ಸಿದ್ದರಾಮಯ್ಯ, ಅಶೋಕ ಹಾರನಹಳ್ಳಿ ಭೇಟಿ
Team Udayavani, Nov 22, 2022, 11:00 PM IST
ಮೈಸೂರು: ನಗರದಲ್ಲಿ ಇತ್ತೀಚೆಗೆ ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಚಿಂತಕ ಪ.ಮಲ್ಲೇಶ್ ಅವರು ಬ್ರಾಹ್ಮಣ ಸಮಾಜವನ್ನು ನಿಂದಿಸಿ ತಾವು ಬಳಸಿದ ಪದದ ಬಗ್ಗೆ ವಿಷಾದ ವ್ಯಕ್ತಪಡಿಸಿರುವುದರಿಂದ ಈ ಪ್ರಕರಣವನ್ನು ಮುಂದುವರಿಸಿಕೊಂಡು ಹೋಗುವುದು ಅನಗತ್ಯ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಅವರು ತಮ್ಮನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದಾರೆ. ಬ್ರಾಹ್ಮಣ ಮಹಾಸಭಾದವರು ಈ ಪ್ರಕರಣವನ್ನು ಇಲ್ಲಿಗೆ ಕೈ ಬಿಡುವುದು ಸೂಕ್ತ ಎಂದು ಹೇಳಿದ್ದಾರೆ.
ಅಂದು ಸಮಾರಂಭದಲ್ಲಿ ಮಲ್ಲೇಶ್ ಅವರ ಭಾಷಣವನ್ನು ನಾನು ಕೇಳಿಸಿಕೊಂಡಿರಲಿಲ್ಲ. ಸಮಾರಂಭದಲ್ಲಿ ತಾವು ಭಾಷಣವನ್ನೂ ಮಾಡಲಿಲ್ಲ. ನಾನು ಎಲ್ಲ ಸಮಾಜದವರ ಬಗ್ಗೆ ಸಮಾನವಾದ ಗೌರವ ಇಟ್ಟುಕೊಂಡಿದ್ದೇನೆ. ಯಾವ ಸಮಾಜದವರನ್ನೂ ನಿಂದಿಸುವ ಕೆಲಸ ನಾನು ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಬ್‌ರಿಜಿಸ್ಟ್ರಾರ್ ಕಚೇರಿಗಳು ಇನ್ನು ಸ್ಮಾರ್ಟ್
ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ
ಶ್ರೀರಾಮನ ವನವಾಸದ ಚಿತ್ರಕೂಟ ಭಾರತೀಯರೆಲ್ಲ ವೀಕ್ಷಿಸಬೇಕಾದ ಸ್ಥಳ;ವಿದ್ಯಾಧೀಶ ತೀರ್ಥ ಸ್ವಾಮೀಜಿ
ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್
ವಯನಾಡ್ ಕ್ಷೇತ್ರಕ್ಕೆ ಉಪಚುನಾವಣೆ; ಯಾವುದೇ ಆತುರವಿಲ್ಲ ಎಂದ ಚುನಾವಣಾ ಆಯೋಗ