ಕೆರೆ, ಬೆಳೆ ನುಂಗುವ ಕಲ್ಲು ಗಣಿಗಾರಿಕೆ ನಿಲ್ಲಿಸಿ


Team Udayavani, Jul 18, 2019, 3:00 AM IST

kere-bele

ಕೆ.ಆರ್‌.ನಗರ: ತಾಲೂಕಿನ ಮುಂಡೂರು ಗ್ರಾಮದ ವ್ಯಾಪ್ತಿಗೆ ಸೇರಿದ ಸರ್ಕಾರಿ ಜಾಗದಲ್ಲಿ ನಡೆಯುತ್ತಿರುವ ಭಾರೀ ಕಲ್ಲು ಗಣಿಗಾರಿಕೆಯಿಂದ ಈ ಭಾಗದ ಜನತೆಗೆ ಹಲವಾರು ರೀತಿ ತೊಂದರೆಯಾಗುತ್ತಿದ್ದು, ಕೂಡಲೇ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಗಣಿಗಾರಿಕೆ ನಡೆಯುವ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.

ತಾಪಂ ಸದಸ್ಯರಾದ ಎಚ್‌.ಟಿ.ಮಂಜುನಾಥ್‌, ಮುಂಡೂರು ಕುಮಾರ್‌ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಗಣಿಗಾರಿಕೆಯಿಂದ ಜನತೆಗೆ ಆಗುತ್ತಿರುವ ನಷ್ಟ ಹಾಗೂ ಪರಿಸರಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ವಿವರಿಸಿದ ಗ್ರಾಮಸ್ಥರು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಣಿಗಾರಿಕೆ ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಸುತ್ತಮುತ್ತಲ ಗ್ರಾಮಸ್ಥರೊಡಗೂಡಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಕೆರೆಯ ಅರ್ಧಭಾಗ ಕಲ್ಲು: ತಾಪಂ ಸದಸ್ಯ ಎಚ್‌.ಟಿ.ಮಂಜುನಾಥ್‌ ಮತ್ತು ಮುಂಡೂರುಕುಮಾರ್‌ ಮಾತನಾಡಿ, ಗ್ರಾಮಕ್ಕೆ ಸೇರಿದಂತಿರುವ ಸರ್ಕಾರಿ ಜಾಗ ಸರ್ವೆ ನಂ.244ರಲ್ಲಿ 1986-1987ರಿಂದ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದು, ಬಿಳಿಕಲ್ಲು, ಬಿಳಿಮಣ್ಣು ಹಾಗೂ ಕಾಗೆ ಬಂಗಾರ ಮತ್ತು ಬೆಲೆಬಾಳುವ ಮಣ್ಣು ತೆಗೆದು ಉಳಿದ ತ್ಯಾಜ್ಯವನ್ನು ಅಕ್ಕಪಕ್ಕ ಸುರಿಯುವುದರಿಂದ ಅದು ಮಳೆ ಬಿದ್ದಾಗ ನೇರವಾಗಿ ಕಲ್ಲು ಮಣ್ಣು ಸಮೇತ ಕೆರೆಗೆ ಬಂದು ಸೇರುವುರಿಂದ ಗ್ರಾಮದ ರೈತರ ಜೀವನಾಡಿ ಕೆರೆ ಅರ್ಧ ಕಲ್ಲು ಮಣ್ಣಿನಿಂದ ತುಂಬಿ ಹೋಗಿದೆ. ಈಗ ಮಳೆ ಬಂದರೂ ನೀರು ನಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿ ಜನಜಾನುವಾರುಗಳಿಗೆ ನೀರಿಗಾಗಿ ಪರದಾಡುವಂತಾಗಿದೆ ಎಂದು ಅವಲತ್ತುಕೊಂಡರು.

