ಲಿಂಗಾಂಬುದಿ ಕೆರೆಗೆ ಕೊಳಚೆ ನೀರು

Team Udayavani, Jun 12, 2018, 2:07 PM IST

m5-linga-lake.jpg

ಮೈಸೂರು: ನಗರದ ಲಿಂಗಾಂಬುದಿ ಕೆರೆಗೆ ಒಳಚರಂಡಿ ನೀರು ಸೇರ್ಪಡೆಯಾಗಿ ಕೆರೆ ಮತ್ತು ಪರಿಸರ ಹಾಳಾಗುತ್ತಿದ್ದ ಹಿನ್ನಲೆಯಲ್ಲಿ ಕೆ.ಆರ್‌. ಕ್ಷೇತ್ರದ ಶಾಸಕ ಎಸ್‌.ಎ.ರಾಮದಾಸ್‌ ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಮಳಿಯಿಂದಾಗಿ ಲಿಂಗಾಬುದಿ ಕೆರೆಯ ಸುತ್ತಮುತ್ತಲ ಬಡಾವಣೆಗಳ ಒಳಚರಂಡಿ ನೀರು ಕೆರೆಗೆ ಸೇರುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಶಾಸಕ ರಾಮದಾಸ್‌ ಸ್ಥಳಕ್ಕೆ ಭೇಟಿ ನೀಡಿದರು. 

ಕ್ರಮಕ್ಕೆ ಸೂಚನೆ: ಒಳಚರಂಡಿ ನೀರು ಸೋರಿಕೆಯಾಗಿ ಹೊಂಡದ ಮೂಲಕ ನೇರವಾಗಿ ಲಿಂಗಾಬುದಿ ಕೆರೆ ಸೇರುತ್ತಿದೆ. ಇದರಿಂದ ಕೆರೆ ಹಾಗೂ ಸುತ್ತಲಿನ ಪರಿಸರ ಹಾಳಾಗುತ್ತಿದೆ.ಕೆರೆಯ ನೀರು ಭರ್ತಿಯಾಗಿ ತಾತ್ಕಾಲಿಕವಾಗಿ ಅಳವಡಿಸಿರುವ ಮರಳಿನ ಮೂಟೆಗಳು ಛಿದ್ರಗೊಂಡು ಕೆರೆಯ ನೀರು ಅಕ್ಕಪಕ್ಕದ ಬಡಾವಣೆಗಳಿಗೆ ನುಗ್ಗುವ ಸಾಧ್ಯತೆ ಇದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮವಹಿಸಿ, ಕೆರೆಗೆ ಒಳಚರಂಡಿ ನೀರು ಸೇರುವುದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದರು. 

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಾಮದಾಸ್‌, ಒಳಚರಂಡಿ ಸಂಪರ್ಕವನ್ನು ಮಳೆ ನೀರು ಚರಂಡಿಗೆ ಬಿಟ್ಟಿರುವ ಪರಿಣಾಮ ಮಳೆ ನೀರಿನೊಂದಿಗೆ ಕೊಳಚೆ ನೀರು ಕೆರೆಗೆ ಸೇರುತ್ತಿದೆ. ಕೊಳಚೆ ನೀರು ಕೆರೆಗೆ ಹರಿಯದಂತೆ ಒಳಚರಂಡಿಗಳ ದುರಸ್ತಿ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲು ಮುಡಾ ಮತ್ತು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಜಗದೀಶ್‌, ಶಂಕರ್‌, ಸೀಮಾಪ್ರಸಾದ್‌, ಪಾಲಿಕೆ ವಲಯ ಕಚೇರಿ-2ರ ಅಭಿವೃದ್ಧಿ ಅಧಿಕಾರಿ ರಘುಪತಿ, ವಾಣಿಲಾಸ ನೀರು ಸರಬರಾಜು ಕಾರ್ಯಾಗಾರದ ಕಾರ್ಯಪಾಲಕ ಅಭಿಯಂತರ ಯಾದವ್‌, ಸಹಾಯಕ ಅಭಿಯಂತರ ಕೆಂಪೇಗೌಡ, ಮುಡಾ ವಲಯ-7ರ ಸಹಾಯಕ ಆಯುಕ್ತ ರ, ಸಹಾಯಕ ಅಭಿಯಂತರ ಯದುಗಿರಿ ಇನ್ನಿತರರು ಹಾಜರಿದ್ದರು.

ಒತ್ತುವರಿ ಮಾಡಿಕೊಂಡಿರುವ ಕೆರೆ ಪ್ರದೇಶ ತೆರವುಗೊಳಿಸುವ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತೇನೆ. ಜತೆಗೆ ಪಾಲಿಕೆ, ಮುಡಾ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳ ಸಭೆ ಕರೆದು ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಕೆರೆಯ ಉಳಿವಿಗೆ ಹಾಗೂ ಪರಿಸರ ಸಂರಕ್ಷಣೆಗೆ ಕ್ರಮ ಕೈಗೊಳ್ಳುತ್ತೇನೆ.
-ರಾಮದಾಸ್‌, ಶಾಸಕ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.