ದೇಸಿ ಪದ ಕೇವಲ ಕೀರ್ತನ ಸಾಹಿತ್ಯಕ್ಕಷ್ಟೇ ಅರ್ಥೈಸುವಂತಹದ್ದಲ್ಲ

Team Udayavani, Feb 26, 2020, 3:00 AM IST

desi-pada

ಮೈಸೂರು: ಒಂದು ಭಾಷೆಯಲ್ಲಿನ ಪದ ಪದವಾಗಿ ಉಳಿಯದೇ ಅದು ಪಾರಿಭಾಷಿಕವಾಗಿ ಇರಬೇಕು ಎಂದು ಹಿರಿಯ ವಿದ್ವಾಂಸ ಪ್ರೊ.ಆರ್‌.ವಿ.ಎಸ್‌.ಸುಂದರಂ ಹೇಳಿದರು. ಭಾರತೀಯ ಭಾಷಾ ಸಂಸ್ಥೆ, ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ವತಿಯಿಂದ ಮಾನಸ ಗಂಗೋತ್ರಿ ಆವರಣದ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಕೀರ್ತನ ಸಾಹಿತ್ಯ: ಮಾರ್ಗ ಮತ್ತು ದೇಸಿ ಕುರಿತು 5 ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ನಮ್ಮತನ ಕಾಪಾಡಿ: ಮಾರ್ಗ ಮತ್ತು ದೇಸಿ ಎಂಬ ಪದ ಕೇವಲ ಕೀರ್ತನ ಸಾಹಿತ್ಯಕ್ಕೇ ಅರ್ಥೈಸುವಂತದ್ದಲ್ಲ. ಇಡೀ ಕನ್ನಡ ಸಾಹಿತ್ಯಕ್ಕೆ ಅರ್ಥೈಸುವಂತಹದ್ದು. ಶೆರ್ಡನ್‌ ಪೊಲಾಕ್‌ ಹೇಳಿದಂತೆ ತಮಿಳಿಗರು ತಮಿಳಿಗಾಗಿ ಸಾಹಿತ್ಯ ಬರೆಯುತ್ತಾರೆ. ಆದರೆ, ಕನ್ನಡಿಗರು ಕನ್ನಡಕ್ಕಾಗಿ ಬರೆಯುವುದಿಲ್ಲ. ಹೀಗಾಗಿ, ನಾವು ನಮ್ಮ ತನವನ್ನು ಕಾಪಾಡಿಕೊಂಡು, ಅದರೊಂದಿಗೆ ಭಾರತೀಯ ಸಿದ್ಧಾಂತ ಸಮನ್ವಯಗೊಳಿಸಬೇಕು ಎಂದರು.

ಕವಿರಾಜಮಾರ್ಗ ಉತ್ತಮ ಕೃತಿ: ನಮಗೂ ಭಾರತೀಯತೆಗೂ ಕೊಡುಗೆಯಾಗುವ ಸಾಹಿತ್ಯ ಕೃತಿ ರಚಿಸಬೇಕು. ಇದಕ್ಕೆ ಉತ್ತಮ ಉದಾಹರಣೆ ಎಂದರೆ ಕವಿರಾಜ ಮಾರ್ಗ ಕೃತಿ. 9ನೇ ಶತಮಾನದಲ್ಲಿ ಪ್ರಪಂಚದ ಯಾವುದೇ ಭಾಷೆಗಳಲ್ಲಿ ಕವಿರಾಜ ಮಾರ್ಗದಂತಹ ಮತ್ತೂಂದು ಕೃತಿ ಹೊರಬಂದಿಲ್ಲ. ಇದನ್ನು ಗಮನಿಸಿದರೆ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಇರುವ ಪ್ರಾಚೀನತೆ ಮತ್ತು ವೈಶಿಷ್ಟ ತಿಳಿಯಬಹುದಾಗಿದೆ ಎಂದರು.

ಭಾರತೀಯ ಭಾಷಾ ಸಂಸ್ಥಾನದ ನಿರ್ದೇಶಕ ಪ್ರೊ.ಡಿ.ಜಿ.ರಾವ್‌, ಇಂದಿನ ತಲೆಮಾರು ಪ್ರಾಚಿನ ಸಾಹಿತ್ಯದಿಂದ ವಿಮುಖರಾಗುತ್ತಿದ್ದಾರೆ. ಕನ್ನಡ ಭಾಷೆಯ ಶಾಸ್ತ್ರೀಯ ಅಧ್ಯಯನ ತೀರ ಕಡಿಮೆಯಾಗಿದೆ. ಪ್ರಾಚೀನ ಸಾಹಿತ್ಯ ಅಧ್ಯಯನ ಮಾಡುವುದು ನಿಷ್ಪ್ರಯೋಜಕ ಎಂದು ಭಾವಿಸಲಾಗಿದೆ. ಕನ್ನಡವನ್ನು ಶಾಸ್ತ್ರೀಯ ಕ್ರಮದಲ್ಲಿ ಅಭ್ಯಾಸ ಮಾಡುವ ಕೆಲಸವಾಗಬೇಕೆಂದರು.

ನಂತರ “ಕೀರ್ತನ ಸಾಹಿತ್ಯ: ಐತಿಹಾಸಿಕ ಮತ್ತು ಧಾರ್ಮಿಕ ಹಿನ್ನೆಲೆ’ ಕುರಿತು ಪ್ರೊ.ತಾಳ್ತಜೆ ವಸಂತಕುಮಾರ್‌, “ವ್ಯಾಸಕೂಟ ಮತ್ತು ದಾಸಕೂಟ’ ಕುರಿತು ಪ್ರೊ.ಕೇಶವ ಶರ್ಮ ಮಾತನಾಡಿದರು. ಭಾರತೀಯ ಭಾಷಾ ಸಂಸ್ಥಾನದ ಮುಖ್ಯಸ್ಥ ಫ‌ರ್ನಾಂಡಿಸ್‌, ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕ ಪ್ರೊ.ಕೆ.ಆರ್‌.ದುರ್ಗಾದಾಸ್‌, ಪ್ರಾಧ್ಯಾಪಕ ಪ್ರೊ. ತಾಳ್ತಜೆ ವಸಂತ್‌ಕುಮಾರ್‌ ಇದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.