Udayavni Special

ದಸರಾ ಮಹೋತ್ಸವದ ಭಿತ್ತಿಚಿತ್ರ ಬಿಡುಗಡೆ


Team Udayavani, Sep 27, 2018, 5:05 PM IST

mys-1.jpg

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಾಳಿಪಟ ಉತ್ಸವ, ವಿಂಟೇಜ್‌ ಕಾರ್‌ ರ್ಯಾಲಿ, ದಸರಾ ಆಟೋಕ್ರಾಸ್‌ ಕಾರುಗಳ ರೇಸ್‌ ಸೇರಿದಂತೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ದಸರಾ ಕಾರ್ಯಕಾರಿ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ದಸರಾ ಭಿತ್ತಿಚಿತ್ರ ಬಿಡುಗಡೆ ಗೊಳಿಸಿ ಮಾತನಾಡಿದ ಅವರು, ಗಾಳಿಪಟದ ಸಂಸ್ಕೃತಿಯನ್ನು ಎಲ್ಲರಿಗೂ ಪರಿಚಯಿಸುವ ಮೂಲಕ ಮಕ್ಕಳು ಹಾಗೂ ಯುವ ಜನತೆಯಲ್ಲಿ ಸೃಜನಶೀಲತೆ, ಸ್ಪರ್ಧಾತ್ಮಕ ಮನೋ ಭಾವ, ಚಿಂತನೆ ಬೆಳೆಸಲು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಸಂಯುಕ್ತಾಶ್ರಯ ದಲ್ಲಿ ಸೆ.29,30ರಂದು ಲಲಿತಮಹಲ್‌ ಹೆಲಿ ಪ್ಯಾಡ್‌ ಮೈದಾನದಲ್ಲಿ ಗಾಳಿಪಟ ಉತ್ಸವವ ಆಯೋಜಿಸಲಾಗಿದೆ. ಈ ಉತ್ಸವದಲ್ಲಿ ಮಂಗಳೂರು, ಮುಂಬೈ, ಅಹಮದಾಬಾದ್‌, ಸೂರತ್‌ ನಗರಗಳಿಂದ ವೃತ್ತಿ ನಿರತ ಗಾಳಿಪಟ ಹಾರಿಸುವವರು ಪಾಲ್ಗೊಳ್ಳಲಿದ್ದಾರೆ ಎಂದರು.

ಕಾರು ರ್ಯಾಲಿಗೆ ಚಾಲನೆ: ಸೆ.30ರಂದು ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಕುಮಾರಸ್ವಾಮಿ ವಿಂಟೇಜ್‌ ಕಾರುಗಳ ರ್ಯಾಲಿಗೆ ಚಾಲನೆ ನೀಡಲಿದ್ದು, ಅ.1ರಂದು ಮೈಸೂರಿನಲ್ಲಿ ವಿಂಟೇಜ್‌ ಕಾರುಗಳನ್ನು ಸ್ವಾಗತಿಸಲಾಗುವುದು. ಸೆ.30ರಿಂದ ಅ.6ರ ವರೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಯುವ ಸಂಭ್ರಮ ನಡೆಯಲಿದೆ. ಇಲ್ಲಿ ಆಯ್ಕೆಯಾದ ಕಾಲೇಜು
ವಿದ್ಯಾರ್ಥಿಗಳ ತಂಡಗಳಿಗೆ ಅ.10ರಿಂದ 17ರ ವರೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ಯುವ ದಸರಾದಲ್ಲಿ ಕಾರ್ಯಕ್ರಮ ನೀಡಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
 
ಕಲಾತಂಡಗಳ ಮೆರವಣಿಗೆ: ಅ.14ರಂದು ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಅರ ಮನೆಯಿಂದ ಬನ್ನಿಮಂಟಪ ಮೈದಾನದ ವರೆಗೆ ವಿವಿಧ ಕಲಾತಂಡಗಳ ಮೆರವಣಿಗೆ ಆಯೋಜಿಸಲಾಗಿದೆ. ಹೋಬಳಿ ಮಟ್ಟದಲ್ಲಿ ಗ್ರಾಮೀಣ ದಸರಾ ಆಯೋಜಿಸುವ ಸಂಬಂಧ ಅ.1ರಂದು ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ದಿನಾಂಕ ನಿಗದಿಪಡಿಸಲಾಗುವುದು ಎಂದರು.

