ಕಾರ್ಯಾಚರಣೆ ಮಧ್ಯೆಯೇ ವ್ಯಕ್ತಿ ಕೊಂದ ವ್ಯಾಘ್ರ

Team Udayavani, Feb 1, 2019, 7:05 AM IST

m5-karyacharane.jpg

ಎಚ್.ಡಿ.ಕೋಟೆ: ತಾಲೂಕಿನ ನಾಗರ ಹೊಳೆ ಉದ್ಯಾನದ ಡಿ.ಬಿ.ಕುಪ್ಪೆ ವ್ಯಾಪ್ತಿ ಯಲ್ಲಿ ಇಬ್ಬರನ್ನು ಕೊಂದಿದ್ದ ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯು ಐದು ಆನೆಗಳ ಸಹಾಯ ದಿಂದ ಗುರವಾರ ಕೂಡ ಕಾರ್ಯಾಚರಣೆ ನಡೆಸುತ್ತಿದ್ದರೆ, ಇತ್ತ ನರಭಕ್ಷಕ ಹುಲಿ ಮತ್ತೂಬ್ಬರನ್ನು ಬಲಿಪಡೆದಿದೆ. ಇದರೊಂದಿಗೆ ಮೂರು ಮಂದಿಯನ್ನು ಬಲಿ ಪಡೆದುಕೊಂಡಿದೆ.

ತಾಲೂಕಿನ ಡಿ.ಬಿ.ಕುಪ್ಪೆ ಗ್ರಾಪಂ ವ್ಯಾಪ್ತಿಯ ತಿಮ್ಮನಹೊಸಹಳ್ಳಿ ಗಿರಿಜನ ಹಾಡಿಯ ಕೆಂಚ ಆಲಿಯಾಸ್‌ ಬೊಳ್ಳ (55) ಗುರುವಾರ ಹುಲಿ ದಾಳಿಗೆ ಸಿಲುಕಿ ಮೃತಪಟ್ಟ ದುರ್ದೈವಿ. ಕೆಂಚ ತನ್ನ ಮೊಮ್ಮಗ 15 ವರ್ಷದ ಕುಳ್ಳನೊಂದಿಗೆ ಮೇಕೆ (ಆಡು) ಮೇಯಿಸಿ ಕೊಂಡು ನಾಗರಹೊಳೆ ಉದ್ಯಾನವನಕ್ಕೆ ಚಾಚಿಕೊಂಡಿರುವ ಸೇಬಿನಕೊಲ್ಲಿಗೆ ತೆರಳಿದ್ದರು.

