ಚಾಮುಂಡಿ ಬೆಟ್ಟದಲ್ಲಿರುವವರನ್ನು ಒಕ್ಕಲೆಬ್ಬಿಸುವ ಯಾವುದೇ ಪ್ರಸ್ತಾಪ ಇಲ್ಲ; ಸ್ಪಷ್ಟನೆ
Team Udayavani, Jul 6, 2022, 6:21 PM IST
ಮೈಸೂರು:ಚಾಮುಂಡಿ ಬೆಟ್ಟದ ಮೇಲೆ ವಾಸವಾಗಿರುವವರನ್ನು ಸ್ಥಳಾಂತರಿಸುವ ಅಥವಾ ಒಕ್ಕಲೆಬ್ಬಿಸುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.
ಇಂದು ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚಾಮುಂಡಿ ಬೆಟ್ಟ ರೋಪ್ ವೇ ನಿರ್ಮಾಣ ವಿಷಯದ ಕುರಿತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಚಾಮುಂಡಿ ಬೆಟ್ಟದ ಅಭಿವೃದ್ಧಿ ಮತ್ತು ವಿವೇಚನಾರಹಿತ ಬೆಳವಣಿಗೆಗೆ ಕಡಿವಾಣ ಹಾಕುವ ಸಲುವಾಗಿ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕೆಂಬ ಅಭಿಪ್ರಾಯ ಜನಪ್ರತಿನಿಧಿಗಳಿಂದ ವ್ಯಕ್ತವಾಯಿತು.ಈ ಸಂದರ್ಭದಲ್ಲಿ ಇನ್ನು ಮುಂದೆ ಹೊಸದಾಗಿ ಮನೆ ಕಟ್ಟುವವರಿಗೆ ಬೆಟ್ಟದ ಕೆಳ ಭಾಗದಲ್ಲಿ ನಿವೇಶನ ನೀಡಲು ಜಾಗ ಗುರುತಿಸುವಂತೆ ಮುಡಾ ಅಧ್ಯಕ್ಷರನ್ನು ಕೇಳಿಕೊಳ್ಳಲಾಯಿತು. ಆದರೆ ಪ್ರಸ್ತುತ ವಾಸವಾಗಿರುವವರನ್ನು ಸ್ಥಳಾಂತರಿಸುವ ಅಥವಾ ಒಕ್ಕಲೆಬ್ಬಿಸುವ ಯಾವುದೇ ವಿಚಾರಗಳು ಪ್ರಸ್ತಾಪವಾಗಿಲ್ಲ ಎಂದರು.
ಕುಟುಂಬಗಳು ವರ್ಷ ವರ್ಷಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಮನೆ ಕಟ್ಟಿಕೊಳ್ಳಲು ನಿವೇಶನವನ್ನು ಬೆಟ್ಟದ ಕೆಳಭಾಗದಲ್ಲಿ ಗುರುತಿಸುವಂತೆ ಸೂಚಿಸಲಾಯಿತೇ ಹೊರತು ಇದ್ದವರನ್ನು ಸ್ಥಳಾಂತರ ಅಥವಾ ಒಕ್ಕಲೆಬ್ಬಿಸುವ ಅಭಿಪ್ರಾಯವನ್ನು ಯಾರೂ ಕೊಟ್ಟಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿ: ಧ್ರುವನಾರಾಯಣ್ ಮನವಿ
ಸುಶಿಕ್ಷಿತರಲ್ಲಿಯೇ ಹೆಚ್ಚುತ್ತಿದೆ ವರದಕ್ಷಿಣೆ ಪಿಡುಗು
ಮುನಿರತ್ನಗೆ ದೊಡ್ಡ ಇತಿಹಾಸವಿದೆ, ಅವರ ಬಗ್ಗೆ ಮಾತನಾಡುವುದಿಲ್ಲ: ಡಿಕೆ ಸುರೇಶ್ ವ್ಯಂಗ್ಯ
ಮಾನ ಮರ್ಯಾದೆ ಇದೆಯೇನ್ರಿ…? ಕಾಮಗಾರಿ ವಿಳಂಬಿಸಿದ ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ
ಸಿದ್ದರಾಮಯ್ಯ- ಡಿಕೆಶಿ ಆಲಿಂಗನ: ಯತ್ನಾಳ್ ವ್ಯಂಗ್ಯವಾಗಿ ಹೇಳಿದ್ದೇನು?