Hunasuru News: ಗೂಡ್ಸ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Team Udayavani, Apr 9, 2023, 8:36 PM IST
ಹುಣಸೂರು: ಟಾಟಾ ಏಸ್ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆ.ಆರ್.ನಗರ ರಸ್ತೆಯ ಕಟ್ಟೆಮಳವಾಡಿ ಕ್ರಾಸ್ ಬಳಿ ಭಾನುವಾರ ನಡೆದಿದೆ.
ತಾಲೂಕಿನ ಹುಣಸೇಗಾಲ ಗ್ರಾಮದ ನಿವಾಸಿ ಪುಟ್ಟೇಗೌಡರ ಪುತ್ರ ಮಂಜು(32) ಮೃತ ದುರ್ದೈವಿ. ಇವರಿಗೆ ಪತ್ನಿ. 4 ಮತ್ತು 6 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಆಗಿರೋದಿಷ್ಟು:
ಮಂಜು ಕುಟುಂಬದೊಂದಿಗೆ ಕಟ್ಟೆಮಳವಾಡಿ ಕಡೆ ಹೋಗುತ್ತಿದ್ದ ವೇಳೆ ಕೆ.ಆರ್.ನಗರ ಕಡೆಯಿಂದ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ ಪರಿಣಾಮ ಮಂಜು ತಲೆ,ಕೈ ಕಾಲುಗಳಿಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ ನಲ್ಲಿದ್ದ ಪತ್ನಿ ತುಳಸಿ ಹಾಗೂ ಮಕ್ಕಳಿಗೂ ಸಣ್ಣ ಪುಟ್ಟಗಾಯಗಳಾಗಿದ್ದು. ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಷ್ಟೆ ಅಲ್ಲದೆ ರಸ್ತೆಯಲ್ಲಿ ಬರುತ್ತಿದ್ದ ಮತ್ತೊಂದು ಬೈಕಿಗೂ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದ್ದು. ಬೈಕ್ ಸವಾರ ಹಿರಿಕ್ಯಾತನಹಳ್ಳಿಯ ಸಚ್ಚಿನ್ ಎಂಬುವವರ ತಲೆಗೆ ಗಂಭೀರ ಗಾಯವಾಗಿದ್ದು ಅವರನ್ನು ಹುಣಸೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ನಂತರ ಗೂಡ್ಸ್ ವಾಹನ ಚಾಲಕ ಪರಾರಿಯಾಗಲೆತ್ನಿಸಿದ್ದು ಸಾರ್ವಜನಿಕರು ಚಾಲಕನನ್ನು ಹಿಡಿದು ಗ್ರಾಮಾಂತರ ಠಾಣೆ ಪೊಲೀಸರಿಗೊಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