ಹಾಡಿಗಳ ಮಕ್ಕಳಿಗೆ ತಲುಪುತ್ತಿಲ್ಲ ಶಿಕ್ಷಣ!

ಜಿಲ್ಲಾ ಕೇಂದ್ರದಿಂದ 90 ಕಿ.ಮೀ. ದೂರದ ಹಾಡಿಗಳ ಮಕ್ಕಳಿಗೆ 5 ತಿಂಗಳಿನಿಂದ ಶಿಕ್ಷವಿಲ್ಲ

Team Udayavani, Aug 29, 2020, 2:45 PM IST

Mysuru-tdy-1

ಸಾಂದರ್ಭಿಕ ಚಿತ್ರ

ಮೈಸೂರು: ಶಾಲಾ ಮತ್ತು ಕಾಲೇಜು ಮಕ್ಕಳಿಗಾಗಿ ಆನ್‌ಲೈನ್‌ ಶಿಕ್ಷಣ ಆರಂಭವಾಗಿ ತಿಂಗಳಾದರೂ ಕಾಡಂಚಿನಲ್ಲಿ ವಾಸಿಸುತ್ತಿರುವ ಹಾಡಿ ಮಕ್ಕಳಿಗೆ ಈ ಬಗ್ಗೆ ಕಿಂಚಿತ್ತೂ ಅರಿವಿಲ್ಲದೇ ಶಿಕ್ಷಣದಿಂದ ವಂಚಿತರಾಗಿದ್ದಾರೆ.

ಜಿಲ್ಲಾ ಕೇಂದ್ರದಿಂದ 90 ಕಿ.ಮೀ. ದೂರದ ಎಚ್‌. ಡಿ. ಕೋಟೆ ತಾಲೂಕಿನ ಮಾನಿಮೂಲೆ ಹಾಡಿ ಇದಕ್ಕೆ ಸ್ಪಷ್ಟ ಉದಾಹರಣೆ. 226ಕ್ಕೂ ಹೆಚ್ಚು ಹಾಡಿಗರು ವಾಸಿಸುವ ಈ ಪ್ರದೇಶದಲ್ಲಿ 40ಕ್ಕೂ ಹೆಚ್ಚು ಶಾಲಾ-ಕಾಲೇಜು ವಿದ್ಯಾರ್ಥಿಗಳಿದ್ದಾರೆ. ಆದರೆ, ತಮ್ಮ ಹಾಡಿಯಲ್ಲಿ ಸೂಕ್ತ ವಿದ್ಯುತ್‌ ದೀಪ, ಸೌರಶಕ್ತಿ ದೂರದರ್ಶನ ವೀಕ್ಷಿಸುವ ಸೌಲಭ್ಯವಿಲ್ಲದೇ ಆನ್‌ಲೈನ್‌ ಶಿಕ್ಷಣ, ವಿದ್ಯಾಗಮ, ದೂರದರ್ಶನ ಪಾಠ ಪ್ರವಚನ ಇಲ್ಲಿನ ಮಕ್ಕಳಿಗೆ ಗಗನ ಕುಸುಮವಾಗಿದೆ.

ಎಚ್‌.ಡಿ.ಕೋಟೆ ತಾಲೂಕಿನ ಡಿ.ಬಿ.ಕುಪ್ಪೆ, ಎನ್‌. ಬೆಳತ್ತೂರು ಗ್ರಾಪಂನಲ್ಲಿ 15 ಹಾಡಿಗಳು ಕಾಡಿನೊಳ ಗಿದ್ದು, ಸಾರ್ವಜನಿಕ ಸಂಪರ್ಕದಿಂದ ದೂರ ಉಳಿದಿವೆ. ಕಾಡಿನಿಂದ ಆಚೆ ಇರುವ ಶಾಲೆಗಳಿಗೆ ತೆರಳುತ್ತಿದ್ದ ಇಲ್ಲಿನ ವಿದ್ಯಾರ್ಥಿಗಳು ಲಾಕ್‌ಡೌನ್‌ ನಂತರ ಶಾಲೆ, ಪಠ್ಯಚಟುವಟಿಕೆ ಇಲ್ಲದೇ ಹಾಡಿಯಲ್ಲೆ ಉಳಿದಿದ್ದಾರೆ.  ತಲೆ ಮಾರುಗಳಿಂದ ವಿದ್ಯುತ್‌, ಸೋಲಾರ್‌ ಬೆಳಕನ್ನೇ ಕಾಣದ ಹಾಡಿಗಳು, ಇಂದಿಗೂ ಸೀಮೆಎಣ್ಣೆ ದೀಪದಲ್ಲಿ ಬದುಕು ದೂಡುತ್ತಿದ್ದಾರೆ.