ಬೆಳೆಗೆ ಧೂಳು:ಅಲ್ಲದೇ ವರ್ಷಪೂತಿ ಗಣಿಗಾರಿಕೆ ನಡೆಸುವುದರಿಂದ ಅಲ್ಲಿನ ಧೂಳು ರೈತರ ಬೆಳೆಗಳ ಮೇಲೆ ಬಿದ್ದು ಇಡೀ ಬೆಳೆ ಹಾಳಾಗುತ್ತಿದೆ. ಗಣಿಗಾರಿಕೆಯ ಧೂಳಿನಿಂದ ಅಕ್ಕಪಕ್ಕದ ಗ್ರಾಮದವರು ವಿವಿಧ ಕಾಯಿಲೆಗಳಿಗೆ ತುತ್ತಾಗಿದ್ದಾರೆ ಎಂದರು.

ನಿದ್ರೆಗೆ ಭಂಗ: ಗಣಿಗಾರಿಕೆಯಿಂದ ತೆಗೆಯುವ ಭಾರೀ ಬೆಲೆ ಬಾಳುವ ಕಲ್ಲು, ಮಣ್ಣು ಹಾಗೂ ಬಿಳಿಮಣ್ಣು, ಕಾಗೆ ಬಂಗಾರ ಮತ್ತಿತರ‌ ಖನಿಜಗಳನ್ನು ಮಿತಿ ಮೀರಿ ದೊಡ್ಡ ವಾಹನಗಳಲ್ಲಿ ಅದರಲ್ಲೂ ರಾತ್ರಿ ವೇಳೆ ಮಾತ್ರ ಸಾಗಿಸುವುದರಿಂದ‌ ಈ ಭಾಗದ ಸಾರ್ವಜನಿಕರ ನಿದ್ರೆಗೆ ಭಂಗವಾಗಿದ್ದು, ಲಾರಿಗಳು ಆಗಾಗ ರಸ್ತೆ ನಡುವೆ ಕೆಟ್ಟು ನಿಂತಾಗ ವಾಹನಗಳ ಓಡಾಟಕ್ಕೆ ದಾರಿಯಿಲ್ಲದೆ ಪರದಾಡುವಂತಾಗಿದೆ.

ಗಣಿಗಾರಿಕೆಗೆ ಭಾರೀ ಗಾತ್ರದ ಬೆಟ್ಟ ಕರಗಿತು!: ಗಣಿಗಾರಿಕೆಯಿಂದ ತೆಗೆದ ಕಲ್ಲು ಮಣ್ಣನ್ನು 16 ಚಕ್ರ, 14 ಚಕ್ರ ಸೇರಿದಂತೆ ಹೆಚ್ಚು ಭಾರದ ವಾಹನಗಳಲ್ಲಿ ಮಿತಿಮೀರಿ ಲೋಡ್‌ ಮಾಡಿಕೊಂಡು ರಸ್ತೆ ನಿಯಮ ಮೀರಿ ಹೆಚ್ಚು ಭಾರವನ್ನು ಹೊತ್ತು ಚಲಿಸುವುದರಿಂದ ಮುಂಡೂರು, ಕುಲುಮೆಹೊಸೂರು, ಬೆಟ್ಟಹಳ್ಳಿ ಸೇರಿದಂತೆ ಈ ಭಾಗದ ರಸ್ತೆಗಳು ಹದಗೆಟ್ಟಿವೆ.

ಭಾರೀ ಗಾತ್ರವಿದ್ದ ಬೆಟ್ಟ ಇಂದು ಅಕ್ರಮ ಗಣಿಗಾರಿಕೆಯಿಂದ ಕರಗಿ ಇಡೀ ಪರಿಸರ ಹಾಳಾಗಿದ್ದು, ಈ ಬಗ್ಗೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದಲ್ಲಿ ಈ ಭಾಗದ ಗ್ರಾಮಗಳ ಜನತೆ ಹಾಗೂ ರೈತಪರ ಸಂಘಟನೆಗಳೊಂದಿಗೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಈ ಸಂಧರ್ಭದಲ್ಲಿ ಮುಂಡೂರು ಗ್ರಾಮದ ಹಲವಾರು ರೈತರು ಹಾಜರಿದ್ದರು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.