ಗೈರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು


Team Udayavani, Nov 26, 2019, 3:00 AM IST

gyraada

ಕೆ.ಆರ್‌.ನಗರ: ಕಳೆದ ನಾಲ್ಕು ವರ್ಷಗಳಿಂದ ಹತ್ತಕ್ಕೂ ಅಧಿಕ ಸಾಮಾನ್ಯ ಮತ್ತು ವಿಶೇಷ ಸಭೆಗಳು ನಡೆದಿದ್ದು, ಅವುಗಳಿಗೆ ಕೆಲವು ತಾಲೂಕು ಮಟ್ಟದ ಅಧಿಕಾರಿಗಳು ಗೈರಾಗಿ ಕಚೇರಿಯ ಸಿಬ್ಬಂದಿಯನ್ನು ಕಳುಹಿಸುವ ಪರಿಪಾಠ ಬೆಳೆಸಿಕೊಂಡಿದ್ದು, ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ತಾಪಂ ಸದಸ್ಯರು ಆಗ್ರಹಿಸಿದರು.

ತಾಲೂಕು ಪಂಚಾಯ್ತಿ ಕೃಷ್ಣರಾಜೇಂದ್ರ ಸಭಾಂಗಣದಲ್ಲಿ ಪ್ರಭಾರ ಅಧ್ಯಕ್ಷ ಕೆ.ಪಿ.ಯೋಗೇಶ್‌ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ತಾಪಂ ವಿಶೇಷ ಸಭೆಯಲ್ಲಿ ಮಾತನಾಡಿದ ಸದಸ್ಯರಾದ ಕೆ.ಎಲ್‌.ಲೋಕೇಶ್‌, ಜಿ.ಎಸ್‌.ಮಂಜುನಾಥ್‌, ಮುಂಡೂರು ಕುಮಾರ್‌, ಶ್ರೀನಿವಾಸಪ್ರಸಾದ್‌, ಈವರೆಗೆ ಗೈರಾಗಿರುವ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಜರುಗಿಸಿದ್ದೀರಿ ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಇಒ ರಮೇಶ್‌, ಆ ಬಗ್ಗೆ ಇಂದಿನ ಸಭೆಯಲ್ಲಿ ನಿರ್ಣಯ ಕೈಗೊಂಡು ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯ್ತಿ ಮತ್ತು ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ತಿಳಿಸಿದರು. ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ನಿಯಂತ್ರಿಸಲು ಜನಪ್ರತಿನಿಧಿಗಳು ಮತ್ತು ಕಾರ್ಯನಿರ್ವಹಣಾಧಿಕಾರಿಗಳಿಂದಲೂ ಆಗುತ್ತಿಲ್ಲ. ಚುನಾಯಿತ ಸದಸ್ಯರ ಕರೆಗಳನ್ನು ಸ್ವೀಕರಿಸದೆ ಕೆಲವರು ಉದ್ಧಟತನ ತೋರುತ್ತಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸದಸ್ಯರಾದ ಮಲ್ಲಿಕಾ, ಚಂದ್ರಶೇಖರ್‌ ಒತ್ತಾಯಿಸಿದರು.

ಕ್ರಮ ಕೈಗೊಳ್ಳಿ: ಸಿದ್ದಾಪುರದಲ್ಲಿ ಪತಿ, ಪತ್ನಿಯರಿಗೆ ಬಸವ ವಸತಿ ಯೋಜನೆಯಡಿ ಮನೆ ಮಂಜೂರು ಮತ್ತು ತೋಟಗಾರಿಕೆ ಇಲಾಖೆಯ ವತಿಯಿಂದ ಪಾಲಿಹೌಸ್‌ ನಿರ್ಮಾಣಕ್ಕೆ ಸಹಾಯಧನ ನೀಡಲಾಗಿದ್ದು, ಈ ಬಗ್ಗೆ ಕಳೆದ ಸಾಮಾನ್ಯ ಸಭೆಯಲ್ಲಿ ನಾನು ದಾಖಲೆ ಸಮೇತ ವಿಷಯ ಬಹಿರಂಗಪಡಿಸಿದ್ದೆ. ಆ ಬಗ್ಗೆ ಯಾವ ಕ್ರಮ ಜರುಗಿಸಲಾಗಿದೆ ಎಂದು ಸದಸ್ಯ ಕೆ.ಎಲ್‌.ಲೋಕೇಶ್‌ ಪ್ರಶ್ನಿಸಿದರು.

