ಗತಕಾಲದ ಚರ್ಚೆಯೊಡನೆ ಚಿಂತನೆ ಮುಖ್ಯ


Team Udayavani, Mar 4, 2020, 3:00 AM IST

gatakala

ಮೈಸೂರು: ಸಾಹಿತ್ಯಕ್ಕೂ ಮಾನವನ ಬದುಕಿಗೂ ಅವಿನಾಭಾವ ಸಂಬಂಧವಿದೆ. ಬದುಕು ಹಿಂದೆಂದಿಗಿಂತಲೂ ಇಂದು ಬಹಳಷ್ಟು ಬದಲಾಗಿದೆ. ವೇಗದ ಬದುಕಿನೊಂದಿಗೆ ವ್ಯವಹಾರವೂ ಸೇರಿಕೊಂಡಿದೆ. ಈ ಬದುಕಿಗೆ ಇಂದಿನ ಸಾಹಿತ್ಯದ ಸ್ಪಂದನೆ ಕುರಿತು ಆಲೋಚಿಸಬೇಕಾದ ಅಗತ್ಯತೆ ಇದೆ. ಗತಕಾಲದ ಚರ್ಚೆಯೊಡನೆ ವರ್ತಮಾನದ ಚಿಂತನೆ ಬಹಳ ಮುಖ್ಯ ಎಂದು ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ನೀಲಗಿರಿ ಎಂ. ತಳವಾರ್‌ ಹೇಳಿದರು.

ಜೆಎಸ್‌ಎಸ್‌ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಕನ್ನಡ ಸ್ನಾತಕೋತ್ತರ ಮತ್ತು ಸ್ನಾತಕ ವಿಭಾಗದಿಂದ ಏರ್ಪಡಿಸಿದ್ದ ಯುಜಿಸಿ ಪ್ರಾಯೋಜಿತ ಸಮಕಾಲೀನ ಕನ್ನಡ ಸಾಹಿತ್ಯ- ಸವಾಲು ಮತ್ತು ಸಾಧ್ಯತೆಗಳು ಕುರಿತ ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಸಂವೇದನಾಶೀಲತೆ ಕಡಿಮೆ: ಮಾನವನ ಇಂದಿನ ವ್ಯವಹಾರಿಕ ದೃಷ್ಟಿಯಿಂದ ವ್ಯಕ್ತಿಯ ಸೂಕ್ಷ್ಮತೆ ಮತ್ತು ಸಂವೇದನಾಶೀಲತೆ ಕಡಿಮೆಯಾಗುತ್ತಿದೆ. ಇದು ಅಧ್ಯಯನ ಮತ್ತು ಬರವಣಿಗೆಗೆ ಬಹುದೊಡ್ಡ ತೊಡಕಾಗಿದೆ. ಇಂದು ನಾವು ಬರಿ ಮಾತಿನ ಯುಗದಲ್ಲಿದ್ದೇವೆ. ಹಗಲು ರಾತ್ರಿಯೆನ್ನದೆ ಮಾತಿನಲ್ಲಿ ತೊಡಗಿದ್ದೇವೆ. ಈ ಮಾತು ಮೌನವನ್ನು ಕೊಲ್ಲುತ್ತಿದೆ. ಮೌನ ಮಾನವನ ಬದುಕಿಗೆ ಅತ್ಯಗತ್ಯವಾದುದು. ಇದರಿಂದ ಮಾತ್ರವೇ ಆತ್ಮಾವ‌ಲೋಕನ ಸಾಧ್ಯ. ಆದರೆ ಆತ್ಮಾವಲೋಕನವಿಲ್ಲದೆ ಅಭಿರುಚಿ ಹಾಳಾಗುತ್ತಿದೆ ಎಂದರು.

