ಬಿಎಸ್‌ವೈ ವಿರುದ್ಧದ ರಾಜಕೀಯ ಷಡ್ಯಂತ್ರಕ್ಕೆ ಕಿಡಿ


Team Udayavani, Aug 23, 2017, 12:30 PM IST

mys6.jpg

ತಿ.ನರಸೀಪುರ: ಭ್ರಷ್ಟಚಾರ ನಿಗ್ರಹ ದಳವನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿ ರಾಜಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಧೋರಣೆಯನ್ನು ಖಂಡಿಸಿ ಪಟ್ಟಣದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು.

ಪಟ್ಟಣದ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ಜಮಾವಣೆಗೊಂಡ ನರಸೀಪುರ ಮೀಸಲು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಹಾಗೂ ಮುಖಂಡರು ಖಾಸಗಿ ಬಸ್‌ ನಿಲ್ದಾಣ ವೃತ್ತದವರೆಗೆ ಮೆರವಣಿಗೆಯಲ್ಲಿ ತೆರಳಿ, ಮುಂದಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ ಸುಳ್ಳು ಮೊಕದ್ದಮೆ ದಾಖಲಿಸಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿ ಘೋಷಣೆ ಕೂಗುತ್ತಾ ಪ್ರತಿಭಟನೆ ಪ್ರಾರಂಭಿಸಿದರು.

ಸಿಎಂ ಸಣ್ಣತನ: ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ರಾಷ್ಟ್ರೀಯ ಎಸ್ಸಿ ಮೋರ್ಚಾದ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್‌ ಮಾಜಿ ಸದಸ್ಯ ಸಿ.ರಮೇಶ್‌ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿ ಮೇಲೆ ಒತ್ತಡ ತರುವ ಮೂಲಕ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಸಣ್ಣತನವನ್ನು ಪ್ರದರ್ಶಿಸಿದ್ದಾರೆ. ಮಗನ ಮಂತ್ರಿಮಾಡಿದ ಆಸೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಮೆಡಿಕಲ್‌ ಕಾಲೇಜಿನಲ್ಲಿ ಸೀಟು ಹಂಚಿಕೆ ಮಾಡುವಲ್ಲಿ ತಲ್ಲಿನರಾಗಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಕಾಂಗ್ರೆಸ್‌ ಪಕ್ಷವನ್ನೇ ಮಾರಿಕೊಂಡಿದ್ದಾರೆ ಎಂದು ಆರೋಪಿಸಿದರು.

ಬಿಎಸ್‌ವೈ ಸಿಎಂ ಸ್ಥಾನ ತಪ್ಪಿಸಲು ಸಾಧ್ಯವಿಲ್ಲ: ಹಿರಿಯ ಮುಖಂಡ ಹಾಗೂ ಜಿಪಂ ಮಾಜಿ ಸದಸ್ಯ ಪುಟ್ಟಬಸವಯ್ಯ ಮಾತನಾಡಿ, ರಾಜ್ಯದ ಆಡಳಿತರೂಢ ಕಾಂಗ್ರೆಸ್‌ ಸರ್ಕಾರಕ್ಕೆ ಅಭಿವೃದ್ಧಿ ಬಗ್ಗೆಯಾಗಲಿ ಅಥವಾ ದಕ್ಷ ಆಡಳಿತವನ್ನು ನೀಡುವಲ್ಲಿ ಬದ್ಧತೆಯಿಲ್ಲ. ಬದಲಿಗೆ ಜನರಲ್ಲಿ ಬಿಜೆಪಿ ಬಗ್ಗೆ ಗೊಂದಲವನ್ನುಂಟು ಮಾಡಲು ಷಡ್ಯಂತ್ರ ನಡೆಸಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಿ ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ಕಾಂಗ್ರೆಸ್‌ ಕುತಂತ್ರಕ್ಕೆ ಜನರು ಮನ್ನಣೆ ನೀಡದೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ನೀಡಿದಾಗ ಕಾಂಗ್ರೆಸ್‌ಗೆ ತಪ್ಪಿನ ಅರಿವಾಗಲಿದೆ. ಯಡಿಯೂರಪ್ಪ ಅವರು ಮತ್ತೂಮ್ಮೆ ಮುಖ್ಯಮಂತ್ರಿಯಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲವೆಂದು ಭವಿಷ್ಯ ನುಡಿದರು.

ಸಿಎಂ ವಿರುದ್ಧ ದೂರಿದ್ದರು ಕ್ರಮವಿಲ್ಲ: ಜಿಪಂ ಉಪಾಧ್ಯಕ್ಷ ಕೈಯಂಬಳ್ಳಿ ಜಿ.ನಟರಾಜು ಮಾತನಾಡಿ, ರಾಜ್ಯ ಸರ್ಕಾರವೇ ರಚನೆ ಮಾಡಿದ ಭ್ರಷ್ಟಚಾರ ನಿಗ್ರಹದ ಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೇ 17 ರಿಂದ 20ಕ್ಕೂ ಹೆಚ್ಚಾ ದೂರುಗಳು ಸಲ್ಲಿಕೆಯಾದರೂ ಎಸಿಬಿಯ ಯಾವೊಬ್ಬ ಅಧಿಕಾರಿಯೂ ಎಫ್ಐಆರ್‌ ಹಾಕಿ ತನಿಖೆಯನ್ನು ಆರಂಭಿಸಿಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ಎಲ್ಲಾ ಪ್ರಕರಣಗಳಿಂದಲೂ ಖುಲಾಸೆಗೊಂಡ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಮೊಕದ್ದಮ್ಮೆ ದಾಖಲಿಸಿರುವುದು ಸೇಡಿನ ರಾಜಕಾರಣವಾಗಿದೆ.

