ಆಧುನಿಕತೆಯಿಂದ ನಶಿಸುತ್ತಿವೆ ಗ್ರಾಮೀಣ ಕ್ರೀಡೆಗಳು

Team Udayavani, Dec 16, 2019, 3:00 AM IST

adhunikate

ತಿ.ನರಸೀಪುರ: ಆಧುನೀಕರಣ, ಜಾಗತೀಕರಣದ ಪ್ರಭಾವದಿಂದಾಗಿ ಗ್ರಾಮೀಣ ಕ್ರೀಡಾಕೂಟಗಳು ನಶಿಸಿ ಹೊಗುತ್ತಿವೆ. ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆ ಸೇರಿದಂತೆ ಗ್ರಾಮೀಣ ಕ್ರೀಡಾಕೂಟಗಳ ಬೆಳವಣಿಗೆಗೆ ನಿಗಮ ಸ್ಥಾಪನೆ ಮಾಡುವ ಸಂಬಂಧ ರಾಜ್ಯ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೇ.ವಿಜಯೇಂದ್ರ ಹೇಳಿದರು.

ಪಟ್ಟಣದ ಹೊರವಲಯ ಸಾರ್ವಜನಿಕ ಆಸ್ಪತ್ರೆ-ತಾಯೂರು ಮುಖ್ಯ ರಸ್ತೆಯಲ್ಲಿ ಭಾನುವಾರ ಶ್ರೀ ಚೌಡೇಶ್ವರಿ ಅಮ್ಮನವರ ಯುವಕರ ಸ್ನೇಹ ಬಳಗದಿಂದ ಹಮ್ಮಿಕೊಂಡಿದ್ದ ಮೂರನೇ ವರ್ಷದ ರಾಜ್ಯ ಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ಆಯೋಜನೆಗೆ ಮೆಚ್ಚುಗೆ: ಗ್ರಾಮೀಣ ಕ್ರೀಡೆಗಳ ಉಳಿವಿಗೆ ಹಾಗೂ ಬೆಳವಣಿಗೆಗೆ ನಿಗಮವೊಂದು ಸ್ಥಾಪನೆಯಾಗಬೇಕು. ರೈತನ ಒಡನಾಡಿಯಾಗಿ ವರ್ಷವೀಡಿ ದುಡಿಯುವ ಜಾನುವಾರುಗಳಿಗೂ ಕೂಡ ಮನೋಲ್ಲಾಸಕ್ಕಾಗಿ ಒಂದು ದಿನವಾದರೂ ಜಾನುವಾರು ಕ್ರೀಡಾಕೂಟಗಳು ನಡೆಯಬೇಕು. ಆಧುನಿಕತೆ ಜಗತ್ತಿನಲ್ಲಿ ಎಲ್ಲವೂ ಯಾಂತ್ರೀಕೃತ ಆಗುತ್ತಿರುವ ಸಂದರ್ಭದಲ್ಲಿ ಅದೇಷ್ಟೋ ಗ್ರಾಮೀಣ ಕ್ರೀಡಾಕೂಟಗಳು ಮರೆಯಾಗಿವೆ. ಈ ದೆಸೆಯಿಂದಲೇ ಆರ್‌. ಮಣಿಕಂಠರಾಜ್‌ ಗೌಡ ನೇತೃತ್ವದಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರ ಯುವಕರ ಬಳಗದ ಯುವಕರು ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ಉತ್ತಮವಾಗಿ ಸಂಘಟಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶುಭ ಹಾರೈಸಿದ ಶಾಸಕ ಅಶ್ವಿ‌ನ್‌: ಶಾಸಕ ಎಂ.ಅಶ್ವಿ‌ನ್‌ ಕುಮಾರ್‌ ಮಾತನಾಡಿ, ಮೊದಲೆರಡು ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ಆಯೋಜಿಸಿದ್ದ ಸಂದರ್ಭದಲ್ಲಿ ಮಣಿಕಂಠರಾಜ್‌ ಗೌಡ ಹಾಗೂ ಅವರು ಸ್ನೇಹಿತರ ತಂಡಕ್ಕೆ ಹಿನ್ನಡೆಯಾಗಿದ್ದಾಗ ನಿಮ್ಮ ಶ್ರಮಕ್ಕೆ ಮುಂದೊಂದು ದಿನ ಒಳ್ಳೆಯದು ಆಗುತ್ತೇ ಅಂತ ಹೇಳಿದ್ದಕ್ಕೆ ಈಗಿನ ಯಶಸ್ಸು ಸಾಕ್ಷಿಯಾಗಿದೆ. ಮುಂದೆಯೂ ಕೂಡ ಮತ್ತಷ್ಟು ಮೆರಗು ನೀಡುವಂತಹ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ಆಯೋಜಿಸುವಂತಾಗಲಿ ಎಂದು ಶುಭ ಹಾರೈಸಿದರು.

