Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

ನಮ್ಮ ಪೊಲೀಸರು ನಿಷ್ಪಕ್ಷಪಾತ ತನಿಖೆ ಮಾಡುವ ವಿಶ್ವಾಸ ಇದೆ

Team Udayavani, May 11, 2024, 12:13 AM IST

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

ಮೈಸೂರು: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಬಿಐಗೆ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ವಿಮಾನ ನಿಲ್ದಾಣದಲ್ಲಿ ಶುಕ್ರ ವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಜೆಡಿಎಸ್‌ ಹಾಗೂ ಬಿಜೆಪಿ ನಾಯಕರಿಂದ ಆಗ್ರಹ ಕೇಳಿಬಂದಿರು ವುದಕ್ಕೆ ಪ್ರತಿಕ್ರಿಯಿಸಿದ ಅವರು, ಎಸ್‌ಐಟಿ ಬಿಟ್ಟು ಇನ್ಯಾರ ಮೇಲೆ ನಂಬಿಕೆ ಇಡುತ್ತೀರಿ? ಸಿಬಿಐಗೆ ಕೊಟ್ಟ ಕೇಸ್‌ನಲ್ಲಿ ಯಾರಿಗೆ ಶಿಕ್ಷೆಯಾಗಿದೆ ಹೇಳಿ. ಪ್ರಜ್ವಲ್‌ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಎಸ್‌ಐಟಿ ತನಿಖೆ ಮಾಡುತ್ತಿದೆ. ನಮ್ಮ ಪೊಲೀಸರ ಬಗ್ಗೆ ನಂಬಿಕೆಯಿದೆ. ಅವರು ನಿಷ್ಪಕ್ಷಪಾತ ತನಿಖೆ ಮಾಡಿ ವರದಿ ಕೊಡುತ್ತಾರೆ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ಹೇಳಿದರು.

ಬಿಜೆಪಿ ಆಡಳಿತದಲ್ಲಿ ಸಿಬಿಐಗೆ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ಕೊಡಲಿಲ್ಲ. ಬಿಜೆಪಿ ಅವರು ಸಿಬಿಐಗೆ ಕರಪ್ಶನ್‌ ಬ್ಯೂರ್‌ ಆಫ್ ಇನ್ವೆಸ್ಟಿಗೇಶನ್‌ ಎನ್ನುತ್ತಿದ್ದರು. ಚೋರ್‌ ಬಚಾವ್‌ ಸಂಸ್ಥೆ ಎಂದು ಎಚ್‌.ಡಿ.ದೇವೇಗೌಡರು ಹೇಳಿದ್ದರು. ಈಗ ನೋಡಿದರೆ ಸಿಬಿಐಗೆ ಕೊಡಿ ಎನ್ನುತ್ತಿದ್ದಾರೆ. ಇದರ ಅರ್ಥ ಏನು? ಸರಿಯಾದ ದಾರಿಯಲ್ಲಿ ತನಿಖೆ ನಡೆಯುತ್ತದೆ ಎಂಬ ನಂಬಿಕೆ ಇದೆ. ನಾನು ಯಾವತ್ತೂ ಪೊಲೀಸರಿಗೆ ಕಾನೂನಿನ ವಿರುದ್ಧವಾಗಿ ತನಿಖೆ ಮಾಡಿ ಅಂಥ ಹೇಳುವುದಿಲ್ಲ. ಎಸ್‌ಐಟಿ ಮೇಲೆ ನಂಬಿಕೆ ಇಡಬೇಕು. ನಮ್ಮ ಪೊಲೀಸ್‌ ಮೇಲೆ ಅವರಿಗೆ ನಂಬಿಕೆ ಇಲ್ಲವಾ ಎಂದು ಪ್ರಶ್ನಿಸಿದರು.

ಈ ಹಿಂದೆ ಸಿಬಿಐಗೆ ನಾವೇ ಲಾಟರಿ ಕೇಸ್‌, ಜಾರ್ಜ್‌ ಕೇಸ್‌ ಹಾಗೂ ಡಿ.ಕೆ.ರವಿ ಕೇಸನ್ನು ಕೊಟ್ಟಿದ್ದೆವು. ಆ ಪ್ರಕರಣದಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ? ಹಾಗಂತ ನನಗೆ ಸಿಬಿಐ ಮೇಲೆ ನಂಬಿಕೆ ಇಲ್ಲ ಎಂದರ್ಥವಲ್ಲ. ಈ ಪ್ರಕರಣದಲ್ಲಿ ನಮ್ಮ ಪೊಲೀಸರೇ ತನಿಖೆ ಮಾಡುತ್ತಾರೆ ಎಂದರು.

