ಗಡುವುಗಳ ಮೇಲೆ ಗಡುವು ನೀಡಿದ್ರೂ ಆಸ್ಪತ್ರೆ ಅಪೂರ್ಣ

Team Udayavani, Oct 12, 2019, 3:00 AM IST

gaduvu-gaduv

ಎಚ್‌.ಡಿ.ಕೋಟೆ: ಕಳೆದ ಎರಡು ವರ್ಷ ಹಿಂದೆ ಆರಂಭಗೊಂಡಿದ್ದ ಸುಸಜ್ಜಿತ ತಾಯಿ-ಮಗು ಆಸ್ಪತ್ರೆ ಕಟ್ಟಡ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. 8 ಕೋಟಿ ರೂ. ವೆಚ್ಚದ ಆಸ್ಪತ್ರೆ ಲೋಕಾರ್ಪಣೆಗೆ ಸರ್ಕಾರ ನೀಡಿದ್ದ ಗಡುವು ಮುಗಿದು ಎಂಟು ತಿಂಗಳು ಪೂರೈಸಿದರೂ ಸಾರ್ವಜನಿಕ ಸೇವೆಗೆ ಸಿದ್ಧವಾಗಿಲ್ಲ. ಈ ವರ್ಷಾಂತ್ಯಕ್ಕೂ ಉದ್ಘಾಟನೆಯಾಗುವುದು ಬಹುತೇಕ ಅನುಮಾನವಾಗಿದೆ.

ತಾಲೂಕು ಕೇಂದ್ರ ಸ್ಥಾನದಲ್ಲಿ 8 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಳೆದ ಎರಡು ವರ್ಷಗಳ ಹಿಂದೆ ತಾಯಿ ಮಗುವಿನ ಆರೋಗ್ಯದ ದೃಷ್ಟಿಯಿಂದ ಸುಸಜ್ಜಿತ ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಕಳೆದ ಮಾರ್ಚ್‌ 22ಕ್ಕೆ ಆಸ್ಪತ್ರೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಬೇಕು ಎಂದು ಗುತ್ತಿಗೆದಾರರಿಗೆ ಸರ್ಕಾರ ಷರತ್ತು ಬದ್ಧ ಗಡುವು ನೀಡಿತ್ತು.

ಅವಧಿ ವಿಸ್ತರಣೆ: ಆದರೆ, ಕಾಮಗಾರಿ ಆರಂಭಗೊಂಡು 2 ವರ್ಷ ಕಳೆದರೂ ಇಂದಿಗೂ ಕಟ್ಟಡ ಪೂರ್ಣಗೊಂಡಿಲ್ಲ. ಕಾಮಗಾರಿ ಮಾತ್ರ ಆಮೆಗತಿಯಲ್ಲಿ ಸಾಗುತ್ತಿದೆ. ಗುತ್ತಿಗೆದಾರರ ವಿರುದ್ಧ ಕೆಂಡಮಂಡಲವಾದ ಸರ್ಕಾರ ಮಾರ್ಚ್‌ ತಿಂಗಳಿಂದ ಮತ್ತೆ 2 ತಿಂಗಳು ವಿಸ್ತರಣೆ ಮಾಡಿ ಅಷ್ಟರೊಳಗೆ ಕಾಮಗಾರಿ ಪೂರ್ಣಗೊಳಿಸುವ ತಾಕೀತು ಮಾಡಿತ್ತು. ಆದರೂ ಕಾಮಗಾರಿ ಅರ್ಪೂಣಗೊಂಡ ಹಿನ್ನೆಲೆಯಲ್ಲಿ ಮತ್ತೆ 2 ತಿಂಗಳ ಅವಧಿ ವಿಸ್ತಿರಿಸಿತ್ತು. ಇದೀಗ ಕಾಮಗಾರಿ ಷರತ್ತಿನ ಅವಧಿ ಪೂರ್ಣಗೊಂಡು ಸುಮಾರು 8 ತಿಂಗಳು ಕಳೆದರೂ ಆಸ್ಪತ್ರೆ ಲೋಕಾರ್ಪಣೆಯಾಗಿಲ್ಲ. ಸದ್ಯಕ್ಕೆ ಉದ್ಘಾಟನೆಯಾಗುವ ಲಕ್ಷಣವೂ ಕಾಣುತ್ತಿಲ್ಲ.

