ಹದ ಮಳೆಗೆ ಕೋಟೆಯಲ್ಲಿ ಬಿತ್ತನೆ ಚುರುಕು

Team Udayavani, Apr 30, 2019, 3:00 AM IST

hada-male

ಎಚ್‌.ಡಿ.ಕೋಟೆ: ಅರೆ ಮಲೆನಾಡು ಖ್ಯಾತಿಯ ಎಚ್‌.ಡಿ.ಕೋಟೆ ತಾಲೂಕಿನಲ್ಲಿ ಎರಡು ಮೂರು ಬಾರಿ ಹದವಾದ ಮಳೆಯಾಗಿರುವ ಹಿನ್ನಲೆಯಲ್ಲಿ ರೈತರು ಕುಟುಂಬ ಸಮೇತರಾಗಿ ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಬಿತ್ತನೆ ಕಾರ್ಯದಲ್ಲಿ ತೊಡಗಿ ಕೊಂಡಿರುವ ದೃಶ್ಯಗಳು ತಾಲೂಕಿನಾದ್ಯಂತ ಕಂಡು ಬರುತ್ತಿದ್ದು, ಮಳೆ ಕೊರತೆಯ ನಡುವೆಯೂ ಕೃಷಿ ಚಟುವಟಿಕೆ ಗರಿಗೆದರಿದೆ.

ಮಾರ್ಚ್‌ ಪ್ರಾರಂಭದಲ್ಲೇ ಪೂರ್ವ ಮುಂಗಾರು ಮಳೆ ಅಗಮಿಸದ ಕಾರಣ ರೈತರು ಆತಂಕಕ್ಕೆ ಒಳಗಾಗಿದ್ದರು. ತಡವಾದರೂ ಕಡೆಗೆ ಏಪ್ರಿಲ್‌ ಎರಡನೇ ವಾರದಲ್ಲೇ ಪೂರ್ವ ಮುಂಗಾರು ಮಳೆ ಭರ್ಜರಿಯಾಗಿ ಪ್ರಾರಂಭವಾಗಿ ತಾಲೂಕಿನಾದ್ಯಂತ ಆಗಾಗ ಉತ್ತಮ ಮಳೆಯಾಗುತ್ತಿರುವುದರಿಂದ ಇಲ್ಲಿನ ರೈತರಲ್ಲಿ ಈ ಬಾರಿ ಉತ್ತಮ ಬೆಳೆಯ ಅಶಾಭಾವನೆ ಮೂಡಿಸಿದೆ.

ಹದ ಮಳೆ: ಕಳೆದ ವರ್ಷ ಏಪ್ರಿಲ್‌ ಕಳೆದರೂ ಮಳೆ ಬಾರದೇ ರೈತರು ಸಂಕಷ್ಟ ಎದುರಿಸಿದ್ದರು. ಈ ಬಾರಿ ಒಂದು ತಿಂಗಳ ಮೊದಲೇ ವರುಣದೇವ ಕೃಪೆಯಿಂದಾಗಿ ತಾಲೂಕಿನ ಕಸಬಾ, ಹಂಪಾಪುರ ಹೋಬಳಿ ಹೊರತುಪಡಿಸಿ ಇನ್ನುಳಿದ ಹೋಬಳಿ ವ್ಯಾಪ್ತಿಯಲ್ಲಿ ಆಗಾಗ ಹದ ಉತ್ತಮ ಮಳೆ ಆಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಕೃಷಿ ತಾಂತ್ರಿಕ ಅಧಿಕಾರಿ ಹರೀಶ್‌ ತಿಳಿಸಿದ್ದಾರೆ.

ಭರ್ಜರಿ ಬೆಳೆ ನಿರೀಕ್ಷೆ: ಈಗಾಗಲೇ ಉತ್ತಮ ಮಳೆಯಾಗಿರುವುದರಿಂದ ಮುಂದೆಯು ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ತಿಳಿಸಿರುವ ಹಿನ್ನೆಲೆಯಲ್ಲಿ ಈ ಬಾರಿ ತಾಲೂಕಿನ ರೈತರು ಭರ್ಜರಿ ಬೆಳೆಯ ನಿರೀಕ್ಷೆಯೊಂದಿಗೆ ಮುಂಜಾನೆಯೇ ತಮ್ಮ ಜಮೀನುಗಳಲ್ಲಿನ ಕೃಷಿ ಚಟುವಟಿಕೆಗಳಲ್ಲಿ ಸಂಭ್ರಮದಿಂದ ತೊಡಗಿಕೊಂಡಿರುವುದನ್ನು ತಾಲೂಕಿನಾದ್ಯಂತ ಕಾಣುತ್ತಿದ್ದೇವೆ.

ಶೇ.13 ಮಳೆ ಕೊರತೆ: ತಾಲೂಕಿನಲ್ಲಿ ಇಲ್ಲಿಯವರೆಗೆ 96.01 ಮಿ.ಮೀ. ಮಳೆಯಾಗಬೇಕಿತ್ತು. ಅದರೆ, ಏ.29 ರ ಸೋಮವಾರದ ವರೆಗೆ 84 ಮಿ.ಮೀ. ಮಳೆಯಾಗಿದ್ದು, ಶೇ.13 ರಷ್ಟು ಮಳೆ ಕೊರತೆ ಕಂಡು ಬಂದಿದೆ.

