3 ಡ್ಯಾಂಗಳಿದ್ದರೂ ಕೋಟೆ ಜನರಿಗಿಲ್ಲ ನೀರು


Team Udayavani, Apr 27, 2019, 5:00 AM IST

3damgal

ಎಚ್‌.ಡಿ.ಕೋಟೆ: ಬೇಸಿಗೆ ಪ್ರಾರಂಭವಾಗುತ್ತಿದಂತೆ ಗ್ರಾಮೀಣ ಪ್ರದೇಶದ ಜನರಿಗೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಿ ಎಂದು ಸರ್ಕಾರ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಕ್ಕೆ ಸೂಚಿಸಿ ಸಾಕಷ್ಟು ಅನುದಾನ ನೀಡಿದ್ದರೂ ನೀರಿನ ಹಾಹಾಕಾರ ಮಾತ್ರ ತಪ್ಪುತ್ತಿಲ್ಲ.

ಸಭೆ ಕರೆದು ಎಚ್ಚರಿಸುತ್ತಿದ್ದರೂ ಸ್ಥಳೀಯ ಅಧಿಕಾರಿಗಳು ಮಾತ್ರ ತಮಗೂ ಇದಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿರುವ ಕಾರಣ ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ತಲೆದೋರಿದ್ದು, ಕುಡಿಯುವ ನೀರಿಗಾಗಿ ಕಷ್ಟ ಪಡುವಂತ ದುಸ್ಥಿತಿ ಎದುರಾಗಿದೆ. ತಾಲೂಕಿನಲ್ಲಿ ಕಬಿನಿ, ನುಗು, ತಾರಕ ಜಲಾಶಯಗಳಿದ್ದರೂ ಬೇಸಿಗೆಯಲ್ಲಿ ನೀರಿಗಾಗಿ ಅಲೆದಾಡುವುದು ಮಾತ್ರ ತಪ್ಪುವುದಿಲ್ಲ.

ಅಂತರ್ಜಲ ಕುಸಿತ: ಒಂದು ಕಡೆ ಸುಡು ಬಿಸಿಲಿನ ತಾಪಮಾನ ದಿನೇ ದಿನೆ ಹೆಚ್ಚಾಗುತ್ತಿದ್ದು, ಅಂತರ್ಜಲದ ಮಟ್ಟ ಕುಸಿಯುತ್ತಿದೆ. ಗ್ರಾಮಕ್ಕೆ ಸರಬರಾಜು ಮಾಡುವ ಕೊಳವೆ ಬಾವಿಗಳಲ್ಲಿ ಅಂತರ್ಜಲ ಗಣನೀಯವಾಗಿ ಇಳಿಮುಖವಾಗುತ್ತಿದ್ದು, ಜೊತೆಗೆ ಅವೈಜ್ಞಾನಿಕ ಪೈಪ್‌ಲೈನ್‌ ಕೆಟ್ಟ ಮೋಟಾರುಗಳು ಸೇರಿದಂತೆ ಅನಿಯಮಿತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಗ್ರಾಮಗಳಲ್ಲಿನ ಜನರು ಹನಿ ಹನಿ ನೀರನ್ನು ಸಂಗ್ರಹಿಸಲು ತಮ್ಮ ದಿನ ನಿತ್ಯದ ಕೆಲಸಕ್ಕೆ ಹೋಗದೇ ದಿನಗಟ್ಟಲೇ ಕಾಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಕಾಡಂಚಿನಲ್ಲೂ ನೀರಿಲ್ಲ: ತಾಲೂಕಿನ ಹಿರೇಹಳ್ಳಿ ಹಾಗೂ ಕೊತ್ತನಹಳ್ಳಿ ಗ್ರಾಮ ಕಾಡಂಚಿನ ಗ್ರಾಮವಾಗಿದ್ದು, ತಾಲೂಕಿನ ಜೀವನಾಡಿ ಎನಿಸಿರುವ ತಾರಕಾ ಜಲಾಶಯ ಮಡಿಲಿನಲ್ಲಿದ್ದರೂ ಇಲ್ಲಿನ ಜನರು ಕುಡಿಯಲು ನೀರು ಸಿಗದೇ ನಿತ್ಯ ಪರದಾಡುತ್ತಿರುವ ಸ್ಥಿತಿ ಇದೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಸಮಸ್ಯೆ ದೂರಾಗಿಸುವ ಪ್ರಯತ್ನ ಮಾಡದೇ ಕೈಕಟ್ಟಿ ಕುಳಿತಿದ್ದಾರೆ.

ರೀಡ್ರಿಲ್ಲಿಂಗ್‌: ತಾಲೂಕು ಈ ಬಾರಿ ಬರಪೀಡಿತ ಪ್ರದೇಶವಾಗದೇ ಇದ್ದರೂ ಜನರು ಮತ್ತು ಜಾನುವಾರುಗಳು ಜೀವಿಸಲು ಅತ್ಯಮೂಲ್ಯವಾದ ಕುಡಿಯುವ ನೀರು ಸಮರ್ಪಕವಾಗಿ ಒದಗಿಸಲು ಸರ್ಕಾರ ಪಂಚಾಯತ್‌ ರಾಜ್‌ ಇಲಾಖೆ ಮೂಲಕ ಟಾಸ್ಕ್ಪೋರ್ಸ್‌ ಯೋಜನೆ ಅಗತ್ಯ ಇರುವ ಕಡೆ ಹೊಸದಾಗಿ ಕೊಳವೆ ಬಾವಿ ಕೊರೆಸಲು ಮತ್ತು ಅಂತರ್ಜಲ ಮಟ್ಟ ಕುಸಿದಿರುವ ಕೊಳವೆ ಬಾವಿಗಳಿಗೆ ರೀಡ್ರಿಲ್ಲಿಂಗ್‌ ಮಾಡಲು 25 ಲಕ್ಷ ರೂ. ಅನುದಾನ ನೀಡಿದೆ.

