ಸಾ.ರಾ.ಮಹೇಶ್‌ ಹೇಳಿಕೆ ಸರಿಯಲ್ಲ: ವಿಶ್ವನಾಥ್‌ ಬೇಸರ


Team Udayavani, Mar 29, 2019, 1:08 PM IST

m3-sa-ra-mahesh

ಹುಣಸೂರು: ಸಚಿವ ಸಾ.ರಾ.ಮಹೇಶ್‌ ಇತ್ತೀಚೆಗೆ ಮಂಡ್ಯದಲ್ಲಿ ಜೆಡಿಎಸ್‌ ಗೆಲ್ಲಿಸಿದರೆ ಮಾತ್ರ ಮೈಸೂರಲ್ಲಿ ನಾವು ಕಾಂಗ್ರೆಸ್‌ಅಭ್ಯರ್ಥಿಯನ್ನು ಗೆಲ್ಲಿಸ್ತೀವಿ ಎಂಬ ಹೇಳಿಕೆ ಮೈತ್ರಿಧರ್ಮಕ್ಕೆ ವಿರುದ್ಧವಾದುದು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸ‌ರ ವಿರುದ್ಧದ ಸಾ.ರಾ. ಮಹೇಶ್‌ ನಡೆ ಕೂಡ ಸರಿಯಲ್ಲ. ಮಾತಿನ ಭರದಲ್ಲಿ ಆರೀತಿ ಹೇಳಿರಬಹುದು. ಇನ್ನು ಯಾರೇ ಮಂತ್ರಿಯಾಗಿರಲಿ ಅವರ ನಡತೆ ಸರಕಾರಕ್ಕೆ ಭೂಷಣವಾಗಿರಬೇಕು. ಬಹುತೇಕ ಸಿಬ್ಬಂದಿಗೆ ಮಂತ್ರಿಗಳ ಪರಿಚಯವಿರಲ್ಲ. ಇಂತಹ ಘಟನೆ ವೇಳೆ ಸಮಧಾನವಾಗಿ ವರ್ತಿಸಬೇಕು. ಈ ಬಗ್ಗೆ ಅವರಿಗೆ ಕಿವಿಮಾತು ಹೇಳುತ್ತೇನೆಂದರು.

ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯಾದ್ಯಂತ ಸಿದ್ದರಾಮಯ್ಯ ಹಾಗೂ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರಗಳ ಸಾಧನೆಗಳನ್ನು ಹಾಗೂ ಕೇಂದ್ರದ ಮೋದಿ ಸ‌ರ್ಕಾರದ ವೈಪಲ್ಯಗಳನ್ನು ಜನರ ಮುಂದಿಟ್ಟು ಮತಯಾಚಿಸಲಾಗುವುದು. ಕನಿಷ್ಠ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು.

ಮೈತ್ರಿ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌ ಪರವಾಗಿ ಎರಡೂ ಪಕ್ಷಗಳ ನಾಯಕರ ನೇತೃತ್ವದಲ್ಲಿ ಏ.1ರ ನಂತರ ಜಂಟಿಪ್ರಚಾರ ನಡೆಸಲಾಗುವುದು. ಎಲ್ಲಡೆ ಪ್ರಚಾರದ ವೇಳೆ ಸಮನ್ವಯಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ. ಮಹೇಶ್‌ ಹಾಗೂ ಮೈಸೂರು ಮತ್ತು ಕೊಡಗು ಜಿಲ್ಲೆಯ ಎರಡೂಪಕ್ಷಗಳ ಶಾಸಕರು, ಮಾಜಿ ಶಾಸಕರು ಹಾಗೂ ಮುಖಂಡರ ನೇತೃ‌Ìದಲ್ಲಿ ಎರಡೂ ಜಿಲ್ಲೆಗಳಲ್ಲಿ ವ್ಯಾಪಕ ಪ್ರಚಾರ ನಡೆಸಿ, ಬಹಳ ಅಂತರದಿಂದ ಗೆಲ್ಲಿಸಲು ಶ್ರಮ ಹಾಕಲಾಗುವುದು ಎಂದರು.