ದಸರಾ ಸಂದರ್ಭದಲ್ಲಿ ಅಂತಾರಾಜ್ಯ ಪ್ರವಾಸಿ ವಾಹನಗಳಿಗೆ ಪ್ರವೇಶ ತೆರಿಗೆ ವಿನಾಯಿತಿ ನೀಡುವ ಸಂಬಂಧ ಸರ್ಕಾರಕ್ಕೆ
ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇನ್ನೂ ಸರ್ಕಾರ ದಿಂದ ಆದೇಶವಾಗಿಲ್ಲ ಎಂದರು. 

ಅ.3ಕ್ಕೆ ಆಹ್ವಾನ: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸುವಂತೆ ಅ.3ರಂದು ರಾಜ್ಯಪಾಲರು, ಮುಖ್ಯಮಂತ್ರಿ, ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ, ದಸರಾ ಉದ್ಘಾಟಕ ರಾದ ಡಾ.ಸುಧಾಮೂರ್ತಿ ಅವರಿಗೆ ಜಿಲ್ಲಾ ಡಳಿತದ ವತಿಯಿಂದ ಆಹ್ವಾನ ನೀಡಲಾಗುವುದು ಎಂದರು. ಸಭೆಯಲ್ಲಿ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌, ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌, ಜಿಪಂ ಸಿಇಒ ಕೆ. ಜ್ಯೋತಿ, ನಗರ ಪೊಲೀಸ್‌ ಆಯುಕ್ತ ಡಾ.ಎ. ಸುಬ್ರಹ್ಮಣ್ಯೇಶ್ವ ರಾವ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮಿತ್‌ ಸಿಂಗ್‌, ಪಾಲಿಕೆ ಆಯುಕ್ತ ಕೆ.ಎಚ್‌.ಜಗದೀಶ್‌, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜನಾರ್ದನ, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಉಪ ಸಮಿತಿಗೆ ಹೆಸರು ಬಂದಿಲ್ಲ
ನಾಡಹಬ್ಬ ದಸರಾ ಮಹೋತ್ಸವ ಆಚರಣೆ ಸಂಬಂಧ ರಚಿಸಲಾಗುವ 16 ಉಪ ಸಮಿತಿಗಳಿಗೆ ಇದೇ ಮೊದಲ ಬಾರಿಗೆ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರನ್ನು ಸೇರಿಸಲು ಉತ್ಸುಕತೆ ತೋರಿಸುವ ಸಚಿವ ಜಿ.ಟಿ.ದೇವೇಗೌಡ ಅವರು, ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಮೂರು ಪಕ್ಷಗಳ ಅಧ್ಯಕ್ಷರುಗಳಿಗೆ ಪತ್ರ ಬರೆದು ಸಮಿತಿಗಳಿಗೆ ತಲಾ ಐದು ಹೆಸರುಗಳನ್ನು ನೀಡುವಂತೆ ಕೋರಿದ್ದರೂ ಈವರೆಗೆ ಯಾದ ಪಕ್ಷದವರೂ ಪಟ್ಟಿ ಕಳುಹಿಸಿಲ್ಲ. ಹೀಗಾಗಿ ಉಪ ಸಮಿತಿಗಳಿಗೆ ಜನಪ್ರತಿನಿಧಿಗಳನ್ನು ಸೇರಿಸುವ ಕಾರ್ಯ ವಿಳಂಬವಾಗಿದೆ. ಒಂದೆರಡು ದಿನಗಳಲ್ಲಿ ಈ ಕೆಲಸ ಆಗುತ್ತದೆ ಎಂದ ಸಚಿವರು, ಸ್ವತಃ ನಾನೇ ಶಾಸಕ ತನ್ವೀರ್‌ ಸೇಠ್ಠ್…ಗೆ ದೂರವಾಣಿ ಕರೆ ಮಾಡಲು ಪ್ರಯತ್ನಿಸಿದರೂ ಸಿಗುತ್ತಿಲ್ಲ ಎಂದು ಹೇಳಿದರು.

