ಮತ್ತೆ ಮುಖ್ಯಮಂತ್ರಿ ಆಗುವುದು ಸಿದ್ದರಾಮಯ್ಯ, ಕುಮಾರಸ್ವಾಮಿಯ ಹಗಲು ಕನಸು: ಈಶ್ವರಪ್ಪ
Team Udayavani, Jan 11, 2021, 4:08 PM IST
ಮೈಸೂರು: ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎನ್ನುತ್ತಿದ್ದಾರೆ. ಕುಮಾರಸ್ವಾಮಿ ಕೂಡ ಅದೇ ರೀತಿ ಮಾತನಾಡುತ್ತಿದ್ದಾರೆ. ಇದೇ ಮಾತನ್ನು ಅವರ ಪಕ್ಷದವರು ಯಾರಾದರೂ ಹೇಳಿದ್ದಾರಾ? ಅವರಿಬ್ಬರೂ ಹಗಲು ಕನಸು ಕಾಣುತ್ತಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವುದಿಲ್ಲ. ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ವ್ಯಂಗ್ಯವಾಡಿದರು.
ಮುಖ್ಯಮಂತ್ರಿ ಬದಲಾವಣೆ ಎಂದು ಸುಮ್ಮನೆ ಮಾತನಾಡುತ್ತಾರೆ. ಇದು ಕೇವಲ ಸೃಷ್ಟಿ ಮಾಡಿರುವುದು ಅಷ್ಟೆ. ಕೇಂದ್ರ ನಾಯಕರು, ಶಾಸಕರು ಯಾರು ಹೇಳಿಲ್ಲ. ಇದನ್ನು ಹೇಳುತ್ತಿರುವುದು ಸಿದ್ದರಾಮಯ್ಯನವರು ಒಬ್ಬರೇ. ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಅವರಿಗೆ ಅದರ ಮೇಲೆ ಕಣ್ಣು. ಹಾಗಾಗಿ ಸ್ಥಾನ ಕಳೆದುಕೊಳ್ಳುತ್ತಾರೆ ಅಂತ ಹೇಳಿ ಅಭ್ಯಾಸ ಆಗಿದೆ ಎಂದು ಟೀಕಿಸಿದರು.
ಇದನ್ನೂ ಓದಿ:ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ: ಕಾರಜೋಳ ಸ್ಪಷ್ಟನೆ
ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಹತ್ತತ್ತು ಬಾರಿ ಹೇಳಿದರೆ ಜನ ನಂಬುತ್ತಾರೆ ಅಂತ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ ಇದು ಸುಳ್ಳು, ಕೇವಲ ಮಾಧ್ಯಮಗಳಲ್ಲಿ ಮಾತ್ರ ಬರುತ್ತಿರುವ ಸುದ್ದಿ ಅಷ್ಟೇ ಎಂದು ಈಶ್ವರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್