ಶ್ರೀ ಚೌಡೇಶ್ವರಿ ಅಮ್ಮನವರ ಸ್ನೇಹ ಬಳಗದ ಅಧ್ಯಕ್ಷ ಆರ್‌. ಮಣಿಕಂಠರಾಜ್‌ ಗೌಡ ಮಾತನಾಡಿ, ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಯ ಹಿನ್ನಲೆ ಹಾಗೂ ಹಿನ್ನಡೆ ಮಾಹಿತಿ ತೆರೆದಿಟ್ಟರು. ರಾಜ್ಯ ಬಿಜೆಪಿ ಕಾರ್ಯದರ್ಶಿ ಎಂ.ರಾಜೇಂದ್ರ, ಸಹ ವಕ್ತಾರ ಕೌಟಿಲ್ಯ ಆರ್‌. ರಘು, ಜಿಲ್ಲಾ ಉಪಾಧ್ಯಕ್ಷ ಎಸ್‌.ಸಿ. ಅಶೋಕ, ಜಿಪಂ ಸದಸ್ಯ ಸದಾನಂದ, ವಿನೋದ್‌, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕರೋಹಟ್ಟಿ ಮಹದೇವಯ್ಯ,

ಕ್ಷೇತ್ರಾಧ್ಯಕ್ಷರಾದ ಕೆ.ಬಿ.ವಿಜಯಕುಮಾರ್‌, ಕೆ.ಸಿ.ಲೋಕೇಶ್‌, ಮಾಜಿ ಅಧ್ಯಕ್ಷ ಎ.ಎನ್‌. ಶಿವಯ್ಯ, ಪುರಸಭೆ ಸದಸ್ಯ ಎಸ್‌.ಕೆ. ಕಿರಣ, ಉಪನ್ಯಾಸಕ ಕುಮಾರಸ್ವಾಮಿ, ಮುಖಂಡರಾದ ಬಾಗಳಿ ಡಿ.ಯೋಗೇಶ, ಮಲ್ಲಪ್ಪ, ಬಿ.ವೀರಭದ್ರಪ್ಪ, ಕೆ.ಗಣೇಶ, ಬಿ.ಮಹೇಶ, ಮೋಹನ, ಎಂ.ಮಿಥುನ್‌, ಡಣಾಯಕನಪುರ ರಾಜಶೇಖರ, ಚೇತನ, ಕುಪ್ಪೇಗಾಲ ಶಿವಬಸಪ್ಪ ಹಾಗೂ ಇನ್ನಿತರರು ಹಾಜರಿದ್ದರು.

ರಾಜಕೀಯ ಶಕ್ತಿ ನೀಡಿದ್ದೇ ವರುಣ ಜನರು: ರಾಜ್ಯ ವಿಧಾನಸಭೆ ಉಪ ಚುನಾವಣೆಯಲ್ಲಿ ಕೆ.ಆರ್‌. ಪೇಟೆಯಂತಹ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಲಿಕ್ಕೆ ರಾಜಕೀಯ ಶಕ್ತಿಯನ್ನು ನೀಡಿದ ಕೀರ್ತಿ ವರುಣ ವಿಧಾನಸಭೆ ಜನರಿಗೆ ಸಲ್ಲಬೇಕು. ಕ್ಷೇತ್ರದಲ್ಲಿ ಸ್ಪರ್ಧಿಸದಿದ್ದರೂ ರಾಜಕೀಯವಾಗಿ ಗುರುತಿಸಿಕೊಳ್ಳಲಿಕ್ಕೆ ವರುಣ ಜನರೇ ಕಾರಣವಾಗಿದ್ದರಿಂದ ಇಲ್ಲಿನ ಜನರು ನಾನೆಂದೂ ಮರೆಯುವುದಿಲ್ಲ. ಮುಂದಿನ ಚುನಾವಣೆಯಲ್ಲಿ ವರುಣದಿಂದಲೇ ಸ್ಪರ್ಧಿಸುತ್ತೀರಾ ಅಂತ ಬಹುತೇಕ ಕಡೆಗಳಲ್ಲಿ ಕೇಳ್ತಾರೆಯಾದರೂ, ಜನರ ಆಶೀರ್ವಾದ ಇದ್ದರೇ ಖಂಡಿತವಾಗಿಯೂ ಸ್ಪರ್ಧೆಸುತ್ತೇನೆ ಎಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.