ಈ ನಡುವೆ ಎಲ್ಲಾ ಶಾಲೆ-ಕಾಲೇಜು ತಮ್ಮ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಶಿಕ್ಷಣ ನೀಡುತ್ತಿವೆ. ಆದರೆ ಅರಣ್ಯದಂಚಿನ ಈ ಹಾಡಿಗಳಿಗೆ ಅಗತ್ಯ ಸೌಲಭ್ಯವಾದ ವಿದ್ಯುತ್‌ಶಕ್ತಿ, ಸೌರಶಕ್ತಿ ಇಲ್ಲದ ಕಾರಣ ಆನ್‌ಲೈನ್‌ ಶಿಕ್ಷಣ ಗಗನ ಕುಸುಮವಾಗಿದೆ. ಮಕ್ಕಳು ಮಾರ್ಚ್‌ ತಿಂಗಳಿನಿಂದ ಶಾಲೆ, ಪಠ್ಯ ಚಟುವಟಿಕೆಗಳ ಯಾವುದೇ ಪರಿವೇ ಇಲ್ಲದೇ ಆಟದಲ್ಲಿ ತಲ್ಲೀನರಾಗಿದ್ದಾರೆ.

ವಿದ್ಯಾಗಮವೂ ಇಲ್ಲ: ಆನ್‌ಲೈನ್‌ ಶಿಕ್ಷಣ ತಲುಪದ ಭಾಗಗಳಿಗೆ ಶಿಕ್ಷಕರು ವಿದ್ಯಾರ್ಥಿಗಳ ಬಳಿಗೆ ತೆರಳಿ 8-10 ಮಕ್ಕಳಿಗೆ ಪಾಠ ಹೇಳಲು ವಿದ್ಯಾಗಮ ಪದ್ಧತಿಯನ್ನು ಸರ್ಕಾರ ಆರಂಭಿಸಿದೆ. ಆದರೆ ಈ ಪದ್ಧತಿ ಪಟ್ಟಣ, ಹೋಬಳಿ ಕೇಂದ್ರಗಳಿಷ್ಟೇ ಸೀಮಿತವಾಗಿದೆ. ಶಿಕ್ಷಕರು ಪಕ್ಕದೂರಿನ ಶಾಲೆಗೆ ಬರುತ್ತಾರೆ. ಆದರೆ ಕಾಡಿನೊಳಗೆ ಇರುವ ನಮ್ಮ ಹಾಡಿಗಳಿಗೆ ಬರುತ್ತಿಲ್ಲ. ನಮ್ಮ ಮಕ್ಕಳು ಶಾಲೆ ಇಲ್ಲ ಎಂದು ಕಾಡಿನಿಂದ ಹೊರಗೆ ಹೋಗುತ್ತಿಲ್ಲ ಎಂಬುದು ಹಾಡಿಗರ ಮಾತು.

ನಿತ್ಯ ಕೂಲಿಯನ್ನೇ ಅವಲಂಬಿಸಿರುವ ನಾವು ಬೆಳಗ್ಗೆ ಎದ್ದು ಕೆಲಸಕ್ಕೆ ತೆರಳಿದರೆ ಬರುವುದು ಸಂಜೆಯಾಗುತ್ತದೆ. ಮಕ್ಕಳು ಹಾಡಿಯಲ್ಲೇ ಇರುತ್ತವೆ. ಇವರಿಗೆ ಓದಿಸಲು ನಮ್ಮಲ್ಲಿ ಯಾರೂ ಇಲ್ಲ. ರಾತ್ರಿ ವೇಳೆ ಕಲಿಸಲು ನಮಗೆ ಅಕ್ಷರ ಜ್ಞಾನವೂ ಇಲ್ಲ. ನಮ್ಮಲ್ಲಿ ದೊಡ್ಡ ಮೊಬೈಲ್‌ ಇಲ್ಲ. ಇದ್ದರೂ ನೆಟ್‌ವರ್ಕ್‌ ಸಮಸ್ಯೆ. ಶಾಲೆ ಆರಂಭವಾದಾಗ ಮಕ್ಕಳನ್ನು ಶಾಲೆಗೆ ಕಳುಹಿಸುತ್ತೇವೆ ಎಂಬುದು ಮಾಣಿಮೂಲೆ ಹಾಡಿಯ ಮಂಜುಳಮ್ಮನ ಮಾತು.