ಸುಮಾರು 30 ಹಾಸಿಗೆಗಳ ಸಾಮರ್ಥ್ಯ ಹೊಂದಿರುವ ತಾಯಿ ಮಗುವಿನ ಆರೈಕೆ ಆಸ್ಪತ್ರೆಯಲ್ಲಿ ವೈಜ್ಞಾನಿಕ ಉಪಕರಣಗಳ ಅಳವಡಿಕೆ ಸೇರಿದಂತೆ ಸುಸಜ್ಜಿತ, ಹೆರಿಗೆ ಆಸ್ಪತ್ರೆ ಸೇವೆ ತಾಲೂಕಿನ ಮಹಿಳೆಯರು ಮತ್ತು ಮಕ್ಕಳಿಗೆ ಲಭ್ಯವಾಗಬೇಕು. ಆದರೆ, ಬಲ್ಲ ಮೂಲಗಳ ಪ್ರಕಾರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗುತ್ತಿಗೆದಾರರ ಹಣದಾಸೆಗೆ ಬಲಿಯಾಗಿ ಕಾಮಗಾರಿ ವಿಳಂಬವಾದರೂ ಚಕಾರ ಎತ್ತುತ್ತಿಲ್ಲ. ಈ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಅಕ್ರೋಶ ವ್ಯಕ್ತವಾಗುತ್ತಿದೆ.

ಆಗ್ರಹ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಡಜನರೇ ಬಹುಸಂಖ್ಯೆಯಲ್ಲಿರುವ ಹಿಂದುಳಿದ ತಾಲೂಕು ಕೇಂದ್ರ ಸ್ಥಾನದ ತಾಯಿ ಮಗುವಿನ ಆಸ್ಪತ್ರೆ ಕಾಮಗಾರಿ ತ್ವರಿತಗತಿಯಲ್ಲಿ ಸಾಗಿ ಜನಸೇವೆಗೆ ಮುಂದಾಗುವಂತೆ ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮವಹಿಸಬೇಕು ಎಂದು ತಾಲೂಕಿನ ನಾಗರಿಕರು ಆಗ್ರಹಿಸಿದ್ದಾರೆ.

ಹಿಂದುಳಿದ ಎಚ್‌.ಡಿ.ಕೋಟೆ ತಾಲೂಕು ಕೇಂದ್ರ ಸ್ಥಾನದಲ್ಲಿ 8 ಕೋಟಿ ರೂ.ವೆಚ್ಚದಲ್ಲಿ ತಾಯಿ ಮಗುವಿನ ಆರೈಕೆ ಆಸ್ಪತ್ರೆ ನಿರ್ಮಾಣಗೊಳ್ಳುತ್ತಿರುವುದು ಸಂತಸದ ವಿಚಾರ. ಆದರೆ, ಕಾಮಗಾರಿ ಸಾಕಷ್ಟು ವಿಳಂಬವಾಗುತ್ತಿದೆ. ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕ ಸೇವೆ ಕಲ್ಪಿಸಬೇಕಿದೆ.
-ಎಚ್‌.ಎನ್‌.ನಾಗರಾಜು, ಸ್ಥಳೀಯ ನಿವಾಸಿ

ಹಿಂದುಳಿದ ಎಚ್‌.ಡಿ.ಕೋಟೆ ತಾಲೂಕಿನ ಅಭಿವೃದ್ಧಿಗೆ ಸರ್ಕಾರ ಅನುದಾನದ ಹೊಳೆಯನ್ನೇ ಹರಿಸುತ್ತದೆ. ಆದರೆ, ಅಧಿಕಾರಿಗಳು ಮತ್ತು ಚುನಾಯಿತಿ ಪ್ರತಿನಿಧಿಗಳು ಗುತ್ತಿಗೆದಾರರ ಬಳಿ ಇಂತಿಷ್ಟು ಪ್ರಮಾಣದಲ್ಲಿ ಹಣ ನೀಡಬೇಕೆನ್ನುವ ಒಪ್ಪಂದ ಮಾಡಿಕೊಂಡ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಲಿ, ಕಳಪೆಯಾಗಲಿ ಚಕಾರ ಎತ್ತುತ್ತಿಲ್ಲ.
-ಪಿ.ಸುರೇಶ್‌, ಯರಹಳ್ಳಿ

ಎಚ್‌.ಡಿ.ಕೋಟೆ ಪಟ್ಟಣದಲ್ಲಿ ನಿರ್ಮಿಸುತ್ತಿರುವ 8 ಕೋಟಿ ರೂ. ಅಂದಾಜು ವೆಚ್ಚದ ಆಸ್ಪತ್ರೆ ಕಟ್ಟಡ ಕಾಮಗಾರಿ ಈಗಾಗಲೇ ವಿಳಂಬವಾಗಿದೆ. ಇದೀಗ ಚುರುಕಾಗಿ ಕೆಲಸಗಳು ನಡೆಯುತ್ತಿವೆ. ಒಂದೆರಡು ತಿಂಗಳಲ್ಲಿ ಕಟ್ಟಡ ಪೂರ್ಣಗೊಂಡು ಲೋಕಾರ್ಪಣೆಯಾಗಲಿದೆ.
-ಭಾಸ್ಕರ್‌, ಆಡಳಿತಾಧಿಕಾರಿ, ಸಾರ್ವಜನಿಕ ಆಸ್ಪತ್ರೆ

* ಎಚ್‌.ಬಿ. ಬಸವರಾಜು

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.