ಸರಕಾರಿ ಆಸ್ತಿ ಉಳಿಸುವಲ್ಲಿ ತಾಲೂಕು ಆಡಳಿತ ವಿಫಲ: ನಗರಸಭೆ ಸದಸ್ಯ ವಿವೇಕಾನಂದ

Team Udayavani, Mar 15, 2022, 6:40 PM IST

Untitled-1

ಹುಣಸೂರು: ಹುಣಸೂರು ನಗರದ ಜನ ನಿಬಿಡ ಪ್ರದೇಶವಾದ ಬಸ್ ನಿಲ್ದಾಣದ ಬಳಿಯ ಕಿರಿಜಾಜಿ ರಸ್ತೆ ಸರ್ವೆ ನಂ.10 ರಲ್ಲಿ ನಾಲ್ಕು ಗುಂಟೆ ಬಿ ಖರಾಬು ಜಾಗವನ್ನು ಪ್ರಭಾವಿಗಳು ಕಬಳಿಸಲು ಹುನ್ನಾರ ನಡೆಸಿದ್ದು, ಸಂರಕ್ಷಿಸಿ ಬಾಬು ಜಗಜೀವನರಾಂ ಪಾರ್ಕ್ ಎಂದು ಘೋಷಿಸಬೇಕೆಂದು ನಗರಸಭಾ ಸದಸ್ಯ ವಿವೇಕಾನಂದ, ಪ್ರಜಾಕೀಯ ಪಾರ್ಟಿ ತಾಲೂಕು ಅಧ್ಯಕ್ಷ ಚೆಲುವರಾಜು  ಒತ್ತಾಯಿಸಿದರು.

ಜಂಟೀ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಗರಸಭೆ ಸದಸ್ಯ ವಿವೇಕಾನಂದ 2012ರ ನಗರ ಯೋಜನಾ ಪ್ರಾಧಿಕಾರದ ನಕ್ಷೆಯಲ್ಲಿ ಸರಕಾರಿ ಜಾಗವೆಂದು ನಮೂದಾಗಿದೆ. ಹಿಂದೆಯೂ ಸಹ ವಕೀಲ ದಿ.ರಮೇಶ್‌ರವರು ನ್ಯಾಯಾಲಯದಲ್ಲಿ ಇದೇ ಖರಾಬು ಜಾಗವನ್ನು ಕಬಳಿಸಲು ಹುನ್ನಾರ ನಡೆಸಿದ್ದಾರೆಂದು ದಾವೆ ಹೂಡಿದ್ದರು. 6 ವರ್ಷಗಳ ಕಾಲ ವಿಚಾರಣೆ ನಡೆದು ನ್ಯಾಯಾಲಯಕ್ಕೆ ಸೂಕ್ತ ದಾಖಲಾತಿ ಸಲ್ಲಿಸದಿದ್ದರಿಂದ ಈ ನಿವೇಶನ ಸರಕಾರಿ ಆಸ್ತಿ ಎಂದು ಘೋಷಿಸಿದ್ದಲ್ಲದೆ ಪರ್ಮನೆಂಟ್ ಇಂಜಕ್ಷನ್  ಆರ್ಡರ್ ಹೊರಡಿಸಿತ್ತು. ಇದಾದ ನಂತರ ಮತ್ತೆ ಪುರಸಭೆಯಲ್ಲಿ ಹಿಂಬರಹ ಪಡೆದ ನಗರದ ನಿವಾಸಿಯೊಬ್ಬರು ಉಚ್ಚನ್ಯಾಯಾಲಯ ಮೆಟ್ಟಿಲೇರಿದ್ದರು. ಅಲ್ಲಿಯೂ ಸಹ ವಿಚಾರಣೆ ನಡೆದು ದೂರುದಾರರ ನಿವೇಶನವನ್ನು ಹುಡುಕಿಕೊಡುವಂತೆ ಆದೇಶಿಸಿದೆ. ಆದರೆ ಅರ್ಜಿದಾರರು ಆಡಳಿತ ಯಂತ್ರವನ್ನೇ ದುರುಪಯೋಗಪಡಿಸಿಕೊಂಡು ನಾಲ್ಕು ಗುಂಟೆ ನಿವೇಶನಕ್ಕೆ ರಾತ್ರೋರಾತ್ರಿ ತಂತಿ ಬೇಲಿ ನಿರ್ಮಿಸಿದ್ದು, ಈ ಜಾಗದಲ್ಲಿ ಆಟೋ ನಿಲ್ದಾಣ, ಪಾನಿಪುರಿ ಮಾರುತ್ತಿದ್ದ ಸುಮಾರು 20 ಕುಟುಂಬಗಳು ಬೀದಿಪಾಲಾಗಿವೆ.

ತಕ್ಷಣವೇ ಹೆದ್ದಾರಿ ಬದಿಯಲ್ಲಿ ತಂತಿಬೇಲಿ ತೆರವುಗೊಳಿಸಿ, ಜಗಜೀವನರಾಂ ಪಾರ್ಕ್ ಎಂದು ನಾಮಕರಣ ಮಾಡಬೇಕೆಂದು ಆಗ್ರಹಿಸಿ, ಇನ್ನೊಂದು ವಾರದಲ್ಲಿ ತಂತಿಬೇಲಿ ತೆರವಾಗದಿದ್ದಲ್ಲಿ ಒಂದೆಡೆ ಕಾನೂನಾತ್ಮಕ ಹೋರಾಟದ ಜೊತೆಗೆ ಸಾರ್ವಜನಿಕರೊಡಗೂಡಿ ತಾವೇ ಮುಂದೆನಿಂತು ತಂತಿಬೇಲಿ  ತೆರವುಗೊಳಿಸುವುದಾಗಿ ಎಚ್ಚರಿಸಿದರು.

ಪ್ರಜಾಕೀಯ ಪಾರ್ಟಿ ತಾಲೂಕು ಅಧ್ಯಕ್ಷ ಚೆಲುವರಾಜು ಮಾತನಾಡಿ ನಗರದ ಜನನಿಭಿಡ ರಸ್ತೆಗಳಾದ ಲಕ್ಷ್ಮೀ ವಿಲಾಸ್‌ವೃತ್ತ, ದರ್ಗಾರಸ್ತೆ, ಮಂಜುನಾಥ ಹಾಗೂ ನ್ಯೂಮಾರುತಿ ಬಡಾವಣೆಗಳಲ್ಲಿ ರಸ್ತೆಗಳು, ಸರಕಾರಿ ನಿವೇಶನಗಳನ್ನೇ ಒತ್ತುವರಿ ಮಾಡಿಕೊಂಡು ಕಾಪ್ಲೆಕ್ಸ್ ನಿರ್ಮಿಸಿದ್ದು, ನಗರಸಭೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ತಕ್ಷಣವೇ ಸರ್ವೆ ಕೈಗೊಂಡು ಒತ್ತುವರಿ ತೆರವುಗೊಳಿಸಬೇಕೆಂದು ಆಗ್ರಹಿಸಿದರು.

ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾ ಮುಖಂಡ ಸುನಿಲ್, ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ್ ಇದ್ದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.