ನೆರೆದಿದ್ದ ಜನರನ್ನು ರೋಮಾಂಚನಗೊಳಿಸಿದ ಎತ್ತಿನಗಾಡಿ ಓಟ

Team Udayavani, Jan 30, 2017, 12:21 PM IST

mys1.jpg

ತಿ.ನರಸೀಪುರ: ರೋಮಾಂಚನಕಾರಿ ಓಟ. ಗೆಲ್ಲಲೇ ಬೇಕೆಂಬ ಛಲ. ರೈತರಲ್ಲಿ ಹುಮ್ಮಸ್ಸು… ಇದು  ತಿ.ನರಸೀಪುರದ ಹೊರ ವಲಯ ದಲ್ಲಿ ಇರುವ ತಿರುಮಲಕೂಡಲಿನ ರಾಷ್ಟ್ರೀಯ ಹೆದ್ದಾರಿ 212ರ ಬಳಿ ಭಾನುವಾರ ಕಂಡ ದೃಶ್ಯ. ಶ್ರೀಚೌಡೇಶ್ವರಿ ಅಮ್ಮನವರ ಕೋಂಡೋತ್ಸವದ ಪ್ರಯುಕ್ತ ನಡೆದ ಎತ್ತಿನಗಾಡಿ ಓಟದ ಸ್ಪರ್ಧೆ ನೋಡಲು ಸಾವಿರಾರು ಜನರು ಜಮಾಯಿಸಿದ್ದರು.

ಎತ್ತಿನಗಾಡಿ ಓಟದ ಸ್ಪರ್ಧೆಗೆ ಚಾಲನೆ ನೀಡುತ್ತಿದ್ದಂತೆ ನಡೆದ ಜೋಡಿ ಎತ್ತಿನಗಾಡಿಗಳ ಓಟದ ಸ್ಪರ್ಧೆ ರೋಮಾಂಚನಕಾರಿಯಾಗಿತ್ತು. ಸ್ಪರ್ಧೆಯ ಆರಂಭಕ್ಕೂ ಮೊದಲು ಎತ್ತುಗಳೊಂದಿಗೆ ತಾಲೀಮು ನಡೆಸಿದ ರೈತರು ಗೆಲ್ಲುವುದಕ್ಕೆ ತಂತ್ರಗಾರಿಕೆ ರೂಪಿಸುತ್ತಿದ್ದರು. ಮೊದಲ ಸುತ್ತಿನ ಸ್ಪರ್ಧೆಯಲ್ಲಿ ಗಾಡಿಯ ನೊಗಕ್ಕೆ ಹೆಗಲು ನೀಡಲು ಕೆಲವು ಎತ್ತುಗಳು ಹಿಂದೇಟು ಹಾಕಿದ್ದರಿಂದ ಅರ್ಧತಾಸು ತಡವಾಯಿತು.

ಮೈಸೂರು ಸೇರಿದಂತೆ ಮಂಡ್ಯ, ಕನಕಪುರ ಹಾಗೂ ಇನ್ನಿತರ ಕಡೆಗಳಿಂದ ಸ್ಪರ್ಧೆಯಲ್ಲಿ ಭಾಗವಹಿಸಲು ನೂರಾರು ಜೋಡಿ ಎತ್ತುಗಳು ಬಂದಿದ್ದವು. ಸ್ಪರ್ಧೆಗೆ ಚಾಲನೆ ನೀಡಿದ ದಿ ಸಿಟಿ ಲೋಕಲ್‌ ಲಾರಿ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಬಿ.ರೇವಣ್ಣ ಮಾತನಾಡಿ, ಗ್ರಾಮೀಣ ಕ್ರೀಡೆಗಳನ್ನು ಉಳಿಸಲು ಕಾಲ ಕಾಲಕ್ಕೆ ಪಟ್ಟಣ ಪ್ರದೇಶಗಳಲ್ಲಿ ಗ್ರಾಮೀಣ ಸೊಗಡಿನ ಕ್ರೀಡಾಕೂಟಗಳನ್ನು ಆಯೋಜಿಸಬೇಕು ಎಂದು ಹೇಳಿದರು.

