Udayavni Special

ಆರೋಗ್ಯ ತಪಾಸಣೆಯಷ್ಟೇ ಮಣ್ಣು ಪರೀಕ್ಷೆಯೂ ಮುಖ್ಯ

Team Udayavani, Oct 13, 2020, 1:48 PM IST

mysuru-tdy-2

ಹುಣಸೂರು: ಮನುಷ್ಯನ ಆರೋಗ್ಯ ತಪಾಸಣೆ ಎಷ್ಟು ಮುಖ್ಯವೋ ಅದೇ ರೀತಿಯಲ್ಲಿ ಮಣ್ಣಿನ ಪರೀಕ್ಷೆ ಮಾಡಿಸುವುದು ಅಷ್ಟೇ ಮಹತ್ವವಾಗಿದೆ ಎಂದು ನಾಗನಹಳ್ಳಿವಿಸ್ತರಣಾ ಶಿಕ್ಷಣಘಟಕದ ಬೇಸಾಯಶಾಸ್ತ್ರ ಪ್ರಾಧ್ಯಾಪಕ ಡಾ.ಸಿ.ರಾಮಚಂದ್ರ ರೈತರಿಗೆ ಸಲಹೆ ನೀಡಿದರು.

ತಾಲೂಕಿನ ಹಿರೀಕ್ಯಾತನಹಳ್ಳಿಯ ಪ್ರಗತಿ ಪರ ರೈತ ಶಿವಪ್ಪ ಅವರ ಜಮೀನಿನಲ್ಲಿ ಕೃಷಿ ವಿಶ್ವವಿದ್ಯಾಲಯ ಬೆಂಗಳೂರು, ನಾಗನಹಳ್ಳಿ ವಿಸ್ತರಣಾ ಶಿಕ್ಷಣ ಘಟಕ ಕೃಷಿ ಸಂಶೋಧನ ಕೇಂದ್ರ, ತಾಲೂಕು ಕೃಷಿ ಇಲಾಖೆಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಭತ್ತದ ಬೆಳೆಯಲ್ಲಿ ಸಮಗ್ರ ಪೋಷಕಾಂಶ, ಕೀಟ ಮತ್ತು ರೋಗಗಳ ನಿರ್ವಹಣೆ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಸಮಗ್ರ ಕೃಷಿ: ಹುಣಸೂರು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 1.64 ಲಕ್ಷ ಎಕರೆ ಪ್ರದೇಶದಲ್ಲಿ ಭ‌ತ್ತದ ‌ ಬೆಳೆ ನಾಟಿ ಮಾಡಲಾಗಿದೆ. ರೈತರು ಸಮತೋಲನಗೊಬ್ಬರ, ಕೀಟನಾಶಕ ಬಳಸುವುದರಿಂದ ‌ ಕೃಷಿಯಲ್ಲಿ ‌ ಖರ್ಚು ಕಡಿಮೆ ಮಾಡಬಹುದು. ರೈತರಲ್ಲಿ ಅರಿವಿನ ಕೊರತೆ, ಉದಾಸೀನತೆಯಿಂದ ಬೆಳೆ ಇಳುವರಿಯಲ್ಲಿ ಕುಂಠಿತಗೊಳ್ಳುತ್ತಿದೆ. ಆದ್ದರಿಂದ ಕೃಷಿ ತಜ್ಞ ‌ ಸಲಹೆ ಪಡೆದು ¸ ಬೆಳೆ ¸ ಬೆಳೆದಾಗ ಇಳುವ‌ರಿ ಹೆಚ್ಚುವ ಜೊತೆಗೆ ಆರ್ಥಿಕ ಹೊರೆ ಕಡಿಮೆಯಾಗಲಿದೆ. ಸಮಗ್ರ ಕೃಷಿ ಯಿಂದ ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದು. ಮಣ್ಣಿಗೆ ಸ್ಪಂದಿಸುವ ರಸಗೊಬ್ಬರ ‌ ಮಾತ್ರ ಬಳಸಬೇಕು. ಹಸಿರು ಎಲೆ ಗೊಬ್ಬರದಿಂದ ಅಧಿಕ ಇಳುವರಿ ಪಡೆಯಬಹುದು. ಜೊತೆಗೆ ಬೀಜೋಪಚಾರ ನಡೆಸಿ ಶ್ರೀಪದ್ಧತಿ ಅಳವಡಿಸಿ ಬೆಳೆ ¸ ಬೆಳೆದರೆ ನೀರು ಉಳಿತಾಯವಾಗುತ್ತದೆ ಎಂದು ತಿಳಿಸಿದ್ದರು.