67,717 ಸಾವಿರ ಹೆಕ್ಟೇರ್‌ ಗುರಿ: ಈ ವರ್ಷದ ಪ್ರಸಕ್ತ ಸಾಲಿನಲ್ಲಿ ತಾಲೂಕಿನಲ್ಲಿ ಕೃಷಿ ಅಧಿಕಾರಿಗಳು 67,717 ಹೆಕ್ಟೇರ್‌ ಪ್ರದೇಶದಲ್ಲಿ ಹತ್ತಿ ಸೇರಿದಂತೆ ವಿವಿಧ ದ್ವಿ-ದಳ ಧಾನ್ಯಗಳ ಬಿತ್ತನೆ ಗುರಿ ಹೊಂದಿದ್ದು, ಈಗಾಗಲೇ ಬಿದ್ದಿರುವ ಮಳೆಗೆ 831 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಮುಗಿದಿದೆ.

ಗೊಬ್ಬರ ದಾಸ್ತಾನು: ರೈತರಿಗೆ ಬೇಕಾದ ರಸ ಗೊಬ್ಬರ ಅಗತ್ಯಕ್ಕಿಂತಲೂ ಹೆಚ್ಚಿನ ದಾಸ್ತನು ಇದ್ದು, ಹಂತ ಹಂತಕ್ಕೆ ಬೇಕಾದ ಕ್ರಿಮಿನಾಶಕ ಕೂಡ ಆಗ್ರೋ ಮಳಿಗೆಗಳಲ್ಲಿ ದಾಸ್ತನು ಇದೆ ಎಂದು ಇಲ್ಲಿನ ಕೃಷಿ ಸಹಾಯಕ ನಿರ್ದೇಶಕರ ಕಚೇರಿ ಮೂಲಗಳಿಂದ ತಿಳಿದು ಬಂದಿದೆ. ತಾಲೂಕಿನ ಭಾಗಶಃ ರೈತರು ಕೂಡ ತಮ್ಮ ಜಮೀನುಗಳಲ್ಲಿ ಬಿತ್ತನೆ ಕಾರ್ಯ ಮುಗಿಸಿದ್ದು, ಇಲ್ಲಿನ ರೈತರು ಈ ಬಾರಿ ಉತ್ತಮ ಮಳೆ ಫಲವತ್ತಾದ ಲಾಭದಾಯಕ ಬೆಳೆ ನಿರೀಕ್ಷೆಯಲ್ಲಿದ್ದಾರೆ.

ತಾಲೂಕಿನಲ್ಲಿ ಬಿತ್ತನೆ ಪ್ರಮಾಣ ಎಷ್ಟು?: ಎಚ್‌.ಡಿ. ಕೋಟೆ ತಾಲೂಕಿನಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಹತ್ತಿ ಬೆಳೆ 500 ಹೆಕ್ಟೇರ್‌, ತಂಬಾಕು 5 ಸಾವಿರ ಹೆಕ್ಟೇರ್‌, ಮುಸುಕಿನ ಜೋಳ 3 ಸಾವಿರ ಹೆಕ್ಟೇರ್‌, ವಿವಿಧ ದ್ವಿ-ದಳ ಧಾನ್ಯಗಳಾದ ಅಲಸಂದೆ 27 ಹೆಕ್ಟೇರ್‌, ಇತರೆ ದ್ವಿ-ದಳ ಧಾನ್ಯ ಬೆಳೆಗಳಾದ ಹಸಿರು, ಉದ್ದು, ತೊಗರಿ, 12 ಹೆಕ್ಟೇರ್‌, ನೆಲಗಡಲೆ 50 ಹೆಕ್ಟೇರ್‌, ಎಳ್ಳು 500 ಹೆಕ್ಟೇರ್‌ ಪ್ರದೇಶದಲ್ಲಿ ಈಗಾಗಲೇ ಬಿತ್ತನೆ ಕಾರ್ಯ ಮುಗಿದಿದೆ. ತಾಲೂಕಿನಲ್ಲಿ ಆಗಾಗ ಮಳೆ ಸುರಿಯುತ್ತಿದ್ದು, ರೈತರು ಈ ಬಾರಿ ಭರ್ಜರಿ ಮುಂಗಾರು ಬೆಳೆಯ ನಿರೀಕ್ಷೆಯಲ್ಲಿದ್ದಾರೆ.

ಎರಡ್ಮೂರು ದಿನದಲ್ಲಿ ಉತ್ತಮ ಮಳೆ: ಈ ಬಾರಿ ಕಳೆದ ವರ್ಷಕ್ಕಿಂತ ಪೂರ್ವ ಮುಂಗಾರು ತಾಲೂಕಿನಲ್ಲಿ ಪ್ರಾರಂಭವಾಗಿಲ್ಲ. ಇದುವರೆಗೆ 96.01 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು, ಅದರೆ ಏ.29 ರ ಸೋಮವಾರದವರೆಗೆ 84 ಮಿ.ಮೀ. ಮಳೆಯಾಗಿದ್ದು, ಶೇ.13ರಷ್ಟು ಮಳೆ ಕೊರತೆ ಉಂಟಾಗಿದೆ. ತಾಲೂಕಿನ ರೈತರು ಕೂಡ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಇನ್ನು ಎರಡು ಮೂರು ದಿನದಲ್ಲಿ ಉತ್ತಮ ಮಳೆಯ ಮುನ್ಸೂಚನೆ ವರದಿಯಾಗಿದ್ದು, ಮುಂದಿನ ಒಂದು ವಾರದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಕೃಷಿ ಸಹಾಯಕ ನಿರ್ದೇಶಕ ಜಯರಾಮಯ್ಯ ತಿಳಿಸಿದ್ದಾರೆ.

* ಬಿ.ನಿಂಗಣ್ಣಕೋಟೆ

ಟಾಪ್ ನ್ಯೂಸ್

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.