಗೂ ಅಂಗಡಿಗಳನ್ನು ನೆಲಸಮ ಮಾಡಿ ಒಂದು ತಿಂಗಳುಗಳು ಗತಿಸಿದೆ. ಆದರೆ ಪುರಸಭೆ ಅಧಿಕಾರಿಗಳು ಮಾತ್ರ ರಸ್ತೆ ಕಾಮಗಾರಿ ಕೈಗೆತ್ತಿಗೊಳ್ಳದೇ ಮೌನ ವಹಿಸಿದ್ದಾರೆ. ಇದರಿಂದ ಜನರ ನಿತ್ಯ ಸಂಚಾರಕ್ಕೆ ತೊಂದರೆಯಾಗಿದೆ. ಬೇಸಿಗೆ ಪ್ರಾರಂಭವಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಹೆಚ್ಚುತ್ತಿದೆ. ನೀರಿನ ಪ್ರಮಾಣ ಪಟ್ಟಣದಲ್ಲಿ ಸಾಕಷ್ಟಿದ್ದರೂ ಅದನ್ನು ಸರಿಯಾಗಿ ಉಪಯೋಗ ಮಾಡುವ ಗೋಜಿಗೆ ಹೋಗದೆ ಅಧಿಕಾರಿಗಳು ವಿಫಲರಾಗಿದ್ದಾರೆ.
 
ಸುರಪುರ-ಹುನಗುಂದ ರಾಜ್ಯ ಹೆದ್ದಾರಿ ಮಧ್ಯೆ ಅಳವಡಿಸಿರುವ ವಿದ್ಯುತ್‌ ಜೋಡಣೆಗೆ ಸರ್ಕಾರ ಹಣ ಬಿಡುಗಡೆಗೊಳಿಸಿದ್ದರೂ ಅದನ್ನು ಜಾರಿಗೆ ತರುವಲ್ಲಿ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಮತ್ತು ಟೌನ್‌ ಪ್ಲಾನ್‌ ಇಲ್ಲದೆ ಕಟ್ಟಡ ಪರವಾನಗಿ ನೀಡುತ್ತಿದ್ದು, ಇದೆಲ್ಲವನ್ನು ತನಿಖೆಗೆ ಒಳಪಡಿಸಿ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಬೇಕು ಮತ್ತು ರಸ್ತೆ ಅಗಲೀಕರಣ ಕಾಮಗಾರಿ ನಿಯಮದಂತೆ ಶೀಘ್ರವೇ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು. 

ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟುಹಿಡಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಂದಾಯ ನಿರೀಕ್ಷಕ ರಾಜೇಸಾಬ್‌, ದೂರವಾಣಿಯಲ್ಲಿ ಆಡಳಿತಾಧಿಕಾರಿಯೂ ಆದ ಉಪ ವಿಭಾಗಾಧಿಕಾರಿ ಶಂಕರಗೌಡ ಜತೆ ಮಾತನಾಡಿ ಮಂಗಳರವಾರದವರೆಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
 
ವಲಯ ಅಧ್ಯಕ್ಷ ಕುಮಾರ ಮೋಪಗಾರ, ಶಿವು ಮಲ್ಲಿಬಾವಿ, ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನಸ್ವಾಮಿ, ಬಾಷಾಸಾಬ ನದಾಫ್‌, ಹಂಪಣ್ಣ ಮಾಲಗತ್ತಿ, ರಮೇಶ ಖಾನಾಪುರ, ಪ್ರಕಾಶ ಹೆ ಗ್ಗನದೊಡ್ಡಿ, ಅಪ್ಪಣ್ಣ ಹೆಗ್ಗನದೊಡ್ಡಿ,ಟಿಪ್ಪು ಸುಲ್ತಾನ್‌ ಸಂಘದ ಅಧ್ಯಕ್ಷ ಬಂದೇನವಾಜ್‌  ನಾಲತವಾಡ, ಇಲಿಯಾಸ್‌ ಪಟೇಲ್‌, ಚಾಂದಪಾಶಾ ಪರಸನಹಳ್ಳಿ, ಬಾಪುಗೌಡ ಏವೂರ, ಶಾಂತಯ್ಯ ಗುತ್ತೇದಾರ, ಮಲ್ಲನಗೌಡ ಕದೆಳ್ಳಿ, ವೀರೇಶ ನಾಯೊಡಿ, ದೇವು ಭಜಂತ್ರಿ ಹಾಗೂ ವಿಠ್ಠಲ ಇದ್ದರು. 

ಟಾಪ್ ನ್ಯೂಸ್

11

Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

13

Tollywood: ಚಿರಂಜೀವಿ ನಾಲ್ಕು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ – ರಾಮ್‌ ಚರಣ್

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

9

ನಿಮಿರು ದೌರ್ಬಲ್ಯ ಚಿಕಿತ್ಸೆಯಲ್ಲಿ ಜೀವನ ವಿಧಾನ ಮತ್ತು ಆಹಾರ ಶೈಲಿ ಬದಲಾವಣೆಗಳು

12

ಕಾಯಲು ಇರುವವಳು: ಮೂಕ ಭಾಷೆ… ಮೌನ ಸಂದೇಶ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadadasd

Yadgir: ರೀಲ್ಸ್ ಮಾಡಿದ ಯುವಕನಿಗೆ ಜೀವ ಬೆದರಿಕೆ ಹಾಕಿದ ಡಿ.ಬಾಸ್ ಸಂಘದ ಜಿಲ್ಲಾಧ್ಯಕ್ಷ!

Shahapur ಬಿಸಿಯೂಟ ಸೇವಿಸಿ 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Shahapur ಬಿಸಿಯೂಟ ಸೇವಿಸಿ 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ರಾಜೀ ಸಂಧಾನದಿಂದ ಕಕ್ಷಿದಾರರಿಗೆ ಶೀಘ್ರ ನ್ಯಾಯ: ಬಿ.ಎಸ್‌.ರೇಖಾ

ರಾಜೀ ಸಂಧಾನದಿಂದ ಕಕ್ಷಿದಾರರಿಗೆ ಶೀಘ್ರ ನ್ಯಾಯ: ಬಿ.ಎಸ್‌.ರೇಖಾ

ದೊರೆಯ ಕುವರನಿಗೆ ‘ಕೈ’ ಹಿಡಿದ ಸುರಪುರ ಜನತೆ : ರಾಜಾ ವೇಣುಗೋಪಾಲ ನಾಯಕ ಗೆಲುವು

Surapura: ದೊರೆಯ ಕುವರನಿಗೆ ‘ಕೈ’ ಹಿಡಿದ ಸುರಪುರ ಜನತೆ : ರಾಜಾ ವೇಣುಗೋಪಾಲ ನಾಯಕ ಗೆಲುವು

1-Yadagiri

Yadagiri Result: ಸೋಲನ್ನು ಒಪ್ಪಿಕೊಂಡು, ಹೊರ ನಡೆದ ರಾಜೂಗೌಡ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

11

Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

10-

Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು

13

Tollywood: ಚಿರಂಜೀವಿ ನಾಲ್ಕು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ – ರಾಮ್‌ ಚರಣ್

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.