ಸಾಂಪ್ರಾದಾಯಿಕ ಕ್ರೀಡೆಯಾಗಿರುವ ಎತ್ತಿನಗಾಡಿ ಓಟದ ಸ್ಪರ್ಧೆ ರೈತರಿಗೆ ಜಾನು ವಾರುಗಳನ್ನು ತಯಾರುಗೊಳಿಸಲು ಸಹಕಾರಿಯಾಗಲಿದೆ. ದುಡಿಯುವ ರಾಸುಗಳು ಕ್ರೀಡಾಕೂಟಗಳಲ್ಲಿ ಭಾಗ ವಹಿಸಲು ದೈಹಿಕವಾಗಿ ಅಣಿಯಾಗುವುದ ರಿಂದ ಅವುಗಳ ಸಾಮರ್ಥ್ಯದ ಬೆಳವಣಿಗೆ ಯಾಗಲಿದೆ. ಅಲ್ಲದೆ ಜನರಿಗೂ ಕೂಡ ಸ್ಥಳೀಯವಾಗಿ ಮನರಂಜನೆ ಸಿಗಲಿದೆ. ಯುವ ಸಮೂಹದ ಸಂಘಟನೆಗಳು ಕ್ರೀಡಾಕೂಟಗಳನ್ನು ಅಚ್ಚುಕಟ್ಟಾಗಿ ನಡೆಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ರೇವಣ್ಣ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಮಾದೇಗೌಡ, ಪುರಸಭಾ ಅಧ್ಯಕ್ಷೆ ಸುಧಾ ಗುರುಮಲ್ಲಪ್ಪ, ಕರವೇ ರಾಜ್ಯ ಉಪಾಧ್ಯಕ್ಷ ಹಾಗೂ ತಾ.ಪಂ ಸದಸ್ಯ ಆರ್‌.ಚಲುವರಾಜು, ಮಾಜಿ ಉಪಾಧ್ಯಕ್ಷ ಬಿ.ಮರಯ್ಯ, ಮಾಜಿ ಪ್ರಧಾನ ಎಂ.ಡಿ.ಬಸವರಾಜು, ಖಾಸಗಿ ಬಸ್‌ ಏಜೆಂಟರ ಸಂಘದ ಅಧ್ಯಕ್ಷ ಪಿ.ಪುಟ್ಟರಾಜು, ಕೆಂಪೇಗೌಡ ಬ್ರಿಗೇಡ್‌ ಅಧ್ಯಕ್ಷ ಸಂದೇಶ್‌ ಸ್ವಾಮಿನಾಥ್‌ಗೌಡ, ಎಪಿಎಂಸಿ ಸದಸ್ಯ ಕೆ.ಬಿ.ಪ್ರಭಾಕರ, ಭೈರಾಪುರ ಗ್ರಾ.ಪಂ ಮಾಜಿ ಉಪಾಧ್ಯಕ್ಷ ತಿರುಮಕೂಡಲು ಪುಟ್ಟು,

ಮಾಜಿ ಅಧ್ಯಕ್ಷ ಎ.ಜೆ.ವೆಂಕಟೇಶ, ಮಾಜಿ ಸದಸ್ಯೆ ನಾಗರತ್ನಮ್ಮ, ಕಾಂಗ್ರೆಸ್‌ ಮುಖಂಡ ಸುಬ್ಬನಾಯಕ, ಗುತ್ತಿಗೆದಾರ ಜೆ.ಅನೂಪ್‌ಗೌಡ, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕಿರಗಸೂರು ಶಂಕರ್‌, ಲೈಲ್ಯಾಂಡ್‌ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಎಲ್‌.ರವಿ, ಕರವೇ ಅಧ್ಯಕ್ಷ ರಂಗಸಮುದ್ರ ಸಿ.ವೆಂಕಟೇಶ್‌, ಪ್ರಧಾನ ಕಾರ್ಯದರ್ಶಿ ರವಿಕುಮಾರ್‌, ಎತ್ತಿನಗಾಡಿ ಮಾಲೀಕರ ಸಂಘದ ಅಧ್ಯಕ್ಷ ಮಹೇಶ, ಖಜಾಂಚಿ ದೀಪು, ಯಜಮಾನರಾದ ಕೃಷ್ಣನಾಯಕ, ತಿರುಮಕೂಡಲು ನಾಗಣ್ಣ, ದಿಲೀಪ್‌ಕುಮಾರ್‌ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.