ಕುಟುಂಬ ರಾಜಕಾರಣ ಅರ್ಥಹೀನ: ಜೆಡಿಎಸ್‌ ವರಿಷ್ಟ ದೇವೇಗೌಡ ಮತ್ತು ಮೊಮ್ಮಕ್ಕಳಿಗೆ ಟಿಕೆಟ್‌ ನೀಡಲಾಗಿದೆ. ಅಲ್ಲಿ ಗೆಲ್ಲುವ ಅಭ್ಯರ್ಥಿಗಳಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಶ್ವನಾಥ್‌, ದೇಶದಲ್ಲಿ ಕುಟುಂಬ ರಾಜಕಾರಣವೆಂಬುದು ಅರ್ಥ ಕಳೆದುಕೊಂಡಿದೆ. ಎಲ್ಲಾ ಪಕ್ಷಗಳಲ್ಲೂ ಕುಟುಂಬ ರಾಜಕಾರಣ ಮೇಳೆ„ಸುತ್ತಿದ್ದು, ಈ ಸಂಬಂಧ ಮಾತನಾಡುವುದರಲ್ಲಿ ಅರ್ಥವಿಲ್ಲವೆಂದು ತಿಳಿಸಿದರು.

ನಾನು ಅಂಬರೀಶ್‌ ಸ್ನೇಹಿತರಾಗಿದ್ದವರು. ಸುಮಲತಾ ಅಂಬರೀಶ್‌ ಬಗ್ಗೆ ಅಪಾರ ಗೌರವವಿದ್ದು, ಅವರ ಬಗ್ಗೆ ನಾನೇನು ಮಾತನಾಡುವುದಿಲ್ಲ ಎಂದು ಹೇಳಿದರು. ನಿರೊದ್ಯೋಗ ಸೃಷ್ಟಿಯೇ ಸಾಧನೆ:2014ರ ಚುನಾವಣೆ ಪ್ರಣಾಳಿಕೆಯಲ್ಲಿ ಬಿ.ಜೆ.ಪಿ.ನೀಡಿದ್ದ ಎರಡು ಕೋಟಿ ಉದ್ಯೋಗಸೃಷ್ಟಿ ಭರವಸೆಯ ಬದಲಿಗೆ ಕೇವಲ 27 ಸಾವಿರ ಉದ್ಯೋಗ ಕಲ್ಪಿಸಿದೆ.

ಉದ್ಯೋಗಸೃಷ್ಟಿಗೆ ಯಾವುದೇ ಕಾರ್ಯಕ್ರಮ ರೂಪಿಸಲಿಲ್ಲ, ಇನ್ನು ಜನ್‌ಧನ್‌ ಯೋಜನೆಯ ಜೀರೋಬ್ಯಾಲೆನ್ಸ್‌ ಖಾತೆ ಹಾಗೆ ಉಳಿದಿದ್ದು, ಪ್ರತಿ ಖಾತೆಗೆ 15 ಲಕ್ಷ ತುಂಬವ ಭರವಸೆ ಹುಸಿಯಾಗಿದ್ದು, ಜೀರೋಬ್ಯಾಲೆನ್ಸ್‌ ಸ‌ರ್ಕಾರವೆಂದು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ತಾಲೂಕು ಜೆಡಿಎಸ್‌ ಅಧ್ಯಕ್ಷ ಮಹದೇವೇಗೌಡ, ನಗರ ಅಧ್ಯಕ್ಷ ಮಹಮದ್‌ಪೀರ್‌, ನಗರಸಭೆ ಮಾಜಿ ಅಧ್ಯಕ್ಷರಾದ ಎಚ್‌.ವೈ.ಮಹದೇವ್‌, ಎಂ.ಶಿವಕುಮಾರ್‌, ಜಿ.ಪಂ.ಮಾಜಿ ಸದಸ್ಯ ಫಜಲುಲ್ಲಾ, ಕೆ.ಆರ್‌.ನಗರದ ಜೆಡಿಎಸ್‌ ಮುಖಂಡ ಪ್ರಭುಶಂಕರ್‌, ತಾಪಂ ಸದಸ್ಯ ಶ್ರೀನಿವಾಸ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.