ಯಾರ ಹಸ್ತಕ್ಷೇಪವೂ ಇಲ್ಲ
ಈ ಪ್ರಕರಣದಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ, ನನ್ನ ಹಸ್ತಕ್ಷೇಪ ಕೂಡ ಇಲ್ಲ. ಪೊಲೀಸರ ಮೇಲೆ ವಿಶ್ವಾಸ ಇದೆ. ಸತ್ಯಾಸತ್ಯತೆ ಹೊರಗೆ ಬರುತ್ತದೆ. ಪ್ರಕರಣಕ್ಕೆ ಅಂತಾರಾಷ್ಟ್ರೀಯ ಸಂಕರ್ಪ ಇದೆ ಎಂಬುದೆಲ್ಲ ನಿಜವಲ್ಲ. ಈ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎನ್ನುವ ಕಾರಣಕ್ಕೆ ಈ ರೀತಿ ಹೇಳುತ್ತಿದ್ದಾರೆ ಅಷ್ಟೇ ಎಂದು ಹೇಳಿದರು.

ರೇವಣ್ಣ ನಿರೀಕ್ಷಣ ಜಾಮೀನಿಗೆ ಯಾಕೆ ಅರ್ಜಿ ಹಾಕಿದ್ದರು?
ಮಾಜಿ ಸಚಿವ ಎಚ್‌.ಡಿ.ರೇವಣ್ಣ ಮೇಲೆ ಏನೂ ಕೇಸ್‌ ಇಲ್ಲ ಎಂದಾದರೆ ನಿರೀಕ್ಷಣ ಜಾಮೀನಿಗೆ ಯಾಕೆ ಅರ್ಜಿ ಹಾಕಿದ್ದರು? ಇದರಲ್ಲಿ ರಾಜಕೀಯ ಎಲ್ಲಿಂದ ಬಂತು? ಅಪರಾಧವಾಗಿಲ್ಲ ಎಂದಾದರೆ ಜಾಮೀನು ಅರ್ಜಿ ಯಾಕೆ ತಿರಸ್ಕಾರ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಪ್ರಜ್ವಲ್‌ ರೇವಣ್ಣ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ನಾನಾಗಲೀ, ಡಿ.ಕೆ.ಶಿವಕುಮಾರ್‌ ಆಗಲೀ, ಸರಕಾರದ ಯಾರೊಬ್ಬರೂ ಹಸ್ತಕ್ಷೇಪ ಮಾಡುತ್ತಿಲ್ಲ ಎಂದರು.

ಟಾಪ್ ನ್ಯೂಸ್

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

police crime

West Bengal ಬಿಜೆಪಿಯ ಮುಸ್ಲಿಂ ಕಾರ್ಯಕರ್ತನ ಬರ್ಬರ ಹತ್ಯೆ

1-wq-wewqe

T20 World Cup; ಪಪುವಾ ನ್ಯೂ ಗಿನಿಯ ವಿರುದ್ಧ ವಿಂಡೀಸ್‌ ಗೆ 5 ವಿಕೆಟ್ ಗಳ ಜಯ

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gundlupete

Gundlupete: ಅನೈತಿಕ ಸಂಬಂಧದ ವಿಚಾರ: ಸ್ವಂತ ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ

2-hunsur

Hunsur: ಬಿರುಗಾಳಿ ಸಹಿತ ಭಾರೀ ಮಳೆಗೆ ಕೆರೆಯಂತಾದ ಹೊಲಗಳು

ಐತಿಹಾಸಿಕ ಸ್ಮಾರಕಗಳ ತ್ರೀಡಿ ಮ್ಯಾಪಿಂಗ್‌, ಲೇಸರ್‌ ಸ್ಕ್ಯಾನಿಂಗ್‌

ಐತಿಹಾಸಿಕ ಸ್ಮಾರಕಗಳ ತ್ರೀಡಿ ಮ್ಯಾಪಿಂಗ್‌, ಲೇಸರ್‌ ಸ್ಕ್ಯಾನಿಂಗ್‌

2-hunsur

Hunsur: ಕಸಾಯಿಖಾನೆಗೆ ಸಾಗಿಸುತ್ತಿದ್ದ 40ಕ್ಕೂ ಅಧಿಕ ಹಸುಗಳ ರಕ್ಷಣೆ

Sculptor Arun yogiraj: ಶಿಲ್ಪಿ ಅರುಣ್‌ ಯೋಗಿರಾಜ್‌ ಕೆತ್ತಿದ ನಂದಿ ವಿಗ್ರಹ ಅಮರನಾಥಕ್ಕೆ

Sculptor Arun yogiraj: ಶಿಲ್ಪಿ ಅರುಣ್‌ ಯೋಗಿರಾಜ್‌ ಕೆತ್ತಿದ ನಂದಿ ವಿಗ್ರಹ ಅಮರನಾಥಕ್ಕೆ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

1-asdasdas

Tamil actor ಕರುಣಾಸ್‌ ಬಳಿ 40 ಬುಲೆಟ್‌ಗಳು ಪತ್ತೆ!

mob

WhatsApp ನಲ್ಲಿ ಶೀಘ್ರ ಚಾಟ್‌ ಫಿಲ್ಟರ್‌ ಅಪ್‌ಡೇಟ್‌?

Vimana 2

Again ವಿಮಾನಕ್ಕೆ ಬಾಂಬ್‌ ಬೆದರಿಕೆ: ವಾರದಲ್ಲಿ 4ನೇ ಘಟನೆ

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.