ವಿದ್ಯಾರ್ಥಿಗಳೇ, ಬಾಹ್ಯ ಆಕರ್ಷಣೆಗೆ ಮಾರು ಹೋಗದಿರಿ

Team Udayavani, Sep 8, 2019, 3:00 AM IST

vidyarthigale

ಮೈಸೂರು: ನಮ್ಮಲ್ಲಿ ಎಷ್ಟೇ ಹಣ, ಸಂಪತ್ತು ಇದ್ದರೂ, ಸರಳ ಜೀವನ ನಡೆಸುವ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಶಾಸಕ ಜಿ.ಟಿ. ದೇವೇಗೌಡ ಹೇಳಿದರು. ಮೈಸೂರು ವಿಜಯನಗರ ನಾಲ್ಕನೇ ಹಂತದಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಾಮರ್ಥ್ಯ: ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಹೆಣ್ಣು ಮಕ್ಕಳು ಸಾಧನೆ ಮಾಡಿದ್ದಾರೆ. ಉನ್ನತ ಹುದ್ದೆ ಅಲಂಕರಿಸಲು ಹಾಗೂ ಸಾಧನೆ ಮಾಡಲು ಹೆಣ್ಣು-ಗಂಡು ಎಂಬ ಭೇದವಿಲ್ಲ. ನಮ್ಮಲ್ಲಿ ಸಾಮರ್ಥ್ಯವಿರಬೇಕಷ್ಟೇ. ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯರು ಬಾಹ್ಯ ಆಕರ್ಷಣೆಗಳಿಗೆ ಮಾರುಹೋಗದೇ ತಮ್ಮ ಜವಾಬ್ದಾರಿಯನ್ನು ಅರಿತು ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಂಗಾತಿ ಆಯ್ಕೆ: ಒಂದು ವೇಳೆ ನಿಮಗೆ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವಿದ್ದರೆ, ಒಳ್ಳೆಯ ಹಾಗೂ ಸಂಸ್ಕಾರವಂತ ಹುಡುಗನನ್ನು ಆರಿಸಿಕೊಳ್ಳಿ. ಆದರೆ, ನಿಮ್ಮ ಆಯ್ಕೆಯನ್ನು ಪೋಷಕರು ಮೆಚ್ಚುವಂತೆ ಇರಬೇಕು ಎಂದು ಕಿವಿಮಾತು ಹೇಳಿದರು. ನಮ್ಮಲ್ಲಿ ಎಷ್ಟೇ ಹಣ, ಸಂಪತ್ತು, ಐಶ್ವರ್ಯ ಇದ್ದರೂ, ಸರಳವಾಗಿ ಜೀವನ ನಡೆಸಬೇಕು. ಆಡಂಬರ ಜೀವನದಿಂದ ಏನು ಸಿಗುವುದಿಲ್ಲ. ಇರುವುದರಲ್ಲಿಯೇ ತೃಪ್ತಿ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು. ಇನ್ಫೋಸಿಸ್‌ನ ಸುಧಾಮೂರ್ತಿ ನಿಮಗೆ ಮಾದರಿ ಆಗಬೇಕು ಎಂದರು.

ಜೀವನ ರೂಪಿಸಿಕೊಳ್ಳಿ: ವಿದ್ಯಾರ್ಥಿನಿಯರು ಪಠ್ಯ ಚಟುವಟಿಕೆಗಳಿಗೆ ಎಷ್ಟು ಮಹತ್ವ ನೀಡುತ್ತೀರೋ, ಅಷ್ಟೇ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡಬೇಕು. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ, ಮಾನಸಿಕ ಹಾಗೂ ಬೌದ್ಧಿಕವಾಗಿ ವಿಕಾಸವಾಗಬಹುದು. ಸರ್ಕಾರವು ಮಹಿಳಾ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಹಿ.ಶಿ. ರಾಮಚಂದ್ರೇಗೌಡ, ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಕೆ. ಸತೀಶ್‌ ಬಾಬು ಇತರರಿದ್ದರು.

300 ಪದವಿ ಕಾಲೇಜು ಪ್ರಾಂಶುಪಾಲ ಹುದ್ದೆ ಭರ್ತಿ: ನಾನು ಉನ್ನತ ಶಿಕ್ಷಣ ಸಚಿವನಾಗಿದ್ದ ವೇಳೆ 300ಕ್ಕೂ ಪದವಿ ಕಾಲೇಜುಗಳಲ್ಲಿ ಪ್ರಾಂಶುಪಾಲರೇ ಇರಲಿಲ್ಲ. ಉಪನ್ಯಾಸಕರೇ ಎರಡೂ ಹುದ್ದೆಯನ್ನು ನಿಭಾಯಿಸುವ ಪರಿಸ್ಥಿತಿ ಇತ್ತು. ಇದರಿಂದ ಪಠ್ಯಚಟುವಟಿಕೆ ತೀರಾ ಹಿಂದುಳಿದಿತ್ತು. ಕೂಡಲೇ ಖಾಲಿ ಇರುವ ಪಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಿ, ಎಲ್ಲಾ ಕಾಲೇಜುಗಳ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ. ಜೊತೆಗೆ ಈ ಕಾಲೇಜು ಕಟ್ಟಡ, ಶೌಚಾಲಯ, ವಿಶ್ರಾಂತಿ ಕೊಠಡಿ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ 6 ಕೋಟಿ ರೂ. ಮಂಜೂರು ಮಾಡಿ, ಕಾಲೇಜನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ‌ರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.