ಕೆಪಿಸಿಸಿ ಮಹಿಳಾ ಅಧ್ಯಕ್ಷ ಲಕ್ಷ್ಮೀ ನಿಂಬಾಳ್ಕರ್‌, ಸಚಿವ ಡಿ.ಕೆ.ಶಿವಕುಮಾರ್‌ ಹಾಗೂ ಇನ್ನಿತರರ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿ, ಅಕ್ರಮ ಬಯಲಿಗೆಳೆದಿದ್ದು ಜಗಜಾjಹಿರಾತದರೂ ಅವರುಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಸಿದ್ದರಾಮಯ್ಯ ಅವರಿಂದ ಪ್ರಾಮಾಣಿಕ ಆಡಳಿತ ನೀಡಲು ಸಾಧ್ಯವಿಲ್ಲವೆಂದು ಲೇವಡಿ ಮಾಡಿದರು.

ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಸಮಿತಿ ಸದಸ್ಯ ಕರೋಹಟ್ಟಿ ಮಹದೇವಯ್ಯ, ಜಿಲ್ಲಾ ಸಮಿತಿ ಸದಸ್ಯ ತೋಟದಪ್ಪ ಬಸವರಾಜು, ಕ್ಷೇತ್ರಾಧ್ಯಕ್ಷ ಹೆಚ್‌.ಎಂ.ಪರಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಕರೋಹಟ್ಟಿ ಬಸವರಾಜು, ಬಿ.ಎನ್‌.ಸುರೇಶ, ಶಕ್ತಿ ಕೇಂದ್ರ ಅಧ್ಯಕ್ಷ ಬಿ.ವೀರಭದ್ರಪ್ಪ, ಯುವ ಮೋರ್ಚಾ ಅಧ್ಯಕ್ಷ ಮಣಿಕಂಠರಾಜ್‌ಗೌಡ, ಪ್ರಧಾನ ಕಾರ್ಯದರ್ಶಿ ಡಿ.ಎಂ.ಸಿದ್ದರಾಜು, ತಾಪಂ ಮಾಜಿ ಸದಸ್ಯ ಬಸವರಾಜು,

-ವೀರಶೈವ ಮಹಾಸಭಾದ ಯುವ ಅಧ್ಯಕ್ಷ ಆರ್‌.ಶಿವಕುಮಾರ್‌, ಮುಖಂಡರಾದ ಪಿ.ಪ್ರಭಾಕರ, ವೆಂಕಟೇಶ್‌, ಬನ್ನಹಳ್ಳಿಹುಂಡಿ ಪ್ರಕಾಶ, ಸೋಸಲೆ ಮಂಜುನಾಥ, ವಿಶ್ವನಾಥ, ಎಂ.ಮಿಥುನ್‌, ಕಾಳೇಗೌಡ, ಬಿ.ಎಂ.ಯೋಗಾನಂದ, ಚನ್ನಮಾಯಿಗೌಡ, ಆರ್‌.ರಾಮಸ್ವಾಮಿ, ಶ್ರೀನಿವಾಸರಾವ್‌, ಕೊತ್ತೇಗಾಲ ಕಿಟ್ಟಿ, ನಿಲಸೋಗೆ ಸಿದ್ಧರಾಜು, ಅಶೋಕ ಹಾಗೂ ಇನ್ನಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಬಿನಿ ಹಿನ್ನೀರಿನಲ್ಲಿ ಈಜಿದ ಹುಲಿ !

ಕಬಿನಿ ಹಿನ್ನೀರಿನಲ್ಲಿ ಈಜಿದ ಹುಲಿ !

ಎಚ್‌.ಡಿ.ಕೋಟೆಯಲ್ಲಿ ಬಿಡಾಡಿ ರಾಸುಗಳಿಗೆ ಸಿಗದ ಮುಕ್ತಿ

ಎಚ್‌.ಡಿ.ಕೋಟೆಯಲ್ಲಿ ಬಿಡಾಡಿ ರಾಸುಗಳಿಗೆ ಸಿಗದ ಮುಕ್ತಿ

h vishwanath and siddaramaiah

ಕುರುಬರಿಗೆ ಸಿದ್ದರಾಮಯ್ಯನ ನೋಡಿದ್ರೆ ಇಂಗ್ಲೀಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್

ಹುಣಸೂರಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತ

ಹುಣಸೂರಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತ

1-rrr

ಸೋಲಿಸಿದವನ ಬಳಿಯೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.