ಇದಕ್ಕೆ ಸ್ಪಷ್ಟನೆ ನೀಡಿದ ಇಒ ಎಂ.ಎಸ್‌.ರಮೇಶ್‌, ಆ ಸಂಬಂಧ ಗ್ರಾಪಂ ಹಾಗೂ ತೋಟಗಾರಿಕೆ ಇಲಾಖೆಯಿಂದ ಸಮಗ್ರ ವರದಿ ತರಿಸಿಕೊಳ್ಳುವುದರ ಜತೆಗೆ ನಾನೇ ಖುದ್ದು ಸ್ಥಳ ಪರಿಶೀಲಿಸಿ ತನಿಖೆಯ ನಂತರ ಶಿಸ್ತು ಕ್ರಮ ಜರುಗಿಸುತ್ತೇನೆಂದರು. ಸಭೆಯಲ್ಲಿ ಆರೋಗ್ಯಾಧಿಕಾರಿ ಕೆ.ಆರ್‌.ಮಹೇಂದ್ರಪ್ಪ, ವೈದ್ಯಾಧಿಕಾರಿ ಡಾ.ಶಿವಶಂಕರ್‌, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಅರ್ಕೇಶ್‌ಮೂರ್ತಿ, ಮಂಜುನಾಥ್‌, ಸದಸ್ಯರಾದ ಸಿದ್ದಮ್ಮ, ಸಾಕಮ್ಮ, ರತ್ನಮ್ಮ, ಸುನೀತಾ ಇತರರಿದ್ದರು.

ಅಧಿಕಾರಿಗಳೇ ಬರಬೇಕು, ಸಿಬ್ಬಂದಿ ಕಳುಹಿಸಬೇಡಿ: ಮುಂದಿನ ತಾಪಂ ಸಾಮಾನ್ಯ ಸಭೆಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳನ್ನು ಹೊರತುಪಡಿಸಿ ಕಚೇರಿ ಸಿಬ್ಬಂದಿ ಬರಲು ಅವಕಾಶ ನೀಡುವುದಿಲ್ಲ ಎಂದು ತಾಲೂಕು ಪಂಚಾಯ್ತಿ ಪ್ರಭಾರ ಅಧ್ಯಕ್ಷ ಕೆ.ಪಿ.ಯೋಗೇಶ್‌ ತಿಳಿಸಿದರು.ಈವರೆಗೆ ಸಭೆಗಳಿಗೆ ಗೈರಾಗಿರುವ ಅಧಿಕಾರಿಗಳ ಮಾಹಿತಿಯನ್ನು ಸರ್ಕಾರಕ್ಕೆ ಕಳುಹಿಸಿ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಪತ್ರ ಬರೆಯಿರಿ ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್‌.ರಮೇಶ್‌ಗೆ ತಾಕೀತು ಮಾಡಿದರು.

ಟಾಪ್ ನ್ಯೂಸ್

news ningajja

ಗಂಗಾವತಿ : ಆನೆಗೊಂದಿ ಬಳಿಯ ದುರ್ಗಾ ಪ್ಯಾರಡೈಸ್ ರೆಸಾರ್ಟ್ ಗೆ  ಬೆಂಕಿ

thumb 1

ಆರ್‌ಸಿಬಿಗೆ ಒಲಿದೀತೇ ಇನ್ನೊಂದು ಸುತ್ತಿನ ಲಕ್‌? ಲಕ್ನೋ ವಿರುದ್ಧ ಇಂದು ಎಲಿಮಿನೇಟರ್‌ ಪಂದ್ಯ

ಕರಾವಳಿಯಲ್ಲಿ 18 ಹೊಸ ಪಿಯು ಕಾಲೇಜು ?

ಕರಾವಳಿಯಲ್ಲಿ 18 ಹೊಸ ಪಿಯು ಕಾಲೇಜು ?

ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ ವಿಂಗಡಣೆ,ಮೀಸಲಾತಿ ನಿಗದಿ: ಹೈಕೋರ್ಟ್‌ನಿಂದ 12 ವಾರಗಳ ಗಡು

ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ ವಿಂಗಡಣೆ,ಮೀಸಲಾತಿ ನಿಗದಿ: ಹೈಕೋರ್ಟ್‌ನಿಂದ 12 ವಾರಗಳ ಗಡು

ವಿಜಯೇಂದ್ರಗೆ ಕೊಕ್‌: ಬಿ.ಎಸ್‌. ಯಡಿಯೂರಪ್ಪ ನಡೆ ನಿಗೂಢ

ವಿಜಯೇಂದ್ರಗೆ ಕೊಕ್‌: ಬಿ.ಎಸ್‌. ಯಡಿಯೂರಪ್ಪ ನಡೆ ನಿಗೂಢ

astro

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ನಿಯಮ ಗೌರವಿಸಿ, ಉಲ್ಲಂಘನೆ ಮಾಡಲೇಬೇಡಿ; ಚೀನಕ್ಕೆ ಕ್ವಾಡ್‌ ರಾಷ್ಟ್ರಗಳ ಕಠೊರ ಎಚ್ಚರಿಕೆ

