ಸಾಧನೆಗೆ ಚಿನ್ನ ಗೆದ್ದ ಸಿಂಧು ಮಾದರಿ


Team Udayavani, Aug 30, 2019, 3:00 AM IST

sadhanege

ಕೆ.ಆರ್‌.ನಗರ: ವಿಶ್ವ ಬಾಡ್ಮಿಂಟನ್‌ನಲ್ಲಿ ಚಿನ್ನ ಗೆದ್ದು ಇಡೀ ದೇಶವೇ ಹೆಮ್ಮೆಪಡುವಂತಹ ಸಾಧನೆ ಮಾಡಿರುವ ಪಿ.ವಿ.ಸಿಂಧು ಅವರನ್ನು ನಾವು ಮಾದರಿಯಾಗಿಟ್ಟುಕೊಂಡು ಕ್ರೀಡೆಗಳಲ್ಲಿ ಉತ್ಸಾಹದಿಂದ ಭಾಗವಹಿಸಬೇಕು. ಆಗ ನಿರೀಕ್ಷಿತ ಗುರಿ ತಲುಪಬಹುದು ಎಂದು ತಾಲೂಕು ಪಂಚಾಯ್ತಿ ಅಧ್ಯಕ್ಷೆ ಎ.ಬಿ.ಮಲ್ಲಿಕಾ ಸಲಹೆ ನೀಡಿದರು. ಪಟ್ಟಣದ ಕೃಷ್ಣರಾಜೇಂದ್ರ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟ ಕ್ರೀಡಾಕೂಟದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸಾಧನೆ, ಆರೋಗ್ಯ: ವಿದ್ಯಾರ್ಥಿಗಳು ಶೈಕ್ಷಣಿಕ ಅಭ್ಯಾಸದ ಜೊತೆಗೆ ಕ್ರೀಡಾ ಚಟುವಟಿಕೆಗಳನ್ನು ಮೈಗೂಡಿಸಿಕೊಂಡರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದರ ಜತೆಗೆ ಸಾಧನೆಯನ್ನೂ ಮಾಡಬಹುದು ಎಂದರು.

ವಿಫ‌ುಲ ಅವಕಾಶ: ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಷ್ಟೇ ವಿಫ‌ುಲ ಅವಕಾಶಗಳು ಕ್ರೀಡಾ ಕ್ಷೇತದಲ್ಲಿಯೂ ದೊರೆಯುತ್ತಿದ್ದು, ಪೋಷಕರು ಮತ್ತು ಶಿಕ್ಷಕರು ಪ್ರತಿಭಾವಂತರನ್ನು ಗುರುತಿಸಿ ಅವರಿಗೆ ಸೂಕ್ತ ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡಿದರೆ ನಮ್ಮ ನಡುವೆ ಇರುವ ಪ್ರತಿಭೆಗಳು ಬೆಳಗಲಿವೆ. ತಾಲೂಕು ಪಂಚಾಯ್ತಿಯ ವತಿಯಿಂದ ಕ್ರೀಡೆಗೆ ಹೆಚ್ಚಿನ ರೀತಿಯ ಸಹಕಾರ ಮತ್ತು ಸಹಾಯ ಧನ ನೀಡಲಾಗುವುದು ಎಂದು ಭರವಸೆ ನೀಡಿದರು.

ಕ್ರೀಡಾ ಶಾಲೆ: ಗ್ರಾಮಾಂತರ ಪ್ರದೇಶಗಳ ಪೋಷಕರು ತಮ್ಮ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸದೆ ಅವರನ್ನು ಶಿಕ್ಷಣಕ್ಕಷ್ಟೇ ಸೀಮಿತಗೊಳಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ. ಇಂತಹ ವಿಚಾರದ ಬಗ್ಗೆ ಅವರು ಗಂಭೀರವಾಗಿ ಚಿಂತಿಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಂಟಿಯಾಗಿ ಜಿಲ್ಲೆಗೊಂದು ಕ್ರೀಡಾ ತರಬೇತಿ ಶಾಲೆಗಳನ್ನು ತೆರೆಯಬೇಕು ಎಂದು ಒತ್ತಾಯಿಸಿದರು.

ಪ್ರತಿಭೆಗೆ ಪ್ರೋತ್ಸಾಹಿಸಿ: ಜ್ಯೋತಿ ಬೆಳಗಿಸಿ ಕ್ರೀಡಾಕೂಟ ಉದ್ಘಾಟಿಸಿದ ತಹಶೀಲ್ದಾರ್‌ ಎಂ.ಮಂಜುಳಾ ಮಾತನಾಡಿ, ಕ್ರೀಡೆಯಿಂದ ಮನುಷ್ಯನ ಮನಸ್ಸು ಮತ್ತು ದೇಹಕ್ಕೆ ಉತ್ತಮ ಆರೋಗ್ಯ ದೊರೆಯುವುದರ ಜತೆಗೆ ಇದು ಆ ಕ್ಷೇತ್ರದಲ್ಲಿ ಸಾಧನೆಗೆ ಸಹಕಾರಿಯಾಗಲಿದೆ. ಓದಿಗೆ ಕೊಡುವಷ್ಟು ಮಹತ್ವವನ್ನು ಕ್ರೀಡಾ ಕ್ಷೇತ್ರಕ್ಕೂ ನೀಡಬೇಕು. ಆಗ ಮಾತ್ರ ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಹೊರ ಹೊಮ್ಮಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಹೊಸೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿ.ಪುಟ್ಟಸ್ವಾಮಿ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎಸ್‌.ಯದುಗಿರೀಶ್‌, ಪ್ರಾಂಶುಪಾಲರಾದ ಸುಧಾಮಣಿ, ಪುರುಷೋತ್ತಮ, ಉಪನ್ಯಾಸಕರಾದ ಕೃಷ್ಣ, ಉಮಾಶಂಕರ, ಜಗದೀಶ್‌, ಲೋಕೇಶ್‌, ಗಿರೀಶ್‌, ಶ್ರೀನಿವಾಸ್‌, ರೇವಣ್ಣ, ರಾಜೇಂದ್ರ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.