ಕ್ರೀಡಾಂಗಣ ಅಭಿವೃದ್ಧಿಗೆ ಅನುದಾನ ತರುವಷ್ಟರಲ್ಲಿ ಸರ್ಕಾರ ಬಿತ್ತು

Team Udayavani, Dec 23, 2019, 3:00 AM IST

kridangana

ಕೆ.ಆರ್‌.ನಗರ: ಪಟ್ಟಣದ ಕೃಷ್ಣರಾಜೇಂದ್ರ ಕ್ರೀಡಾಂಗಣದಲ್ಲಿ ಸಾರ್ವಜನಿಕರು ಮತ್ತು ಕ್ರೀಡಾಪಟುಗಳಿಗೆ ಅಗತ್ಯ ಮೂಲಭೂತ ಸವಲತ್ತುಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಸಾ.ರಾ.ಮಹೇಶ್‌ ಹೇಳಿದರು.

ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಸುರೇಶ್‌ಕುಮಾರ್‌ ಮತ್ತು ಇತರ ಅಧಿಕಾರಿಗಳೊಂದಿಗೆ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕ್ರೀಡಾ ಸೌಲಭ್ಯ ಮತ್ತು ಭದ್ರತೆಯ ಬಗ್ಗೆ ನಿಗಾ ವಹಿಸಲು ನಮ್ಮೊಂದಿಗೆ ನಗರದ ನಾಗರಿಕರು ಅಗತ್ಯ ಸಹಕಾರ ನೀಡಬೇಕು ಎಂದರು.

ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕ್ರೀಡಾಂಗಣದ ಸಮಗ್ರ ಅಭಿವೃದ್ದಿಗೆ 7 ಕೋಟಿ ರೂ. ಅಂದಾಜು ಪಟ್ಟಿಯನ್ನು ತಯಾರಿಸಿ ಆಡಳಿತಾತ್ಮಕ ಮಂಜೂರಾತಿಗಾಗಿ ಹಣಕಾಸು ಇಲಾಖೆಗೆ ಕಳುಹಿಸಿ ಕೊಡಲಾಗಿತ್ತು. ಆದರೆ, ಕಾಮಗಾರಿಗೆ ಮಂಜೂರಾತಿ ದೊರೆಯುವಷ್ಟರಲ್ಲಿ ಸರ್ಕಾರ ಪತನವಾಯಿತು. ಆದರೂ ಸರ್ಕಾರದ ಮೇಲೆ ಒತ್ತಡ ಹೇರಿ ನನ್ನ ನಿರೀಕ್ಷೆಯ ಎಲ್ಲಾ ಕೆಲಸಗಳನ್ನು ಮಾಡಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಮೊದಲನೆಯ ಹಂತದಲ್ಲಿ ಆಧುನಿಕ ಮಾದರಿಯ ಶೌಚಾಲಯ ನಿರ್ಮಾಣ, ಶುದ್ಧ ಕುಡಿಯುವ ನೀರು ಸರಬರಾಜು, ಜಿಮ್‌ ನವೀಕರಣ, ವಾಕ್‌ಮ್ಯಾಟ್‌ ಪೂರೈಕೆ, ಕ್ರೀಡಾಂಗಣದ ಸುತ್ತ ತಂತಿಬೇಲಿ ನಿರ್ಮಾಣ ಸೇರಿದಂತೆ ಇತರ ಅನೂಕೂಲಗಳನ್ನು ಕಲ್ಪಿಸಲಾಗುವುದು. ಬಳಿಕ ಹಂತ ಹಂತವಾಗಿ ಇತರ ಎಲ್ಲಾ ಸವಲತ್ತುಗಳನ್ನು ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಕ್ರೀಡಾಪಟುಗಳು ಮತ್ತು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಶಾಸಕರು, ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಸುರೇಶ್‌ಕುಮಾರ್‌, ನಿರ್ಮಿತಿ ಕೇಂದ್ರದ ಅಭಿಯಂತರ ಮಹೇಶ್‌ ಮತ್ತು ಪುರಸಭಾ ಮುಖ್ಯಾಧಿಕಾರಿ ಕೆ.ಶಿವಣ್ಣ ಅವರಿಗೆ ಕೆಲವು ಸೂಚನೆಗಳನ್ನು ನೀಡಿದರು. ಕೂಡಲೇ ಅಗತ್ಯ ಕಾಮಗಾರಿಗಳಿಗೆ ಚಾಲನೆ ನೀಡಬೇಕು ಎಂದು ಆದೇಶಿಸಿದರು.

ಈ ವೇಳೆ ತಾಲೂಕು ಜೆಡಿಎಸ್‌ ಅಧ್ಯಕ್ಷ ಚಂದ್ರಶೇಖರ್‌, ವಕ್ತಾರ ಕೆ.ಎಲ್‌.ರಮೇಶ್‌, ಪುರಸಭಾ ಸದಸ್ಯ ಕೆ.ಪಿ.ಪ್ರಭುಶಂಕರ್‌, ತಾಲೂಕು ಯುವ ಕಾಂಗ್ರೆಸ್‌ ಅಧ್ಯಕ್ಷ ಭೋಜರಾಜು, ತಹಶೀಲ್ದಾರ್‌ ಎಂ.ಮಂಜುಳಾ, ತಾಪಂ ಇಒ ಎಂ.ಎಸ್‌.ರಮೇಶ್‌, ಗ್ರಾಪಂ ಅಧ್ಯಕ್ಷ ಶಿವಶಂಕರ್‌, ಸದಸ್ಯ ಪುಟ್ಟರಾಜು, ಜೆಡಿಎಸ್‌ ಮುಖಂಡರಾದ ಹರೀಶ್‌, ಆಯಾಜ್‌ಅಹಮದ್‌, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಜಶೇಖರ ಇತರರಿದ್ದರು.

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.