ನಿಯಮ ಗೌರವಿಸಿ, ಉಲ್ಲಂಘನೆ ಮಾಡಲೇಬೇಡಿ; ಚೀನಕ್ಕೆ ಕ್ವಾಡ್‌ ರಾಷ್ಟ್ರಗಳ ಕಠೊರ ಎಚ್ಚರಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಕ್ತಿ, ಮಾರುಕಟ್ಟೆಯಲ್ಲಿ ಖರೀದಿಸುವ ಸರಕಲ್ಲ: ಪೇಜಾವರ ಶ್ರೀ

ಭಕ್ತಿ, ಮಾರುಕಟ್ಟೆಯಲ್ಲಿ ಖರೀದಿಸುವ ಸರಕಲ್ಲ: ಪೇಜಾವರ ಶ್ರೀ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಸಮಿತಿ ರಚನೆ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಸಮಿತಿ ರಚನೆ

dsvsdbdbve

ಧರ್ಮರಾಜ್ಯ ಸಾಪನೆ ಹಿಂದೂ ಧರ್ಮದ ಪರಮ ಗುರಿ

hunasooru news

ಮಳೆಗೆ ನಾಗರಹೊಳೆ ಉದ್ಯಾನಕ್ಕೆ ಜೀವಕಳೆ

ಮದುವೆಗೆ ಅಡ್ಡಿಯಾದ ಪ್ರಿಯತಮೆಯ ಮಗುವನ್ನೇ ಅನಾಥವೆಂದು ಬಿಂಬಿಸಿ ಪೊಲೀಸರಿಗೊಪ್ಪಿಸಿದ ಪ್ರಿಯಕರ!

ಮದುವೆಗೆ ಅಡ್ಡಿಯಾದ ಪ್ರಿಯತಮೆಯ ಮಗುವನ್ನೇ ಅನಾಥವೆಂದು ಬಿಂಬಿಸಿ ಪೊಲೀಸರಿಗೊಪ್ಪಿಸಿದ ಪ್ರಿಯಕರ!

MUST WATCH

udayavani youtube

SSLC ಸಾಧಕರಿಗೆ ಉದಯವಾಣಿ ಸನ್ಮಾನ

udayavani youtube

ಉಡುಪಿ : ಹಲವು ಸಂಶಯಗಳನ್ನು ಹುಟ್ಟು ಹಾಕಿದ ಯುವಜೋಡಿ ಸಾವು ಪ್ರಕರಣ

udayavani youtube

ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

ಹೊಸ ಸೇರ್ಪಡೆ

news ningajja

ಗಂಗಾವತಿ : ಆನೆಗೊಂದಿ ಬಳಿಯ ದುರ್ಗಾ ಪ್ಯಾರಡೈಸ್ ರೆಸಾರ್ಟ್ ಗೆ  ಬೆಂಕಿ

thumb 1

ಆರ್‌ಸಿಬಿಗೆ ಒಲಿದೀತೇ ಇನ್ನೊಂದು ಸುತ್ತಿನ ಲಕ್‌? ಲಕ್ನೋ ವಿರುದ್ಧ ಇಂದು ಎಲಿಮಿನೇಟರ್‌ ಪಂದ್ಯ

ಕರಾವಳಿಯಲ್ಲಿ 18 ಹೊಸ ಪಿಯು ಕಾಲೇಜು ?

ಕರಾವಳಿಯಲ್ಲಿ 18 ಹೊಸ ಪಿಯು ಕಾಲೇಜು ?

ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ ವಿಂಗಡಣೆ,ಮೀಸಲಾತಿ ನಿಗದಿ: ಹೈಕೋರ್ಟ್‌ನಿಂದ 12 ವಾರಗಳ ಗಡು

ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ ವಿಂಗಡಣೆ,ಮೀಸಲಾತಿ ನಿಗದಿ: ಹೈಕೋರ್ಟ್‌ನಿಂದ 12 ವಾರಗಳ ಗಡು

ವಿಜಯೇಂದ್ರಗೆ ಕೊಕ್‌: ಬಿ.ಎಸ್‌. ಯಡಿಯೂರಪ್ಪ ನಡೆ ನಿಗೂಢ

ವಿಜಯೇಂದ್ರಗೆ ಕೊಕ್‌: ಬಿ.ಎಸ್‌. ಯಡಿಯೂರಪ್ಪ ನಡೆ ನಿಗೂಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.