ಮಸುಕು ಮಸುಕಾದ ಬದುಕು ನಮ್ಮದಾಗಿದೆ: ನವೋದಯದ ನಾಡು-ನುಡಿಯ ಮತ್ತು ಪ್ರಕೃತಿ ಪ್ರೇಮದ ತೀವ್ರತೆ ನಮ್ಮಲ್ಲಿ ಮಾಯವಾಗಿದೆ. ಮಸುಕು ಮಸುಕಾದ ಬದುಕು ನಮ್ಮದಾಗಿದೆ. ಯಾವುದೂ ನಿಂತಿಲ್ಲ, ನಡೆಯುತ್ತಿದೆ. ಆದರೆ ಅದು ಸತ್ವವನ್ನು, ಸಾಮರ್ಥ್ಯವನ್ನು ಕಳೆದುಕೊಂಡಿದೆ. ಇಂತಹ ವಿಚಾರ ಸಂಕಿರಣಗಳಿಂದ, ಕಾರ್ಯಕ್ರಮಗಳಿಂದ ಅವಲೋಕನ ಮಾಡುವ ಮೂಲಕ ದಾರಿಯನ್ನು ಗುರುತಿಸಬೇಕಾಗಿದೆ, ಸರಿಯಾದ ದಾರಿಯತ್ತ ನಡೆಯಬೇಕಾಗಿದೆ ಎಂದರು.

ಇಂಗ್ಲಿಷ್‌ ವ್ಯಾಮೋಹ ಬಿಡಿ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೆಎಸ್‌ಎಸ್‌ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಬಿ. ನಿರಂಜನಮೂರ್ತಿ ಮಾತನಾಡಿ, ಕರ್ನಾಟಕದಲ್ಲಿರುವವರೆಲ್ಲರಿಗೂ ಕನ್ನಡ ಹೆತ್ತತಾಯಿಯಂತೆ. ಅದನ್ನು ಉಳಿಸಿ ಬೆಳೆಸಬೇಕಾದ್ದು ಪ್ರತಿಯೊಬ್ಬರ ಕರ್ತವ್ಯ. ಇಂದು ಕನ್ನಡ ಸಾಹಿತ್ಯದಲ್ಲಿ ಸೃಜನಶೀಲತೆ ಕಡಿಮೆಯಾಗಿದೆ. ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಸಮಯವಿದು. ಇಂಗ್ಲಿಷ್‌ ವ್ಯಾಮೋಹವನ್ನು ಬಿಡಬೇಕು. ಕನ್ನಡವನ್ನು ಉಳಿಸಿ ಬೆಳೆಸುವಲ್ಲಿ ಸರ್ಕಾರದ ಪಾತ್ರ ಗಮನಾರ್ಹವಾದುದು. ಈ ದಿಸೆಯಲ್ಲಿ ಸಮರ್ಪಕವಾದ ಕಾನೂನುಗಳನ್ನು,ಯೋಜನೆಗಳನ್ನು ತಂದಲ್ಲಿ ಕನ್ನಡದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ. ಮಹದೇವಪ್ಪ ಉಪಸ್ಥಿತರಿದ್ದರು. ಸೃಜನಶೀಲ ಸಾಹಿತ್ಯ ಕುರಿತು ಪ್ರೊ. ಅಮರೇಶ ನುಗಡೋಣಿ, ಸೃಜನೇತರ ಸಾಹಿತ್ಯ ಕುರಿತು ಪ್ರೊ. ಮಾಧವ ಪೆರಾಜೆ, ಅನುವಾದ ಸಾಹಿತ್ಯ ಕುರಿತು ಪ್ರೊ.ವಿ.ಬಿ. ತಾರಕೇಶ್ವರ ಮಾತನಾಡಿದರು. ದೇಶದ ವಿವಿಧ ವಿಶ್ವವಿದ್ಯಾನಿಲಯಗಳಿಂದ ಆಗಮಿಸಿದ್ದ ಪ್ರಾಧ್ಯಾಪಕರು ಮತ್ತು ಸಂಶೋಧನಾ ವಿದ್ಯಾರ್ಥಿಗಳು ಪ್ರಬಂಧಗಳನ್ನು ಮಂಡಿಸಿದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.