ಪ್ರವೀಣ್ ಹತ್ಯೆ ಖಂಡಿಸಿ ಹುಣಸೂರಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Team Udayavani, Jul 29, 2022, 9:36 AM IST

1

ಹುಣಸೂರು: ಮಂಗಳೂರು ಜಿಲ್ಲಾ ಯುವ ಮೋರ್ಚಾದ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಖಂಡಿಸಿ ತಾಲೂಕು ಬಿಜೆಪಿ ವತಿಯಿಂದ ಗುರುವಾರದಂದು ಪ್ರತಿಭಟನೆ ನಡೆಸಿದರು.

ನಗರದ ಸಂವಿದಾನ ಸರ್ಕಲ್‌ನಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳನ್ನು ಬಂಧಿಸಬೇಕು. ಇತ್ತೀಚೆಗೆ ಮೂವರು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಹತ್ಯೆಗೈದವರನ್ನು ಗಲ್ಲಿಗೇರಿಸಬೇಕು. ಉತ್ತರ ಪ್ರದೇಶ ಮಾದರಿ ಕಠಿಣ ಕಾನೂನು ಜಾರಿಗೊಳಿಸಬೇಕು. ಪಿಎಫ್.ಐ, ಎಸ್.ಎಫ್.ಐ, ಎಸ್.ಡಿ.ಪಿ.ಐ ಸಂಘಟನೆಗಳನ್ನು ನಿಷೇಧಿಸಬೇಕೆಂಬ ಘೋಷಣೆ ಕೂಗಿದರು.

ನಂತರ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷ ಹಳ್ಳದ ಕೊಪ್ಪಲು ನಾಗಣ್ಣ, ರಾಜ್ಯ ಮತ್ತು ರಾಷ್ಟ್ರದಲ್ಲಿ ಹಿಂದೂಗಳ ಹತ್ಯೆ ನಿರಂತರವಾಗಿದ್ದು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದರೂ ಸಹ ಹಿಂದೂಗಳ ಹತ್ಯೆಗೆ ಮುಕ್ತಿ ಸಿಗುತ್ತಿಲ್ಲ. ಉಗ್ರವಾದ ಹೆಚ್ಚುತ್ತಲೇ ಇದ್ದು ಕಡಿವಾಣ ಹಾಕದಿದ್ದಲ್ಲಿ ಹಿಂದೂ ಯುವಕರಿಗೆ ಉಳಿಗಾಲವಿಲ್ಲ. ಹೀಗಾಗಿ ಯು.ಪಿ. ಮಾದರಿಯ ಕಾನೂನು ಜಾರಿಗೆ ಸರಕಾರ ಗಂಭೀರ ಚಿಂತನೆ ನಡೆಸಬೇಕೆಂದು ಒತ್ತಾಯಿಸಿದರು.

ನಗರ ಅಧ್ಯಕ್ಷ ಹಾಗೂ ಹೂಡ ಅಧ್ಯಕ್ಷ ಗಣೇಶ್‌ ಕುಮಾರ ಸ್ವಾಮಿ ಮಾತನಾಡಿ, ಕಳೆದ ಆರು ತಿಂಗಳಿನಿಂದಾಚೆಗೆ ಹಿಂದೂ ಸಂಘಟನೆಗಳ ಮೂವರ ಹತ್ಯೆಯಾಗಿದ್ದು, ನಮ್ಮ ಸರಕಾರಗಳು ಏನೂ ಮಾಡಲಾಗದೆ ಕೈಕಟ್ಟಿ ಕುಳಿತಿದ್ದು, ದುಶ್ಕೃತ್ಯ ಎಸಗಿರುವವರನ್ನು ಬಂಧಿಸುವುದರೊಂದಿಗೆ ಗಲ್ಲಿಗೇರಿಸಬೇಕೆಂದು ಆಗ್ರಹಿಸಿದರು.

ನಗರಸಭಾ ಸದಸ್ಯ ವಿವೇಕಾನಂದ ಮಾತನಾಡಿ, ಸರಣಿ ಮಾದರಿಯಲ್ಲಿ ಅಮಾಯಕ ಹಿಂದೂ ಯುವಕರ ಹತ್ಯೆ ನಡೆಯುತ್ತಲೇ ಇದ್ದು, ನಮ್ಮದೇ ಸರಕಾರವಿದ್ದರೂ ಏನೂ ಮಾಡಲಾಗದ ಸ್ಥಿತಿಗೆ ತಲುಪಿದ್ದೇವೆಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯರಾದ ರಮೇಶ್, ಶ್ರೀನಿವಾಸ್, ಅರುಣ್ ಚೌವಾಣ್ಹ್, ನಗರ ಮಹಿಳಾ ಅಧ್ಯಕ್ಷೆ ಕಮಲ ಪ್ರಕಾಶ್, ತಂಬಾಕು ಮಂಡಳಿ ಸದಸ್ಯ ದಿನೇಶ್, ಭೂ ನ್ಯಾಯಾ ಮಂಡಳಿ ಸದಸ್ಯ ಗಣಪತಿ, ಮುಖಂಡರಾದ ನಾಗರಾಜ ಮಲ್ಲಾಡಿ, ಹನಗೋಡು ಮಂಜುನಾಥ್, ಹರವೆ ಮಹೇಶ್, ನಾಗೇಂದ್ರ, ಗೋವಿಂದ ನಾಯಕ್, ನಾರಾಯಣ, ರವೀಶ್, ಸುರೇಗೌಡ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.