ದಸರಾ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿ ಪಾಲಿಕೆ ಹಾಗೂ ಲೋಕೋಪಯೋಗಿ ಇಲಾಖೆ, ನಗರಾ ಭಿವೃದ್ಧಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ 216 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಣಕಾಸು ಇಲಾಖೆಯಿಂದ ಒಂದೆರಡು ದಿನಗಳಲ್ಲಿ ಒಪ್ಪಿಗೆ ಸಿಗಲಿದೆ.
  ಜಿ.ಟಿ.ದೇವೇಗೌಡ, ಜಿಲ್ಲಾ ಉಸ್ತುವಾರಿ ಸಚಿವ

ಮೈಸೂರು ಭಾಗದ ಪ್ರವಾಸೋದ್ಯಮ ರಾಯಭಾರಿಯಾಗಲು ಒಪ್ಪಿರುವ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರೊಂದಿಗೆ ಅ.4 ಅಥವಾ 5 ರಂದು ಸಭೆ ನಡೆಸಿ, ರಾಯಭಾರಿಯಾಗಿ ಬಳಸಿಕೊಳ್ಳುವ ಸಂಬಂಧ ರೂಪು ರೇಷೆ ಸಿದ್ದಪಡಿಸಲಾಗುವುದು.
  ಸಾ.ರಾ.ಮಹೇಶ್‌, ಪ್ರವಾಸೋದ್ಯಮ ಸಚಿವ

ಟಾಪ್ ನ್ಯೂಸ್

ಕೊವ್ಯಾಕ್ಸಿನ್‌ ಲಸಿಕೆ ಶೇ 81ರಷ್ಟು ಪರಿಣಾಮಕಾರಿ : ಭಾರತ್ ಬಯೋಟೆಕ್

sslc-examination-there-will-be-small-changes-in-question-paper-pattern

ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷಾ ಮಾದರಿಯಲ್ಲಿ ಕೊಂಚ ಬದಲಾವಣೆ : ಅನ್ಬು ಕುಮಾರ್

ಯುವರತ್ನದ ‘ಪಾಠಶಾಲಾ’ ಹಾಡು ರಿಲೀಸ್ : ಹಾಡಿನಲ್ಲಿ ಕಾಣಿಸಿಕೊಂಡ ಅಣ್ಣಾವ್ರು..!

Good news for Vi users! Vodafone Idea subscribers to get health insurance benefit on mobile recharges

ವೊಡಾಫೋನ್ ಐಡಿಯಾ ರಿಚಾರ್ಜ್ ನಲ್ಲಿ ಸಿಗಲಿದೆ ಹೆಲ್ತ್ ಇನ್ಸುರೆನ್ಸ್..?!

12ನೇ ಮಹಡಿಯಿಂದ ಬೀಳುತ್ತಿದ್ದ ಮಗುವನ್ನು ರಕ್ಷಿಸಿ ಹೀರೋ ಆದ ಡೆಲಿವರಿ ಡ್ರೈವರ್!