ನೀರಿಗಾಗಿ ಕಿ.ಮೀ. ನಡಿಗೆ: ಅದರೆ, ಇಲ್ಲಿನ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದಾಗಿ ಅನೇಕ ಗ್ರಾಮಗಳ ಜನರು ಹನಿ ಹನಿ ನೀರು ಸಂಗ್ರಹಿಸಲು ಕೂಲಿ ಕೆಲಸಕ್ಕೂ ಹೊಗದೆ ದಿನಗಟ್ಟಲೇ ಕಾದು ಕೂರಬೇಕಾದ ದುಸ್ಥಿತಿ ಉದ್ಭವಿಸಿದೆ. ಇನ್ನು ಕೆಲವರು ಮಕ್ಕಳು, ವಯಸ್ಸಾದವರು ಎನ್ನದೇ ಬಿಂದಿಗೆ ಹಿಡಿದು ಅಕ್ಕಪಕ್ಕದ ಜಮೀನಿನಲ್ಲಿರುವ ಕೊಳವೆ ಬಾವಿಗಳಿಂದ ಕಿ.ಮೀ.ಗಟ್ಟಲೆ ನಡೆದು ಕುಡಿಯುವ ನೀರನ್ನು ತರುತ್ತಿರುವ ದೃಶ್ಯ ಮನಕಲಕುತ್ತದೆ.

ಗ್ರಾಮದ ಜನರಿಗೆ ಕನಿಷ್ಠ ಕುಡಿಯುವ ನೀರು ಒದಗಿಸಲು ಉದಾಸೀನ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಜಿಲ್ಲಾ ಮತ್ತು ತಾಲೂಕು ಆಡಳಿತ ಸೂಕ್ತ ಕ್ರಮ ಕೈಗೊಂಡು ನಮ್ಮ ಸಂಕಷ್ಟಕ್ಕೆ ನೀಗಿಸಿ ಎಂದು ಹಿರೇಹಳ್ಳಿಯ ವೃದ್ಧೆ ಚಿನ್ನಮ್ಮ ಅವಲತ್ತುಕೊಳ್ಳುತ್ತಾರೆ. ಇನ್ನಾದರೂ ತಾಲೂಕು ಆಡಳಿತ ಹಾಗೂ ಕ್ಷೇತ್ರದ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಜನರು ಜೀವಿಸಲು ಅತ್ಯಮೂಲ್ಯವಾದ ಕುಡಿಯುವ ನೀರನ್ನು ಸಮರ್ಪಕವಾಗಿ ಒದಗಿಸಲು ಮುಂದಾಗಬೇಕಿದೆ.

ಹಣ ಬಂದಿದೆ, ಕ್ರಿಯಾಯೋಜನೆ ತಯಾರು: ಕುಡಿಯುವ ನೀರು ಸಂಬಂಧ ತೊಂದರೆ ಏರ್ಪಟ್ಟಾಗ ಹಿಂದೆ ಸುಮಾರು 5 ಲಕ್ಷ ರೂ. ವರೆಗೂ ತುರ್ತು ಕ್ರಮವಹಿಸಲು ಅವಕಾಶ ಇತ್ತು. ಈಗ ಸರ್ಕಾರದ ಹಂತದಲ್ಲೇ ಟೆಂಡರ್‌ ಪ್ರಕ್ರಿಯೆ ಆಗಬೇಕು. ಹೀಗಾಗಿ ಕೆಲವು ಕಡೆ ನೀರಿನ ಸಮಸ್ಯೆ ದೂರಾಗಿಸುವುದು ತಡವಾಗಿರಬಹುದು. ಅಯಾ ಗ್ರಾಮ ಪಂಚಾಯ್ತಿಯವರೇ ಕುಡಿಯುವ ನೀರಿಗೆ ಅನುದಾನ ಸದ್ಬಳಕೆ ಮಾಡಿಕೊಳ್ಳಲು ಸರ್ಕಾರ ಅವಕಾಶ ನೀಡಿದೆ. ಸರ್ಕಾರದಿಂದ ಕುಡಿಯುವ ನೀರು ಸಂಬಂಧ 25 ಲಕ್ಷ ರೂ. ಅನುದಾನ ಸದ್ಬಳಕೆ ಮಾಡಲಾಗಿದೆ. ಮತ್ತೆ 10 ಲಕ್ಷ ರೂ. ಅನುದಾನ ಬಂದಿದೆ. ಶೀಘ್ರ ಕ್ರಿಯಾಯೋಜನೆ ತಯಾರು ಮಾಡಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪಂಚಾಯತ್‌ ರಾಜ್‌ ಎಇಇ ಮಹೇಶ್‌ ತಿಳಿಸಿದ್ದಾರೆ.

* ಬಿ.ನಿಂಗಣ್ಣಕೋಟೆ

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.