ನಾಗರಹೊಳೆ ಬಳಿ ಬಾರ್‌ ತೆರೆಯದಂತೆ ಹಾಡಿಗಳ ಆಗ್ರಹ

Team Udayavani, Jul 20, 2019, 3:00 AM IST

nagarahole

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಬಾವಲಿ ಗೇಟ್‌ ಬಳಿ ಮದ್ಯದಂಗಡಿಯನ್ನು ತೆರೆಯಲು ಬಂಡವಾಳಶಾಹಿಗಳು ಯತ್ನಿಸುತ್ತಿದ್ದು, ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಇದಕ್ಕೆ ಅವಕಾಶ ನೀಡಬಾರದೆಂದು ಆಗ್ರಹಿಸಿ ಇಲ್ಲಿನ ಗಿರಿಜನರು ಉದ್ಯಾನದ ಉಪ ಅರಣ್ಯ ಸಂರಕ್ಷಣಾಧಿಕಾರಿ(ಎಸಿಎಫ್‌)ಗೆ ಮನವಿ ಸಲ್ಲಿಸಿದರು.

ಹುಣಸೂರು ಪಟ್ಟಣದ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಗೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಂಗರಾಜ ಮಲ್ಲಾಡಿ ನೇತೃತ್ವದಲ್ಲಿ ಆಗಮಿಸಿದ ಹಾಡಿಯ ನಿವಾಸಿಗಳು ಎಸಿಎಫ್‌ ಎಸ್‌.ಆರ್‌. ಪ್ರಸನ್ನಕುಮಾರ್‌ಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ನಿಂಗರಾಜ ಮಲ್ಲಾಡಿ, ಎಚ್‌.ಡಿ.ಕೋಟೆ ತಾಲೂಕಿನ ಅಂತರಸಂತೆ ಹೋಬಳಿ ವ್ಯಾಪ್ತಿಯ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯ್ತಿಗೆ ಬಾವಲಿ ಗೇಟ್‌ ಗ್ರಾಮ ಒಳಪಟ್ಟಿದ್ದು, ಕರ್ನಾಟಕ ಮತ್ತು ಕೇರಳ ರಾಜ್ಯಗಳ ಗಡಿಭಾಗ‌ವಾಗಿದೆ. ಈ ಜಾಗದಲ್ಲಿ ಅರಣ್ಯ ಪ್ರದೇಶ, ಕಬಿನಿ ನದಿ, ಅಂತರರಾಜ್ಯ ಗಡಿರಸ್ತೆ ಇದೆ. 60ಕ್ಕೂ ಹೆಚ್ಚು ಗಿರಿಜನ ಕುಟುಂಬಗಳು ಹಾಡಿ(ಬಾವಲಿ ಗೇಟ್‌ ಹಾಡಿ)ಯಲ್ಲಿ ವಾಸಿಸುತ್ತಿವೆ.

ಹಾಡಿಯಿಂದ 20 ಮೀಟರ್‌ ಅಂತರದಲ್ಲಿ ಈ ಹಿಂದೆ ಕಬಿನಿ ಸ್ಟ್ರಿಂಗ್‌ ರೆಸಾರ್ಟ್‌ನಲ್ಲಿ ಸಿಎಲ್‌2 ಮತ್ತು ಸಿಎಲ್‌ 7 ಪರವಾನಗಿ ಹೊಂದಿದ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಇತ್ತು. ಇದರಿಂದ ಗಿರಿಜನರ ಬದುಕು ಅಯೋಮಯವಾಗಿತ್ತು. ಈ ಪ್ರದೇಶದಲ್ಲಿ ಅರಣ್ಯ ಹಕ್ಕು ಕಾಯ್ದೆ ಉಲ್ಲಂಘನೆಯಾಗಿತ್ತು ಹಾಗೂ ನಕ್ಸಲರ ಹಾವಳಿಯೂ ಹೆಚ್ಚಿತ್ತು.

ಗಿರಿಜನರಿಂದ ಬಂದ ಈ ಎಲ್ಲಾ ಆಕ್ಷೇಪಗಳನ್ನು ಪರಿಗಣಿಸಿ 2014ರಲ್ಲಿ ಅಂದಿನ ಜಿಲ್ಲಾಧಿಕಾರಿ ಶಿಖಾ ಅವರು ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ರದ್ದುಪಡಿಸಿದ್ದರು. ಆದರೆ, ಇದೀಗ ಮತ್ತೆ ಬಾರ್‌ ತೆರೆಯಲು ಪ್ರಯತ್ನಿಸಲಾಗುತ್ತಿದೆ. ಪ್ರಸ್ತುತ ಅಬಕಾರಿ ಜಿಲ್ಲಾಧಿಕಾರಿಗಳ ಸಂಬಂಧಿಗಳು ಬಾರ್‌ ತೆರೆಯಲು ಮುಂದಾಗಿದ್ದಾರೆನ್ನುವ ಮಾಹಿತಿ ಇದೆ ಎಂದು ದೂರಿದರು.

ಮೇಲಧಿಕಾರಿ ಜತೆ ಚರ್ಚೆ: ಮನವಿ ಸ್ವೀಕರಿಸಿ ಮಾತನಾಡಿದ ಎಸಿಎಫ್‌ ಎಸ್‌.ಆರ್‌.ಪ್ರಸನ್ನಕುಮಾರ್‌, ಗಿರಿಜನರ ಸಹಜ ಬದುಕಿಗೆ ಮಾರಕವಾಗುವಂತಹ ಯಾವೊಂದು ಕಾರ್ಯವನ್ನೂ ಸಹಿಸುವುದಿಲ್ಲ. ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಾವಲಿ ಗೇಟ್‌ ನಿವಾಸಿಗಳಾದ ಪೊನ್ನಮ್ಮ, ಮೀನಾಕ್ಷಮ್ಮ, ಶಾಂತಾ, ಮಾರಮ್ಮ, ಕರಿಯ, ಕಣ್ಣನ್‌, ವಿನೋದ್‌, ದಲಿತ ಮುಖಂಡರಾದ ಗಜೇಂದ್ರ, ದೇವೇಂದ್ರ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.