Not Bothered With PM’s Bengal Rallies: Trinamool Leader

ನಾವು ತಲೆಕೆಡಿಸಿಕೊಳ್ಳುವುದಿಲ್ಲ, ಮೋದಿ ಎಷ್ಟು ಬಾರಿಯಾದರೂ ಪಶ್ಚಿಮ ಬಂಗಾಳಕ್ಕೆ ಬರಲಿ : ಬಸು

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳ ಹಾಸ್ಟೆಲ್ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳ ಹಾಸ್ಟೆಲ್ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದಲ್ಲಿ ಭಾರಿ ಪ್ರಮಾಣದ ಬೆಂಕಿ

ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದಲ್ಲಿ ಭಾರಿ ಪ್ರಮಾಣದ ಬೆಂಕಿ

ಆನೆದಾಳಿಗೆ ಬಲಿಯಾಗಿದ್ದ ಮಣಿಕಂದನ್‌ ಕಾರ್ಯ ಚಿರಸ್ಥಾಯಿ

ಆನೆದಾಳಿಗೆ ಬಲಿಯಾಗಿದ್ದ ಮಣಿಕಂದನ್‌ ಕಾರ್ಯ ಚಿರಸ್ಥಾಯಿ

ಮೈಸೂರಿನಲ್ಲಿ  3 ತಿಂಗಳೊಳಗೆ ಹೆಲಿ ಟೂರಿಸಂ

ಮೈಸೂರಿನಲ್ಲಿ 3 ತಿಂಗಳೊಳಗೆ ಹೆಲಿ ಟೂರಿಸಂ

ಮೈಸೂರಿನಲ್ಲಿ ಸಚಿವ ರಮೇಶ್ ಜಾರಕಿಹೋಳಿ ?

ಮೈಸೂರಿನಲ್ಲಿ ಸಚಿವ ರಮೇಶ್ ಜಾರಕಿಹೋಳಿ ?

ಗ್ರಾಮ ವಾಸ್ತವ್ಯ: ಆದಿವಾಸಿಗರ ಮನೆಗೆ ಬಂತು ಬೆಳಕು

ಗ್ರಾಮ ವಾಸ್ತವ್ಯ: ಆದಿವಾಸಿಗರ ಮನೆಗೆ ಬಂತು ಬೆಳಕು

MUST WATCH

udayavani youtube

ಇಂದಿನ ಸುದ್ದಿ ಸಮಾಚಾರ | Udayavani 03-March-2021 News Bulletin | Udayavani

udayavani youtube

ಮಂಗಳೂರು ಜೈಲು ಮೇಲ್ದರ್ಜೆಗೇರಿಸಲಾಗುವುದು; ಡಿಜಿಪಿ ಅಲೋಕ್ ಕುಮಾರ್

udayavani youtube

Udayavani 02-March-2021 News Bulletin | Udayavani

udayavani youtube

ಮಂಗಳೂರು: ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ನೂತನ ಮೇಯರ್ ಪ್ರೇಮಾನಂದ ಶೆಟ್ಟಿ

udayavani youtube

ಹಳೆಯ ವೃತ್ತ ಪತ್ರಿಕೆಯಿಂದ ಶಿವಾಜಿ ಮಹಾರಾಜರ ಕಲಾಕೃತಿ:

ಹೊಸ ಸೇರ್ಪಡೆ

Minister K.S Eshwarappa

ಗೆಲುವಿನ ನಾಗಾಲೋಟ ಖಚಿತ

Madhu Bangarppa

ರಾಜಕೀಯ ಬದಲಾವಣೆ ಪಕ್ಕಾ

Untitled-1

ಮನೆಗೆಲಸದವಳೂ ಮನುಷ್ಯಳೇ ತಾನೇ?

Case Filed

ಸಿಎಂ ಕಾರ್ಯಕ್ರಮದಲ್ಲಿ ಅನುಮತಿ ಇಲ್ಲದೆ ಡ್ರೋಣ್‌ ಹಾರಾಟ: ಪ್ರಕರಣ ದಾಖಲು

Shrungeri Sharadanmbe temple

ಶ್ರೀ ಶಾರದಾಂಬಾ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.