16 ಸಾವಿರ ಕೋಟಿ ರೂ.ಬರ ಪರಿಹಾರಕ್ಕೆ ಮನವಿ: ಸಿಎಂ

Team Udayavani, Nov 29, 2018, 6:35 AM IST

ಮೈಸೂರು: ರಾಜ್ಯದ 100 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, 16 ಸಾವಿರ ಕೋಟಿ ರೂ.ಗಳ ಪರಿಹಾರ ನೀಡುವಂತೆ ಕಳೆದ ಅ.30ರಂದು ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಬರಪೀಡಿತ ತಾಲೂಕುಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದ್ದೇನೆ. ಮುಂದಿನ 4-5 ತಿಂಗಳಲ್ಲಿ ದೊಡ್ಡಮಟ್ಟದ ತೊಂದರೆ ಸಂಭವಿಸಲಿದ್ದು, ಮುಂಜಾಗ್ರತಾ ಕ್ರಮ ವಹಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ನನ್ನದು ಮೈತ್ರಿ ಸರ್ಕಾರ, ಬಿಗಿ ನಿಲುವು ತಾಳಿದರೆ ನನ್ನನ್ನೇ ಜಾಗ ಖಾಲಿ ಮಾಡಿಸುತ್ತಾರೆ. ಆದರೂ, ಮುಖ್ಯಮಂತ್ರಿಯಾಗಿ ಐದು ವರ್ಷ ಇರುತ್ತೇನೆ. ಅದಕ್ಕೆ ಬೇಕಾದ ಪೊಲಿಟಿಕಲ್‌ ಮ್ಯಾನೇಜ್‌ಮೆಂಟ್‌ ತಿಳಿದುಕೊಂಡಿದ್ದೇನೆ.
– ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