ದೂರದರ್ಶನ ವೀಕ್ಷಿಸಲು ಟೀವಿ ಇಲ್ಲ: ಎಚ್‌ .ಡಿ.ಕೋಟೆ ತಾಲೂಕಿನ ಡಿ.ಬಿ.ಕುಪ್ಪೆ, ಎನ್‌. ಬೆಳತ್ತೂರು ಗ್ರಾಪಂನಲ್ಲಿ 15 ಹಾಡಿಗಳು ಕಾಡಿನೊಳಗಿದ್ದು, ಇಲ್ಲಿನ ಯಾವುದೇ ಮೂಲ ಸೌಲಭ್ಯವಿಲ್ಲದೆ ಪರದಾಡುತ್ತಿದ್ದಾರೆ. ದೂರದರ್ಶನದಲ್ಲಿ ಪಾಠ ಪ್ರವಚನ ಪ್ರಸಾರವಾಗುತ್ತಿದೆ. ಆದರೆ, ಅದನ್ನು ವೀಕ್ಷಿಸಲು ಟೀವಿಗಳಿಲ್ಲ. ಟೀವಿ ತಂದರೂ ಅದಕ್ಕೆ ವಿದ್ಯುತ್‌, ಕೇಬಲ್‌ ಸಮಸ್ಯೆ ಎಂಬುದು ಹಾಡಿಗರ ಅಳಲು.

100 ಹಾಡಿಗಳ ಸಮಸ್ಯೆ :  ಆನ್‌ಲೈನ್‌ ಶಿಕ್ಷಣ, ವಿದ್ಯಾಗಮ ಹಾಗೂ ದೂರದರ್ಶನ ಶಿಕ್ಷಣದಿಂದ ವಂಚಿತವಾಗಿರುವುದು ಕೇವಲ ಎಚ್‌.ಡಿ.ಕೋಟೆ ಹಾಡಿಗಳಿಗಷ್ಟೇ ಸೀಮಿತವಾಗಿಲ್ಲ. ಪಿರಿಯಾಪಟ್ಟಣ, ಹುಣಸೂರು ತಾಲೂಕಿನಲ್ಲಿರುವ ನೂರಕ್ಕೂ ಹೆಚ್ಚು ಹಾಡಿಗಳದ್ದೂ ಇದೆ ಸಮಸ್ಯೆಯಿದೆ.

ಕೋವಿಡ್‌-19 ಲಾಕ್‌ಡೌನ್‌ ಹಿನ್ನೆಲೆ ಮಕ್ಕಳ ವಿದ್ಯಾ ಭ್ಯಾಸಕ್ಕೆ ತೊಂದರೆಯಾಗದಂತೆ ಸರ್ಕಾರ ಆನ್‌ಲೈನ್‌ ಶಿಕ್ಷಣ ಹಾಗೂ ದೂರ ಶಿಕ್ಷಣ ಆರಂಭಿಸಿ ತಿಂಗಳು ದಾಟಿದರೂ, ಜಿಲ್ಲೆಯ ಕಾಡಂಚಿನಲ್ಲಿ ವಾಸಿಸುತ್ತಿರುವ ಹಾಡಿಗರ ಮಕ್ಕಳಿಗೆ ಅಗತ್ಯ ವ್ಯವಸ್ಥೆ ಇಲ್ಲದೇ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಸರ್ಕಾರ ಕೂಡಲೇ ಹಾಡಿ ಮಕ್ಕಳಿಗೆ ಪಾರಂಪರಿಕವಾಗಿ ಶಿಕ್ಷಣ ನೀಡಲು ವ್ಯವಸ್ಥೆ ಮಾಡಬೇಕು.   ಪ್ರಸನ್ನ, ರಾಜ್ಯ ಉಪಾಧ್ಯಕ್ಷ ಜನ ಸಂಗ್ರಾಮ ಪರಿಷತ್‌

ಕಾಡಂಚಿನಲ್ಲಿರುವ ಹಾಡಿ ಮಕ್ಕಳಿಗೆ ಶಿಕ್ಷಣ ಮುಟ್ಟುತ್ತಿಲ್ಲ ಎಂಬ ಬಗ್ಗೆ ತನಗೆ ತಿಳಿದಿಲ್ಲ. ಒಂದು ವೇಳೆ ಈ ಸಮಸ್ಯೆ ಇದ್ದರೆ, ತಾಲೂಕು ಅಧಿಕಾರಿಗಳನ್ನೂ ವಿಚಾರಿಸಿ ವಿದ್ಯಾಗಮ ಪದ್ಧತಿ ಮುಟ್ಟುವಂತೆ ಮಾಡಲಾಗುವುದು. ಹೆಚ್ಚನ ಮಾಹಿತಿಗೆ ತನ್ನ ಮೊ.9448999349 ಕ್ಕೆ ಸಂಪರ್ಕಿಸಿದರೆ ಸಮಸ್ಯೆ ಬಗೆಹರಿಸಲಾಗುವುದು.   ಡಾ.ಪಾಂಡುರಂಗ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು

 

ಸತೀಶ್‌ ದೇಪುರ

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.