ಮೇಕೆಗಳನ್ನು ಮೇಯಿಸಿ ಕೊಂಡು ತಿನ್ನಲು ಗೆಡ್ಡೆ ಗೆಣಸನ್ನು ಸಂಗ್ರಹಿಸಿಕೊಂಡು ಮನೆಯ ಕಡೆಗೆ ಬರುತ್ತಿದ್ದಾಗ ಹುಲಿ ಏಕಾಏಕಿ ದಾಳಿ ಮಾಡಿದೆ. ಈ ಸಂದರ್ಭದಲ್ಲಿ ಜೊತೆ ಯಲ್ಲಿದ್ದ ಮೊಮ್ಮಗ ಕುಳ್ಳ ತನ್ನ ಬಳಿಯಿದ್ದ ಕಬ್ಬಿಣದ ರಾಡಿನಿಂದ, ಕಲ್ಲಿನಿಂದ ಹುಲಿಗೆ ಹೊಡೆದು ಓಡಿಸಿದ್ದಾನೆ. ಅಷ್ಟೊತ್ತಿ ಗಾಗಲೇ ಹುಲಿ ದಾಳಿಯಿಂದ ಗಂಭಿರ ವಾಗಿ ಗಾಯಗೊಂಡ ಕೆಂಚ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಕಳೆದ ಡಿ.25 ರಂದು ಮಾನಿಮೂಲೆ ಹಾಡಿಯಲ್ಲಿ ಮಧು ಎಂಬ ಯುವಕನ ಮೇಲೆ ದಾಳಿ ಬಲಿ ಪಡೆದಿದ್ದ ವ್ಯಾಘ್ರ, ಕಳೆದ ಮೂರು ದಿನಗಳ ಹಿಂದಷ್ಟೇ ಜ.28 ರ ಸೋಮಾರ ಮಚ್ಚಾರು ಸಮೀಪದ ಹುಲ್ಲುಮಟ್ಲು ಗ್ರಾಮದ ಚಿನ್ನಪ್ಪನ ಮೇಲೆ ದಾಳಿ ನಡೆಸಿ ಕೊಂದು ಹಾಕಿತ್ತು. ಘಟನೆ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ನರಭಕ್ಷಕ ಹುಲಿ ಸೆರೆಗಾಗಿ ಹತ್ತಾರು ಟ್ರ್ಯಾಪಿಂಗ್‌ ಕ್ಯಾಮರಾಗಳನ್ನು ಆಳವಡಿಸಿ, 5 ಆನೆಗಳನ್ನು ಬಳಸಿಕೊಂಡು ಕಾರ್ಯಾಚರಣೆ ಕೈಗೊಂಡಿದ್ದರೂ ವ್ಯಾಘ್ರನ ಸುಳಿವು ಸಿಕ್ಕಿರಲಿಲ್ಲ.

ಗುರುವಾರ ಕೂಡ ಹುಲಿ ಸೆರೆಗಾಗಿ ಸಾಕಾನೆಗಳಾದ ಅರ್ಜುನ, ಕೃಷ್ಣ, ಭೀಮ, ಸರಳ ಮತ್ತು ಕುಮಾರಸ್ವಾಮಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಿ ಕೊಂಡು ಕಾಡಂಚಿನ ಗ್ರಾಮ ಹಾಗೂ ಕಬಿನಿ ಹಿನ್ನೀರಿನ ಸುತ್ತಮುತ್ತ ಸುಮಾರು 10 ಕಿ.ಮೀ.ಗೂ ಹೆಚ್ಚು ಕಾಡಿನ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸ ಲಾಗುತ್ತಿತ್ತು. ಈ ವೇಳೆ ತಿಮ್ಮನ ಹೊಸಳ್ಳಿ ಹಾಡಿ ಬಸ್‌ನಿಲ್ದಾಣದ ಸಮೀಪದಲ್ಲೇ ನರಭಕ್ಷಕ ಪ್ರತ್ಯಕ್ಷನಾಗಿ ದಾಳಿ ಮಾಡಿ ಕೆಂಚನನ್ನು ಕೊಂದು ಹಾಕಿದೆ.

ಬೋನ್‌ ಅಳವಡಿಕೆ: ಹುಲಿ ಸೆರೆಗೆ ಕೆಲವೆಡೆ ಬೋನು ಇರಿಸಿದ್ದು, ಸ್ಥಳದಲ್ಲಿ ವನ್ಯಜೀವಿ ತಜ್ಞ ವೈದ್ಯ ಡಾ.ಮುಜೀಬ್‌ ಅಹ್ಮದ್‌ ಸಹ ಬೀಡು ಬಿಟ್ಟಿದ್ದು, ಅರವಳಿಕೆ ಚುಚ್ಚುಮದ್ದನ್ನು ನೀಡಲು ತಯಾರಿ ಮಾಡಿಕೊಂಡಿದ್ದಾರೆ. ಡಿ.ಬಿ. ಕುಪ್ಪೆ ವನ್ಯಜೀವಿ ವಲಯದ ಆರ್‌ಎಫ್‌ಒ ಸುಬ್ರಹ್ಮಣ್ಯ ಮತ್ತು ಇನ್ನಿತರ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾ ಚರಣೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.