ವಿದ್ಯಾರ್ಥಿಗಳೇ, ಸಂಶೋಧಕರ ಕೊರತೆ ನೀಗಿಸಿ

Team Udayavani, Nov 27, 2018, 12:24 PM IST

m5-vidyarthi.jpg

ಮೈಸೂರು: ರಾಷ್ಟ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಪ್ರಜಾಪ್ರಭುತ್ವದ ಎಲ್ಲಾ ಆಯಾಮಗಳು ವಿಫ‌ಲವಾಗಿದ್ದು, ಸಮಾಜದ ಪರಿವರ್ತಕರಾಗಿ ವಿದ್ಯಾರ್ಥಿಗಳು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದನ್ನು ಆದರ್ಶವಾಗಿಸಿಕೊಳ್ಳಬೇಕಿದೆ ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಂ.ಎನ್‌. ವೆಂಕಟಾಚಲಯ್ಯ ಹೇಳಿದರು. 

ಹುಲಗಾದ್ರಿ ಟ್ರಸ್ಟ್‌ ಹಾಗೂ ಅಮೆರಿಕದ ನಿವಾಸಿ ಡಾ ಮೀರಾ ಸ್ವಾನಾಥನ್‌ ಇವರ ಸಹಭಾಗಿತ್ವದಲ್ಲಿ ನಗರದ ಎನ್‌ಐಇ ಡೈಮೆಂಡ್‌ ಜ್ಯುಬಲಿ ನ್ಪೋಟ್ಸ್‌ ಕಾಂಪ್ಲೆಕ್ಸ್‌ನಲ್ಲಿ ನಡೆದ ಬೃಹತ್‌ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಅಂಗಗಳಾದ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗಗಳು ವಿಫ‌ಲಾವಾಗಿವೆ.

ಪ್ರಜಾಪ್ರಭುತ್ವದ ಆಶಯಗಳನ್ನೇ ಅಲುಗಾಡಿಸಿದ್ದು, ಅಮೂಲಾಗ್ರವಾದ ಬದಲಾವಣೆಯೊಂದೇ ದೇಶದ ಆಶಾಕಿರಣವಾಗಿದೆ ಎಂದರು.  ದೇಶದಲ್ಲಿ 30 ವರ್ಷಗಳ ಹಿಂದೆ 36 ಎಂಜಿನಿಯರಿಂಗ್‌ ಕಾಲೇಜುಗಳು ಮಾತ್ರವೇ ಇತ್ತು. ಆದರೆ, ಇಂದು 10,900 ಎಂಜನಿಯರಿಂಗ್‌ ಕಾಲೇಜುಗಳಿದ್ದು, ಪ್ರತಿವರ್ಷ 16 ಲಕ್ಷ ಮಂದಿ ಎಂಜಿನಿಯರಿಂಗ್‌ ಪದವಿ ಪಡೆದು ಹೊರಬರುತ್ತಿದ್ದಾರೆ.

ಅವರಲ್ಲಿ ನಿಜವಾದ ಅರ್ಹತೆ ಇರುವ  ಶೇ.17 ಮಾತ್ರವಿದ್ದು, ಎಲ್ಲರಿಗೂ ಉದ್ಯೋಗ ನೀಡಲು ಸಾಧ್ಯವಿಲ್ಲ. ಅಲ್ಲದೇ ಎಲ್ಲರೂ ವೈದ್ಯರು, ಎಂಜಿನಿಯರ್‌ ಆಗಬೇಕೆಂದರೆ ಸಂಶೋಧಕರಾಗುವವರು ಯಾರು ಎಂದು ಪ್ರಶ್ನಿಸಿದರು. ದೇಶದಲ್ಲಿ ಸಂಶೋಧಕರ ಕೊರತೆ ಇದೆ ಎಂಬುದನ್ನು ಅರಿತು ಮುನ್ನಡೆಯುವ ಮೂಲಕ ಸಮಾಜದ ಪರಿವರ್ತಕರಾಗಿ ಸಂಸ್ಕೃತಿಯನ್ನು ಉಳಿಸಿ-ಬೆಳೆಸಲು ನಿಮ್ಮ ಸೇವೆ ಆದರ್ಶವಾಗಲಿ ಎಂದರು. 

ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎನ್‌.ಕುಮಾರ್‌ ಮಾತನಾಡಿ, ಇತ್ತೀಚಿಗೆ ಯುವಜನತೆಯ ಹಣದ ವ್ಯಾಮೋಹದಿಂದ ಸಮಾಜವನ್ನು ವೃದ್ಧಾಶ್ರಮದತ್ತ ದೂಡಿದೆ. ಹೀಗಾಗಿ ಯುವಜನತೆ ನಿಮ್ಮ ಬುದ್ಧಿವಂತಿಕೆಯನ್ನು ಹಣಕ್ಕೆ ಮಾರಾಟ ಮಾಡಿಕೊಳ್ಳದೆ, ಸಮಾಜಕ್ಕೆ ಉಪಯೋಗವಾಗುವಂತೆ ನೋಡಿಕೊಳ್ಳಬೇಕಿದೆ. ಜೀವನದಲ್ಲಿ ಅಂಕಗಳಿಕೆ ಎಂಬುದು ಚಿಕ್ಕ ಭಾಗವಾಗಿದ್ದು, ಅಂಕ ಗಳಿಕೆಯನ್ನೇ ಮುಖ್ಯ ಗುರಿಯನ್ನಾಗಿಸಿಕೊಳ್ಳಬೇಡಿ ಎಂದು ಸಲಹೆ ನೀಡಿದರು. 

ಕಾರ್ಯಕ್ರಮದಲ್ಲಿ 1000 ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ 60 ಲಕ್ಷ ರೂ. ವಿದ್ಯಾರ್ಥಿ ವೇತನ ನೀಡಲಾಯಿತು. ಶಾಸಕ ಎಸ್‌.ಎ. ರಾಮದಾಸ್‌, ಮೈಸೂರು ಮೆಡಿಕಲ್‌ ಕಾಲೇಜಿನ ನಿವೃತ್ತ ನಿರ್ದೇಶಕಿ ಡಾ. ಗೀತಾ ಅವಧಾನಿ. ಎನ್‌ಐಇ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಚಂದ್ರಶೇಖರ್‌. ಹುಲಗಾದ್ರಿ ಟ್ರಸ್ಟ್‌, ಆದರ್ಶ ಸೇವಾ ಸಂಘದ ಮುಖ್ಯಸ್ಥ ಜಿ.ಆರ್‌.ನಾಗರಾಜ್‌, ಕಾರ್ಯದರ್ಶಿ ರಾಮಕೃಷ್ಣ, ರಘೋತ್ತಮ, ವೆಂಕಟರಾಮ್‌ ಇತರರಿದ್ದರು.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.