ಚುನಾವಣಾ ಪ್ರಚಾರಕ್ಕೆ ಅಂಚೆ ಇಲಾಖೆ ದುರ್ಬಳಕೆ

Team Udayavani, Mar 15, 2019, 7:26 AM IST

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಹಾಗೂ ಪಕ್ಷದ ಪರ ಪ್ರಚಾರಕ್ಕೆ ಅಂಚೆಕಚೇರಿಗಳನ್ನು ದುರ್ಬಳಕೆ ಮಾಡಿಕೊಂಡಿರುವ ಮೈಸೂರು -ಕೊಡಗು ಕ್ಷೇತ್ರದ ಸಂಸದ ಪ್ರತಾಪ್‌ಸಿಂಹ ಹಾಗೂ ಸಹಕಾರ ನೀಡಿರುವ ಮೈಸೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಪ್ರಕಾಶ್‌ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್‌.ಶಿವರಾಮು ಆಗ್ರಹಿಸಿದ್ದಾರೆ.

ಈ ಸಂಬಂಧ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಅವರಿಗೆ ದೂರು ಸಲ್ಲಿಸಿರುವ ಅವರು, ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಸಂಸದ ಪ್ರತಾಪ್‌ ಸಿಂಹ ಅವರು, ತಮ್ಮ ಪಕ್ಷ ಮತ್ತು ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳುಳ್ಳ 50 ಸಾವಿರ ಕಿರುಹೊತ್ತಿಗೆಗಳನ್ನು ಮುದ್ರಿಸಿ ಮೈಸೂರಿನ ವಿವಿಧ ಅಂಚೆ ಕಚೇರಿಗಳ ಪೋಸ್ಟ್‌ಮನ್‌ಗಳ ಮೂಲಕ ಮನೆ ಮನೆಗೆ ಹಂಚಿಕೆ ಮಾಡಿಸಲಾಗಿದೆ. 

ವಿಳಾಸ ರಹಿತವಾದ ಈ ಕಿರುಹೊತ್ತಿಗೆಯನ್ನು ಹಂಚಲು ಪೋಸ್ಟ್‌ಮನ್‌ಗಳನ್ನು ಬಳಕೆ ಮಾಡಿಕೊಂಡಿರುವುದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ. ಜೊತೆಗೆ ಸಂಸದ ಪ್ರತಾಪ್‌ ಸಿಂಹ ಅವರ ಕಿರುಹೊತ್ತಿಗೆಯನ್ನು ಪೋಸ್ಟ್‌ಮನ್‌ಗಳ ಮೂಲಕ ವಿತರಣೆ ಮಾಡಿಸುವಂತೆ ಅಧಿಕೃತ ಸುತ್ತೋಲೆ ಹೊರಡಿಸಿರುವ ಹಿರಿಯ ಅಂಚೆ ಅಧೀಕ್ಷಕ ಪ್ರಕಾಶ್‌ ಅವರನ್ನು ಕೂಡಲೇ ಅಮಾನತುಪಡಿಸಿ, ನಿಷ್ಪಕ್ಷಪಾತ ತನಿಖೆಗೆ ಒಳಪಡಿಸಬೇಕು.

ಜೊತೆಗೆ ಅಂಚೆ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿರುವ ಪ್ರತಾಪ್‌ಸಿಂಹ ಅವರನ್ನು ಕಣದಿಂದ ಅನರ್ಹಗೊಳಿಸಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಮೈಸೂರು ನಗರ ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಮಹೇಶ್‌ ಗೌಡ, ಜಿಲ್ಲಾ ಕಾಂಗ್ರೆಸ್‌ ಓಬಿಸಿ ವಿಭಾಗದ ಪ್ರಧಾನ ಕಾರ್ಯದರ್ಶಿ ಕಾಡನಹಳ್ಳಿ ಸ್ವಾಮಿಗೌಡ, ಮುಖಂಡರಾದ ಸತೀಶ್‌ಕುಮಾರ್‌, ಜಾಕೀರ್‌ ಹುಸೇನ್‌, ಪ್ರಸನ್ನ ದೊಡ್ಡುಂಡಿ ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