ಮಣ್ಣಿನ ಆರೋಗ್ಯ: ಮಣ್ಣುವಿಜ್ಞಾನಿ, ಸಹಾಯಕ ಪ್ರಾಧ್ಯಾಪಕ ಉಮೇಶ್‌ ಮಾತನಾಡಿ, ಯಾವುದೇ ಬೆಳೆಗಳಿಗೆ ಮಣ್ಣು ಆಧಾರ, ಒಂದು ಇಂಚು ಮಣ್ಣು ಉತ್ಪತಿಯಾಗಬೇಕಾದರೆ ಸಾವಿರ ವರ್ಷಗಳೇ ಬೇಕು. ಬೆಳೆಗಳ ಪೋಷಣೆಯಲ್ಲಿ ಏರುಪೇರಾದಾಗ ಬೆಳೆನಷ್ಟ ಅನುಭವಿಸಬೇಕಾಗಲಿದೆ. ಹೀಗಾಗಿ ಕಾಲಕಾಲಕ್ಕೆ ತಮ್ಮ ಭೂಮಿಯ ಮಣ್ಣಿನ ಪರೀಕ್ಷೆ ಮಾಡಿಸಿಕೊಂಡು ಮಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬೆಳೆ ಸಮೀಕ್ಷೆ: ಗಾವಡಗೆರೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಮಧುಲತಾ ಮಾತನಾಡಿ, ರೈತರು ತಮ್ಮ ಮೊಬೈಲ್‌ ಮೂಲಕ ಬೆಳೆ ಸಮೀಕ್ಷೆ ಮಾಡಿಕೊಳ್ಳುವುದು ಮತ್ತು ಬೆಳೆ ದರ್ಶನ ಬಗ್ಗೆ ಕಾಲಕಾಲಕ್ಕೆ ಕೃಷಿ ಇಲಾಖೆ ನೀಡುವ ಮಾಹಿತಿ ಪಡೆದುಕೊಳ್ಳಬೇಕು ಎಂದರು. ಇದೇ ವೇಳೆ, ಇಲಾಖೆ ವತಿಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಗತಿಪರ ರೈತ ಶಿವಪ್ಪ, ರೈತ ಸಂಪರ್ಕ ಕೆಂದ್ರದ ಕೃಷಿ ಅಧಿಕಾರಿ ವೆಂಕಟೇಶ್‌, ಆತ್ಮಾ ಯೋಜನೆ ಶಶಿಕುಮಾರ್‌, ಹನಿಫ್‌ಪಾಷ, ಕ್ಷೇತ್ರಸಹಾಯಕ ಧರಣೇಶ್‌, ರೈತರು ಹಾಗೂ ಮಹಿಳಾ ಸ್ವ-ಸಹಾಯ ಸಂಘದ ಪ್ರತಿನಿಧಿಗಳು ಹಾಜರಿದ್ದರು.

ಟಾಪ್ ನ್ಯೂಸ್

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

gfgfdg

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಧಿಕಾರ ಮೊಟಕುಗೊಳಿಸಲು ಪ್ರತಾಪ್ ಸಿಂಹ, ಕೆ.ಮಹದೇವ್ ಒಳ ಒಪ್ಪಂದ:ಮಾಜಿ ಶಾಸಕ ಕೆ.ವೆಂಕಟೇಶ

ಅಧಿಕಾರ ಮೊಟಕುಗೊಳಿಸಲು ಪ್ರತಾಪ್ ಸಿಂಹ, ಕೆ.ಮಹದೇವ್ ಒಳ ಒಪ್ಪಂದ:ಮಾಜಿ ಶಾಸಕ ಕೆ.ವೆಂಕಟೇಶ

Untitled-1

ಮಾಹಿತಿ ನೀಡಲು ವಿಫಲವಾದ ಹುಣಸೂರು ನಗರಸಭೆ ಅಧಿಕಾರಿಗೆ ಎರಡನೇ ಬಾರಿಗೆ 5 ಸಾವಿರ ರೂ ದಂಡ

Untitled-1

ಅತ್ತಿಕುಪ್ಪೆಯಲ್ಲಿ ಪಡಿತರ ಉಪಕೇಂದ್ರ ಉದ್ಘಾಟನೆ,ಡೇರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ  ಶಾಸಕ ಮಂಜುನಾಥ್ ಆದೇಶ

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ ಶಾಸಕ ಮಂಜುನಾಥ್ ಆದೇಶ

suicide

ಮೋಸ ಮಾಡಿದವನನ್ನು ಗಲ್ಲಿಗೇರಿಸಿ: ಡೆತ್ ನೋಟ್ ಬರೆದು ನೇಣಿಗೆ ಶರಣಾದ ವಿದ್ಯಾರ್ಥಿನಿ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.