ರಾಜ್ಯದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ

Team Udayavani, May 30, 2023, 2:27 PM IST

tdy-12

ತಿ.ನರಸೀಪುರ: ರಾಜ್ಯ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹೇಳಿದರು.

ಬೆಂಗಳೂರಿನಲ್ಲಿ ತಿ.ನರಸೀಪುರದ ಕಾಂಗ್ರೆಸ್‌ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ದುರಾಡಳಿತದಿಂದ ಬೇಸತ್ತ ರಾಜ್ಯದ ಜನತೆ ಕಾಂಗ್ರೆಸ್‌ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡುವ ಮೂಲಕ ಬಡವರ ಹಾಗೂ ಅಭಿವೃದ್ಧಿ ಪರ ಸರ್ಕಾರ ರಚನೆಗೆ ಕಾರಣರಾಗಿದ್ದಾರೆ. ಹೀಗಾಗಿ ರಾಜ್ಯದ ಜನತೆಯ ಆಶೋತ್ತರಗಳಿಗೆ ಅನುಗುಣವಾಗಿ ನಮ್ಮ ಸರ್ಕಾರ ಕಾರ್ಯ ನಿರ್ವಹಿಸಲಿದೆ ಎಂದರು.

ಕಾಂಗ್ರೆಸ್‌ ಪಕ್ಷ ಚುನಾವಣೆಗೂ ಮುನ್ನಾ ನೀಡಿದ್ದ 5 ಗ್ಯಾರಂಟಿಗಳಿಗೆ ಸಚಿವ ಸಂಪುಟದಲ್ಲಿ ಈಗಾಗಲೇ ಒಪ್ಪಿಗೆ ದೊರೆತಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ಎಲ್ಲಾ ಗ್ಯಾರಂಟಿಗಳು ಹಾಗೂ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಎಲ್ಲಾ ಭರವಸೆಗಳನ್ನು ಜಾರಿ ಗೊಳಿಸುವ ಮೂಲಕ ನುಡಿದಂತೆ ನಡೆದ ಸರ್ಕಾರ ಎಂಬುದನ್ನು ಸಾಬೀತು ಪಡಿಸಲಾಗುವುದು ಎಂದು ತಿಳಿಸಿದರು.

ಸರ್ವತೋಮುಖ ಅಭಿವೃದ್ಧಿ: ಈ ಹಿಂದೆ ನಾನು ಸಚಿವನಾಗಿದ್ದ ವೇಳೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದೇನೆ. ಈ ಬಾರಿಯೂ ಕ್ಷೇತ್ರದ ಮತ್ತಷ್ಟು ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದ್ದೇನೆ. ಅವುಗಳನ್ನು ಹಂತ ಹಂತವಾಗಿ ಕಾರ್ಯ ರೂಪಕ್ಕೆ ತರುವ ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

ಜನರ ಕಷ್ಟ ಸುಖಗಳಿಗೆ ಸ್ಪಂದಿಸುವೆ: ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ನನಗೆ ಅತ್ಯಧಿಕ ಮತ ನೀಡಿ ಜಯಶೀಲರನ್ನಾಗಿಸಿದ್ದೀರಿ. ಹೀಗಾಗಿ ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಧಕ್ಕೆ ಬಾರದ ಹಾಗೇ ಕಾರ್ಯ ನಿರ್ವಹಿಸುತ್ತೇನೆ. ಈ ಹಿಂದೆ ಸಚಿವನಾಗಿದ್ದ ವೇಳೆ ಜವಾಬ್ದಾರಿ ಹೆಚ್ಚಾಗಿದ್ದರಿಂದ ಒತ್ತಡಕ್ಕೊಳಗಾಗಿ ಕ್ಷೇತ್ರದ ಜನತೆಯ ಕಷ್ಟ ಸುಖಗಳಿಗೆ ಸ್ಪಂದಿಸಲು ಸಾಧ್ಯವಾಗಿರಲಿಲ್ಲ. ಇದನ್ನೇ ಕೆಲವರು ತಪ್ಪಾಗಿ ಅರ್ಥೈಸಿದ್ದರು. ಹೀಗಾಗಿ ಈ ಬಾರಿ ತಿ.ನರಸೀಪುರ ಜನತೆಯ ಕಷ್ಟ ಸುಖಗಳಿಗೆ ಸ್ಪಂದಿಸುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ತಲುಪಿಸುತ್ತೇನೆ. ಇದಕ್ಕೆ ಕ್ಷೇತ್ರದ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಡಿ.ಬಸವರಾಜು ಮಾತನಾಡಿ, ಕ್ಷೇತ್ರದ ಎಲ್ಲಾ ಸಮುದಾಯದವರು ಕಾಂಗ್ರೆಸ್‌ ಬೆಂಬಲಿಸುವ ಮೂಲಕ ಡಾ.ಎಚ್‌.ಸಿ .ಮಹದೇವಪ್ಪನ ವರ ಗೆಲುವಿಗೆ ಕಾರಣರಾಗಿದ್ದೀರಿ. ಹೀಗಾಗಿ ಮತದಾ ರರು ಸೇರಿದಂತೆ ಪಕ್ಷಕ್ಕಾಗಿ ದುಡಿದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಈ ಹಿಂದೆ ಮಹದೇವಪ್ಪನವರು ಲೋಕೋಪಯೋಗಿ ಸಚಿವರಾಗಿದ್ದ ವೇಳೆ ಸಾವಿರಾರು ಕೋಟಿ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿಗೊಳಿಸಿದ್ದರು. ಈ ಬಾರಿ ಅವರು ಮತ್ತಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಮೂಲಕ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿಯಾಗಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ಒಕ್ಕಲಿಗರ ಸಂಘದ ಅಧ್ಯಕ್ಷ ಪಿ.ಸ್ವಾಮಿನಾಥಗೌಡ, ಭೈರಾಪುರ ಗ್ರಾಪಂ ಮಾಜಿ ಅಧ್ಯಕ್ಷ ಎ.ಜೆ. ವೆಂಕಟೇಶ್‌, ಪಾರುಪತ್ತೇಗಾರ್‌ ಎಂ.ಬಿ.ಸಾಗರ್‌, ಯುವ ಮುಖಂಡ ಸಂದೇಶ್‌ ಸ್ವಾಮಿನಾಥ್‌, ಡೇರಿ ಕಾರ್ಯದರ್ಶಿ ನಾಗೇಂದ್ರ, ಮೂಗೂರು ಕುಮಾರಸ್ವಾಮಿ, ಸಂದಾನಿಗೌಡ, ಸುಂದರನಾಯಕ, ಮಹದೇವಸ್ವಾಮಿ ಇತರರು ಇದ್ದರು.

ಟಾಪ್ ನ್ಯೂಸ್

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.